AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆ ರದ್ದು, 1,777 ಎಕ್ರೆ ಜಮೀನಿಗಾಗಿ 1198 ದಿನ ನಡೆದ ರೈತರ ಹೋರಾಟಕ್ಕೆ ಜಯ

3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಇದರೊಂದಿಗೆ ರೈತರ ಬೃಹತ್ ಹೋರಾಟಕ್ಕೆ ಜಯಸಿಕ್ಕಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ. ಹಾಗಾದ್ರೆ, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಏನೆಲ್ಲಾ ತೀರ್ಮಾನಕೈಗೊಳ್ಳಲಾಯ್ತು ಎನ್ನುವ ವಿವರ ಇಲ್ಲಿದೆ.

ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆ ರದ್ದು, 1,777 ಎಕ್ರೆ ಜಮೀನಿಗಾಗಿ 1198 ದಿನ ನಡೆದ ರೈತರ ಹೋರಾಟಕ್ಕೆ ಜಯ
Siddaramaiah
ರಮೇಶ್ ಬಿ. ಜವಳಗೇರಾ
|

Updated on:Jul 15, 2025 | 2:48 PM

Share

ಬೆಂಗಳೂರು, (ಜುಲೈ 15): ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಸುತ್ತಮುತ್ತಲಿನ ಒಟ್ಟ 13 ಹಳ್ಳಿಗಳ 1,777 ಎಕರೆ ಭೂ ಸ್ವಾಧೀನ (Land acquisition) ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಇಂದು(ಜುಲೈ 15) ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡಿರುವುದಾಗಿ ಸ್ಪಷ್ಟಪಡಿಸಿದರು. ಈ ಮೂಲಕ 1777 ಎಕರೆ ಕೃಷಿ ಜಮೀನು ಉಳಿಸಿಕೊಳ್ಳಲು 1197 ನಡೆದ ರೈತರ ಹೋರಾಟಕ್ಕೆ ಬಹುದೊಡ್ಡ ಜಯಸಿಕ್ಕಿದೆ.

ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.

ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದು ಸಂತಸ ವ್ಯಕ್ತಪಡಿಸಿದರು.

ಸಿಎಂ ಸಭೆ, ಸುದ್ದಿಗೋಷ್ಠಿಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮತ್ತು ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಮುಖ್ಯಾಂಶಗಳು:

  • ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ
  • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
  • ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
  •  ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
  • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.
  • 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
  • ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
  •  ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
  •  ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
  •  ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ ಎಂದು ಪ್ರಕಾಶ್ ರಾಜ್ ಅವರು ಹೇಳಿದರು.
  •  ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Tue, 15 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!