ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಶಿವಮೊಗ್ಗದಿಂದ ಎತ್ತಂಗಡಿ

| Updated By: ರಮೇಶ್ ಬಿ. ಜವಳಗೇರಾ

Updated on: Nov 08, 2023 | 12:23 PM

CS Shadakshari transferred From Shivamogga: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ಕೋಲಾರ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕರ ಹುದ್ದೆಗೆ ಎತ್ತಂಗಡಿ ಮಾಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಶಿವಮೊಗ್ಗದಿಂದ ಎತ್ತಂಗಡಿ
ಸಿ.ಎಸ್.ಷಡಕ್ಷರಿ
Follow us on

ಶಿವಮೊಗ್ಗ, (ನವೆಂಬರ್ 08): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ(Karnataka Government Employees Association President) ಸಿ.ಎಸ್.ಷಡಕ್ಷರಿ(CS Shadakshari )ಅವರನ್ನು ವರ್ಗಾವಣೆ ಮಾಡಲಾಗಿದೆ. ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆ ಶಿವಮೊಗ್ಗ(Shivamogga) ಲೆಕ್ಕಾಧೀಕ್ಷಕರ ಹುದ್ದೆಯಿಂದ ಕೋಲಾರ(Kolar) ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕರ ಹುದ್ದೆಗೆ ಎತ್ತಂಗಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ 71,45,920 ರೂ. ನಷ್ಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಅದರಂತೆ ಶಿವಮೊಗ್ಗ ಜಿಲ್ಲಾಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕುಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಅದರಂತೆ ಇದೀಗ .ಷಡಕ್ಷರಿಯವರನ್ನಿ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ: ಲಾಟರಿ ಗೆದ್ದಿರುವುದಾಗಿ ಹೇಳಿದ್ದರು, ಮುಂದೆ ಆ ನಿವೃತ್ತ ಮಹಿಳೆ ತಮ್ಮ ಜೀವಮಾನ ಉಳಿತಾಯದ 72 ಲಕ್ಷ ಕಳೆದುಕೊಂಡರು!

ಅಲ್ಲದೇ ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗಿತ್ತು. ಇದನ್ನೂ ಸಹ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ.

ವರ್ಗಾವಣೆ ಬಗ್ಗೆ ಷಡಕ್ಷರಿ ಹೇಳಿದ್ದೇನು?

ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಿರುವ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ವರ್ಗಾವಣೆಗೆ ಕಾರಣ ಗೊತ್ತಿಲ್ಲ, ಹಿನ್ನೆಲೆ ಗೊತ್ತಿಲ್ಲ. ಸಂಘದ ರಾಜ್ಯಾಧ್ಯಕ್ಷರು ಯಾವ ಪಕ್ಷದ ಪರವೂ ಇರಲ್ಲ. ಪಕ್ಷ ಆಧಾರಿತ ಸರ್ಕಾರಗಳು ಬಂದಾಗ ನಾವು ಸರ್ಕಾರಕ್ಕೆ ನಿಷ್ಠೆಯಿಂದ ಇರುತ್ತೇವೆ. ಮಧು ಬಂಗಾರಪ್ಪ ಪತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ್ದೇನೆ. ಅವರ ಪತ್ರದ ಬಗ್ಗೆ ಇವತ್ತಷ್ಟೇ ಗೊತ್ತಾಯ್ತು. ಈ ಪತ್ರದಲ್ಲಿ ಇರುವ ಪ್ರಕರಣದ ಬಗ್ಗೆ ಈಗಾಗಲೇ ಎರಡು ತನಿಖೆ ನಡೆದು ನನ್ನ ಪಾತ್ರ ಇಲ್ಲ ಎಂದು ವರದಿ ಕೊಟ್ಟಿದ್ದಾರೆ. ನಾನು ಯಾರಿಗೂ ಬೆದರಿಕೆ ಒಡ್ಡಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಎದುರಿಸಲು ಸಿದ್ಧ ಎಂದು ಸ್ಪಷ್ಟಪಡಿಸಿದರು.

ಪತ್ರದಲ್ಲಿ ಇರುವ ಪ್ರಕರಣದಲ್ಲಿ ನನಗೆ ನೋಟಿಸ್ ಏನೂ ಬಂದಿಲ್ಲ. ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆಗೂ ನನ್ನ ವರ್ಗಾವಣೆಗೂ ಸಂಬಂಧ ಇಲ್ಲ. ಅವಧಿ ಮುಂದೂಡಿಕೆಗೆ ನಾನು ವಿರೋಧಿಸಿಯೂ ಇಲ್ಲ. ಮಧು ಬಂಗಾರಪ್ಪ ಅವರ ಮೇಲೆ ಗೌರವ ಇದೆ. ನಮ್ಮ ಮಧ್ಯೆ ಸಮಸ್ಯೆ ಏನೂ ಇಲ್ಲ. ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಈ ವರ್ಗಾವಣೆ ಬಗ್ಗೆ ಮೊದಲು ಸರ್ಕಾರದ ಗಮನಕ್ಕೆ ತರುತ್ತೇನೆ. ಸರ್ಕಾರ ಕೋಲಾರಕ್ಕೆ ಹೋಗಲೇಬೇಕು ಅಂತ ಹೇಳಿದರೆ ಮುಂದೇನು ಅಂತ ನೋಡುತ್ತೇನೆ. ನಾನು ಯಡಿಯೂರಪ್ಪ ಅವರಿಗೆ ಆತ್ಮೀಯ ಅಂತಾ ಅಲ್ಲ, ಎಲ್ಲಾ ಸಚಿವರು ಮತ್ತು ಶಾಸಕರಿಗೂ ನಾನು ಆತ್ಮೀಯ. ನಾನು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೌಂಟರ್ ಕೊಡಲು ಹೋಗಲ್ಲ, ಕೊಟ್ಟರೆ ಅದು ಎಲ್ಲೋ ಹೋಗುತ್ತದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Wed, 8 November 23