ಬೆಂಗಳೂರು: 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ (ಮಾರ್ಚ್ 01) ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ (Karnataka Government Employees Strike) ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದನ್ನೂ ಓದಿ: Govt Employees Strike Live: ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ
NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರೆಸಿಕೊಳ್ಳುತ್ತೇವೆ. ಈಗ ಶೇ. 17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಘೋಷಣೆ ಮಾಡಿದರು.
ಇನ್ನು ಈ ಬಗ್ಗೆ ರಾಜ್ಯ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಈ ಹಿಂದೆಯೂ ಕೂಡ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದರು. ಅಧಿಕೃತ ಆದೇಶದ ನಿರೀಕ್ಷೆಯಲ್ಲಿದ್ದೇವೆ. ಇನ್ನು ಆರ್ಥಿಕ ಇಲಾಖೆ ಅಧಿಕಾರಿಗಳು ಸಭೆಗೆ ಕರೆದಿದ್ದು, ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
Published On - 11:09 am, Wed, 1 March 23