AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಟ್ಟಿ ಚಿನ್ನದ ಗಣಿ ಹೆಸರು ಬದಲಾವಣೆ, 5 ಟನ್ ಚಿನ್ನ ಉತ್ಪಾದನೆಯ ಗುರಿ: ಮುರುಗೇಶ್ ನಿರಾಣಿ

ರಾಜ್ಯದಲ್ಲಿ ಪ್ರಸ್ತುತ ‌1,700 ಕೆಜಿ (1.7 ಟನ್) ಚಿನ್ನದ ಉತ್ಪಾದನೆ ಆಗುತ್ತಿದೆ. ಇದನ್ನು 5,000 ಕೆಜಿಗೆ (5 ಟನ್) ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಹಟ್ಟಿ ಚಿನ್ನದ ಗಣಿ ಹೆಸರು ಬದಲಾವಣೆ, 5 ಟನ್ ಚಿನ್ನ ಉತ್ಪಾದನೆಯ ಗುರಿ: ಮುರುಗೇಶ್ ನಿರಾಣಿ
ಸಚಿವ ಮುರುಗೇಶ್​ ನಿರಾಣಿ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 18, 2021 | 6:54 PM

Share

ಬೆಂಗಳೂರು: ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿಯ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಚಿನ್ನದ ಗಣಿಯ ಹೆಸರನ್ನು ‘ಕರ್ನಾಟಕ ರಾಜ್ಯ ಹಟ್ಟಿ ಚಿನ್ನದ ಗಣಿ’ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಚಿನ್ನದ ಗಣಿಯ ಹೆಸರಿನಲ್ಲಿ ಕರ್ನಾಟಕದ ಬ್ರಾಂಡ್ ತರಲು ಈ ಬದಲಾವಣೆಗೆ ಸರ್ಕಾರ ಮುಂದಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಗುರುವಾರ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ‌1,700 ಕೆಜಿ (1.7 ಟನ್) ಚಿನ್ನದ ಉತ್ಪಾದನೆ ಆಗುತ್ತಿದೆ. ಇದನ್ನು 5,000 ಕೆಜಿಗೆ (5 ಟನ್) ಹೆಚ್ಚಿಸುವ ಗುರಿ ಹೊಂದಿದ್ದೇವೆ. ಹೈದರಾಬಾದ್ ಕರ್ನಾಟಕ ಭಾಗದ ಹಲವೆಡೆ ಚಿನ್ನದ ಮಳಿಗೆಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಕ್ವಾರಿ ನಡೆಸಲು ಅರ್ಜಿ ಸಲ್ಲಿಸಿದ 90 ದಿನದಲ್ಲಿ ಎನ್‍ಒಸಿ ಕಂದಾಯ, ಸಾರಿಗೆ, ಅರಣ್ಯ ಮತ್ತು ಪರಿಸರ ಇಲಾಖೆ ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು (Single Window System) ಜಾರಿಗೆ ತಂದು ಉದ್ಯಮಿಗಳ ಮನೆ ಬಾಗಿಲಿಗೆ 90 ದಿನಗಳಲ್ಲಿ ಎನ್‍ಒಸಿ (ನಿರಪೇಕ್ಷಣ ಪತ್ರ) ತಲುಪಿಸುವ ವ್ಯವಸ್ಥೆಯನ್ನು ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಘೋಷಣೆ ಮಾಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಈಚೆಗೆ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ಸ್ ಉದ್ಯಮಿಗಳಿಗೆ ಹಮ್ಮಿಕೊಂಡಿದ್ದ ಸುರಕ್ಷತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಲು ಕ್ವಾರಿ ಮತ್ತು ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಅನುಕೂಲವಾಗುವಂತೆ ನಾಲ್ಕು ಇಲಾಖೆಗಳನ್ನು ಒಳಗೊಂಡ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡಿ ಅರ್ಜಿ ಸಲ್ಲಿಸಿದ 90 ದಿನದೊಳಗೆ ಉದ್ಯಮಿದಾರರ ಮನೆ ಬಾಗಿಲಿಗೆ ಇಲಾಖೆ ವತಿಯಿಂದಲೇ ಎನ್‍ಒಸಿ ಪತ್ರಗಳನ್ನು ತಲುಪಿಸುವ ವ್ಯವಸ್ಥೆ ಜಾರಿ ಮಾಡಲಿದ್ದೇವೆ ಎಂದು ಪ್ರಕಟಿಸಿದರು. ಉದ್ದಿಮೆದಾರರು ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಕರಾವಳಿ ಭಾಗದಲ್ಲಿ ಪ್ರತ್ಯೇಕವಾಗಿ ಮಂಗಳೂರಿನಲ್ಲಿ ಹಾಗೂ ರಾಜ್ಯದ ನಾಲ್ಕು ಕಂದಾಯ ಭಾಗಗಳಲ್ಲಿ ಗಣಿ ಅದಾಲತ್ ನಡೆಸಲಾಗುವುದು. ಇದರಿಂದ ಸ್ಥಳದಲ್ಲಿ ಉದ್ದಿಮೆದಾರರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜನಸ್ನೇಹಿ ಹಾಗೂ ಜನಪರವಾಗಿ ಇರಬೇಕೆಂಬ ಗುರಿ ಇಟ್ಟುಕೊಂಡಿದೆ. 24/7 ಕೆಲಸ ಮಾಡಬೇಕು. ಉದ್ದಿಮೆದಾರರಿಗೆ ಯಾವುದೇ ರೀತಿಯ ಕಾನೂನಿನ ತೊಡಕು ಉಂಟಾಗದಂತೆ ಸರಳೀಕರಣವಾಗಿ ಉದ್ದಿಮೆ ನಡೆಸಲು ವೇದಿಕೆ ಕಲ್ಪಿಸಿಕೊಡುವುದು ನಮ್ಮ ಮುಖ್ಯ ಗುರಿ ಎಂದರು.

ಇದನ್ನೂ ಓದಿ: 10 ಲಕ್ಷಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆ ಕಟ್ಟೋರಿಗೆ ಉಚಿತ ಮರಳು ಪೂರೈಕೆ ಬಗ್ಗೆ ಚಿಂತನೆ -ಸಚಿವ ನಿರಾಣಿ

ಇದನ್ನೂ ಓದಿ: ಮರಳು, ಕ್ರಷರ್ ಇಲ್ಲದೆ ನಮ್ಮ ಅಭಿವೃದ್ಧಿಯಾಗಲ್ಲ – ಗಣಿ ಸಚಿವ ಮರುಗೇಶ್ ನಿರಾಣಿ

Published On - 6:47 pm, Thu, 18 March 21