ಬೆಂಗಳೂರು: 7ನೇ ವೇತನ ಆಯೋಗದ (7th Pay Commission) ವರದಿ ಜಾರಿ ಸಂಬಂಧ ನೀ ಕೊಡೆ.. ನಾ ಬಿಡೆ ಎಂಬಂತ ಪರಿಸ್ಥಿತಿ ತಲೆದೋರಿದೆ. 7ನೇ ವೇತನ ಆಯೋಗದ ವರದಿ ಜಾರಿಗಾಗಿ ಮತ್ತು ಹಳೆ ಪಿಂಚಣಿ ವ್ಯವಸ್ಥೆಗೆ ಬೇಡಿಕೆಯಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ರಾಜ್ಯ ಸರ್ಕಾರಿ ನೌಕರರ(Karnataka government employees) ಸಂಘದ ಜತೆ ನಿನ್ನೆ(ಫೆ.28) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ನಡೆಸಿದ ಸಭೆ ನಡೆಸಿದರು. ಆದ್ರೆ, ನಡೆಸಿದ ಸಭೆ ವಿಫಲವಾಗಿದೆ. ತಡರಾತ್ರಿವರೆಗೂ ನಡೆದ ಮ್ಯಾರಥಾನ್ ಮೀಟಿಂಗ್ ಬಳಿಕ ಮುಷ್ಕರಕ್ಕೆ ಕೊಟ್ಟಿರುವ ಕರೆಯನ್ನು ವಾಪಸ್ ಪಡೆಯದಿರಲು ಸರ್ಕಾರಿ ನೌಕರರ ಸಂಘ ನಿರ್ಧರಿಸಿದೆ. ಇದರಿಂದ ರಾಜ್ಯದಲ್ಲಿ ಇಂದು ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗುವ ಸಾಧ್ಯತೆಗಳಿವೆ.
ಇದನ್ನೂ ಓದಿ: Government Employees Strike: ಪಟ್ಟು ಬಿಡದ ಸರ್ಕಾರಿ ನೌಕರರು; ಸಂಧಾನ ಮಾತುಕತೆ ವಿಫಲ, ಮುಷ್ಕರ ಅಚಲ
ಸರ್ಕಾರದ ಜತೆ ಮೊದಲ ಸುತ್ತಿನ ಸಭೆ ಬಳಿಕ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಸಭೆಯಲ್ಲಿ ಬೇಡಿಕೆ ಈಡೇರಿಕೆ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿಲ್ಲ, ಭರವಸೆ ನೀಡಿದ್ದಾರೆ. ಸಂಘದ ಪದಾಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸ್ತೇವೆ. ಸಭೆಯಲ್ಲಿ ಕೈಗೊಳ್ಳುವ ನಿರ್ಧಾರದ ಬಗ್ಗೆ ಸಿಎಂ ಗಮನಕ್ಕೆ. ಸಿಎಂ ಜತೆ ಮತ್ತೆ ಸಭೆ ನಂತರ ಅಂತಿಮ ನಿರ್ಧಾರ ಪ್ರಕಟಿಸುತ್ತೇವೆ ಎಂದರು. ಈವರೆಗೆ ನಡೆದ ಸಭೆ ಸಫಲವೂ ಆಗಿಲ್ಲ, ವಿಫಲವೂ ಆಗಿಲ್ಲ. ಸರ್ಕಾರದ ಜತೆ ಯಾವುದೇ ಸಂಘರ್ಷವೂ ಇಲ್ಲ. ಆದ್ರೆ ಮುಷ್ಕರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
7ನೇ ವೇತನ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರು ಇಂದಿನಿಂದ(ಮಾರ್ಚ್ 01) ಮುಷ್ಕರ ಮುಂದುವರಿಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಧ್ಯರಾತ್ರಿವರೆಗೂ ನಡೆದ ಸಂಧಾನ ಸಭೆ ಯಶಸ್ವಿಯಾಗಿಲ್ಲ. ಬೊಮ್ಮಾಯಿಯವರ ಭರವಸೆಗೆ ಸಾರಿಗೆ ನೌಕರರು ಪಟ್ಟು ಸಡಿಲಿಸುತ್ತಿಲ್ಲ. ಹೀಗಾಗಿ ಮುಷ್ಕರ ಮುಂದುವರಿಯಲಿದೆ. ಇಂದು ರಾಜ್ಯ ಎಲ್ಲಾ ಸರ್ಕಾರಿ ಇಲಾಖೆಗಳು ಏಕಕಾಲದಲ್ಲಿ ಬಂದ್ ಆಗಲಿವೆ. ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಪೌರ ಕಾರ್ಮಿಕರು ಸೇರಿ ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಸುಮಾರು 40 ಸಂಘಗಳು ಬೆಂಬಲ ಸೂಚಿಸಿವೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ವಜನಿಕರ ಸರ್ಕಾರಿ ಕೆಲಸಗಳಲ್ಲಿ ವ್ಯತ್ಯಯವಾಗಲಿದೆ.
