Govt Employees Strike Highlights: ಸರ್ಕಾರಿ ನೌಕರರ ಮುಷ್ಕರ ವಾಪಸ್: ಅಧ್ಯಕ್ಷ ಸಿ.ಎಸ್.ಷಡಕ್ಷರಿ
Karnataka Government Employees Strike Highlights: 7ನೇ ವೇತನ ಆಯೋಗ ವರದಿಯ ಶಿಫಾರಸುಗಳು ಹಾಗೂ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವ ಸಂಬಂಧ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿವೆ. ಇದರ ಮಧ್ಯೆ ಬೆಳಿಗ್ಗೆಯಿಂದ ಸರ್ಕಾರ ಮತ್ತು ಸರ್ಕಾರಿ ನೌಕರರ ಸಂಘದ ಮಧ್ಯೆ ಸಭೆ ನಡೆಯಿತು. ಕೊನೆಗೆ ಸರ್ಕಾರ, ನೌಕರರ ವೇತನವನ್ನು ಶೇ 17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಆದರೆ ನೌಕರರ ಸಂಘ ಪ್ರತಿಭಟನೆಯನ್ನು ಹಿಂಪಡೆದಿಲ್ಲ. ಕ್ಷಣ ಕ್ಷಣ ಮಾಹಿತಿ ಇಲ್ಲಿದೆ ನೋಡಿ
7ನೇ ವೇತನ ಆಯೋಗ (7th Pay Commission) ವರದಿಯ ಶಿಫಾರಸುಗಳು ಹಾಗೂ ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡುವ ಸಂಬಂಧ ಸರ್ಕಾರ ಮತ್ತು ಸರ್ಕಾರಿ ನೌಕರರ ಸಂಘದ ಮಧ್ಯೆ ಹಗ್ಗಜಗ್ಗಾಟ ಶುರುವಾಗಿದೆ. ಈ ಸಂಬಂಧ ನಿನ್ನೆ (ಫೆ.28) ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Vandita Sharma) ಅವರ ಜೊತೆ ಒಂದು ಬಾರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರೊಂದಿಗೆ ಒಂದು ಬಾರಿ ಸಭೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಸಿಎಂ ಬೊಮ್ಮಾಯಿಯವರೊಂದಗಿನ ಅತ್ತ ಸಫಲ ಇತ್ತ ವಿಫಲವಾಗಿದೆ ಎನ್ನಲು ಸಾಧ್ಯವಿಲ್ಲ. ಈ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆಯನ್ನು ವಾಪಸ್ ಪಡೆಯಲು ಹಿಂದೇಟು ಹಾಕಿದೆ. ಹೀಗಾಗಿ ಇಂದು (ಮಾ.1) ಸರ್ಕಾರಿ ಸೇವೆಗಳು ಬಂದ್ ಆಗಲಿದೆ. ಆಸ್ಪತ್ರೆಗಳಲ್ಲಿ ಓಪಿಡಿ ಇಲ್ಲ, ಶಾಲೆಯಲ್ಲಿ ಶಿಕ್ಷಕರಿಲ್ಲ, ಕಚೇರಿಗಳಲ್ಲಿ ಅಧಿಕಾರಿಗಳಿಲ್ಲ. ಇನ್ನಷ್ಟು ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ ನೋಡಿ
LIVE NEWS & UPDATES
-
Karnataka Government Employees Strike Live Updates: ಸರ್ಕಾರಿ ನೌಕರರ ಮುಷ್ಕರ ವಾಪಸ್: ಸಿ.ಎಸ್.ಷಡಕ್ಷರಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳವನ್ನು 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಸರ್ಕಾರ ಆದೇಶ ಹೊರಡಿಸಿದನ್ನು ಒಪ್ಪಿದ್ದೇವೆ. ಈ ಹಿನ್ನೆಲೆ ರಾಜ್ಯಾದ್ಯಂತ ಸರ್ಕಾರಿ ನೌಕರರ ಮುಷ್ಕರವನ್ನು ವಾಪಸ್ ಪಡೆಯುತ್ತೇವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
-
Karnataka Government Employees Strike Live Updates: 2 ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ 2 ಆದೇಶ ಹೊರಡಿಸಿದೆ. ಸರ್ಕಾರಿ ನೌಕರರ ವೇತನ ಶೇಕಡಾ 17ರಷ್ಟು ಹೆಚ್ಚಳ ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ. ಎನ್ಪಿಎಸ್ ನಿವೃತ್ತ ನೌಕರರು ಸೇರಿದಂತೆ 15 ಲಕ್ಷ ನೌಕರರಿಗೆ ಅನ್ವಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ.
