ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾದ ಜನವರಿ 21ರಂದು ದಾಸೋಹ ದಿನ ಆಚರಣೆ: ರಾಜ್ಯ ಸರ್ಕಾರದಿಂದ ಸೂಚನೆ

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈದಾಸೊಹ ದಿನದ ಘೋಷಣೆ ಮಾಡಿದ್ದರು.

ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾದ ಜನವರಿ 21ರಂದು ದಾಸೋಹ ದಿನ ಆಚರಣೆ: ರಾಜ್ಯ ಸರ್ಕಾರದಿಂದ ಸೂಚನೆ
ಶ್ರೀ ಶಿವಕುಮಾರ ಸ್ವಾಮೀಜಿ
Follow us
TV9 Web
| Updated By: guruganesh bhat

Updated on:Sep 03, 2021 | 6:38 PM

ಬೆಂಗಳೂರು: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು ದಾಸೋಹ ದಿನವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈಕುರಿತು ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಾಗ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ 2ನೇ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲೇ ಈದಾಸೊಹ ದಿನದ ಘೋಷಣೆ ಮಾಡಿದ್ದರು. ಇದೀಗ ಈ ದಾಸೋಹ ದಿನದ ಆಚರಣೆಗೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ.

ಸರಳ ದಸರಾ ಆಚರಣೆಗೆ ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಳೆದ ವರ್ಷದಂತೆಯೇ ಈ ವರ್ಷವೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಸರಾ ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಬಾರಿ ದಸರಾ ಉದ್ಘಾಟನೆಗೆ 150 ಜನರಿಗೆ ಅವಕಾಶವಿತ್ತು. ಜಂಬೂ ಸವಾರಿಗೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಬಾರಿ ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಿಸಲು ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚು ಜನರಿಗೆ ಅವಕಾಶ ನೀಡಬೇಕೆಂದು ಒತ್ತಡ ಬಂದಿದೆ ಎಂದು ಸಹ ಅವರು ತಿಳಿಸಿದರು.

ಇನ್ನೂ ಒಂದು ಹಂತದ ಸಭೆ ನಡೆಸಿ ಈಕುರಿತು ನಿರ್ಧರಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸಚಿವ ಎಸ್​ ಟಿ ಸೋಮಶೇಖರ್, ಸೆಪ್ಟೆಂಬರ್ 20ರ ಬಳಿಕ ಕೊವಿಡ್ ಸ್ಥಿತಿಗತಿ ತಿಳಿದುಕೊಂಡು ಅನುಮತಿ ನೀಡುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ಇದನ್ನೂ ಓದಿ:

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ತುಮಕೂರು ಸಿದ್ದಗಂಗಾ ಮಠದ ಸ್ವಾಮೀಜಿ

(Karnataka Government directs Shivakumar Swamijis Lingaikya day January 21 as Dasoha Dina)

Published On - 6:23 pm, Fri, 3 September 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