ಒಂದು ರೀತಿ ಇಡೀ ಕರ್ನಾಟಕವೇ ಬಂದ್ ಇದ್ದ ಹಾಗೆ. ಹೌದು.. ಯಾಕಂದ್ರೆ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ, ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸೇರಿದಂತೆ ಇತರೆ ಇಲಾಖೆಗಳ ನೌಕರರ ಸಂಘ ಸಹ ಈ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಇದರಿಂದ ಸುಮಾರು 10 ಲಕ್ಷ ಸರ್ಕಾರಿ ನೌಕರರರಿಂದ ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ. ಹೀಗಾಗಿ ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಲಭ್ಯವಿರುವುದಿಲ್ಲ. ಒಂದು ವೇಳೆ ಯಾವುದೇ ಸರ್ಕಾರಿ ಇಲಾಖೆಯಲ್ಲಿ ಏನೇ ಕೆಲಸ ಇದ್ದರೆ ಕಚೇರಿಗೆ ಹೋಗುವ ಮುನ್ನ ಖಚಿತಪಡಿಸಿಕೊಂಡು ಹೊಗಿ.
ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದ್ರೆ, ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ. 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ ಎಂದು ಬೆಂಗಳೂರಿನಲ್ಲಿ ಇಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ಸ್ಪಷ್ಟಪಡಿಸಿದ್ದಾರೆ.
ಇನ್ನು ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಎಲ್ಲಾ ಶಿಕ್ಷಕರು ಕೂಡ ಪ್ರೊಟೆಸ್ಟ್ ನಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ತರಗತಿಗಳು ನಡೆಯುವುದಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಶಾಲೆಗೆ ಬಂದರೂ ಪಾಠ ಮಾಡಲು ಶಿಕ್ಷಕರು ಇರಲ್ಲ. ಮಾರ್ಚ್ ಪರೀಕ್ಷೆ ತಿಂಗಳು ಆಗಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.
ನಿನ್ನೆ (ಫೆ.28) ಮಧ್ಯರಾತ್ರಿ 2.30ರ ವರೆಗೂ ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಭೆ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಇಂದು (ಮಾ.1) ಮತ್ತೊಂದು ಸುತ್ತಿನ ಸಭೆ ನಡೆಸುವ ಸಾಧ್ಯತೆಗಳಿವೆ. ಸದ್ಯಕ್ಕೆ ವೇತನ ಹೆಚ್ಚಳಕ್ಕೆ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 7ರಿಂದ 8 ಪರ್ಸೆಂಟ್ ವೇತನ ಹೆಚ್ಚಳಕ್ಕೆ ಸಿಎಂ ತೀರ್ಮಾನಿಸಿದ್ದಾರೆ. ಆದ್ರೆ, ನೌಕರರು ಕನಿಷ್ಠ 20ರಷ್ಟು ವೇತನ ಏರಿಕೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
Published On - 6:53 am, Wed, 1 March 23