-
Karnataka Government Employees Strike Live Updates: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳವನ್ನು 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ತಾತ್ಕಾಲಿಕ ಪರಿಹಾರ ಮಂಜೂರಾತಿ ಮಾಡಲಾಗಿದೆ. ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆ, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗೆ ಮಧ್ಯಂತರ ಪರಿಹಾರ ಮಂಜೂರು ಮಾಡಲಾಗಿದೆ.
Karnataka Government Employees Strike Live Updates: ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ; ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ
ಬೆಂಗಳೂರು: ಸರ್ಕಾರದ ಭರವಸೆಯನ್ನು ನಾನು ಒಪ್ಪುವುದಿಲ್ಲ. ಅಧಿಕೃತ ಆದೇಶ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ ನೋಡೋಣ. ಸರ್ಕಾರ ಆದೇಶದ ಪ್ರತಿ ಸಿಕ್ಕಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಈಗ ಅಧಿಕಾರಿಗಳು ಸಭೆ ಆಹ್ವಾನ ನೀಡಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
Karnataka Government Employees Strike Live Updates: ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ
ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ಮಾಡುತ್ತಿದ್ದು, ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ಸರ್ಕಾರಿ ನೌಕರರು ಮುಷ್ಕರ ಹಿಂಪಡೆಯುವಂತೆ ಮನವಿ ಮಾಡುತ್ತೇನೆ. ಮುಷ್ಕರ ವಾಪಸ್ ಪಡೆಯುವ ವಿಶ್ವಾಸವಿದೆ. ನೂತನ ಪಿಂಚಣಿ ಯೋಜನೆ ಬಗ್ಗೆಯೂ ವರದಿ ತರಿಸಿಕೊಳ್ಳುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಜಾರಿ ಆಗಿದೆ ವರದಿ ಪಡೆಯುತ್ತೇನೆ ACS ನೇತೃತ್ವದಲ್ಲಿ ಸಮಿತಿ ಮಾಡಿ 2 ತಿಂಗಳಲ್ಲಿ ವರದಿ ಪಡೆಯುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ನಿರ್ಧಾರ: ಮಧ್ಯಂತರ ಪರಿಹಾರ ವೇತನ ಘೋಷಿಸಿದ ಬೊಮ್ಮಾಯಿ
Karnataka Government Employees Strike Live Updates: ಸಚಿವಾಲಯ, ವಿಧಾನ ಸಭೆ, ಪರಿಷತ್ ಸಿಬ್ಬಂದಿಯಿಂದ ಮೌನ ಪ್ರಿಭಟನೆ
ಬೆಂಗಳೂರು: 7 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಚಿವಾಲಯ, ವಿಧಾನ ಸಭೆ, ವಿಧಾನ ಪರಿಷತ್ ಸಿಬ್ಬಂದಿಯಿಂದ ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಮೌನ ಪ್ರತಿಭಟನೆ ನಡೆದಿದೆ. ಸರ್ಕಾರ ಪ್ರತಿಭಟನೆ ಮಾಡಲು ಅವಕಾಶ ನೀಡಬಾರದು, ತಕ್ಷಣವೇ ನಮ್ಮ ಬೇಡಿಕೆ ಈಡೇರಿಸಬೇಕು. ನಾವು ಯಾವುದೇ ಬ್ಲಾಕ್ ಮೇಲ್ ಮಾಡುತ್ತಿಲ್ಲ, ಪ್ರತಿಭಟನೆ ನಮ್ಮ ಹಕ್ಕು. ನಾವು ಕೊರೊನಾ ಸಮಯದಲ್ಲಿ ಕೆಲಸ ಮಾಡಿದ್ದೇವೆ, ಪ್ರವಾಹದ ಸಂದರ್ಭದಲ್ಲಿ ದೇಣಿಗೆ ನೀಡಿದ್ದೇವೆ. ಪುಣ್ಯಕೋಟಿ ದತ್ತು ಯೋಜನೆಗೆ ದೇಣಿಗೆ ನೀಡಿದ್ದೇವೆ ಎಂದು ಹೇಳಿದರು.
Karnataka Government Employees Strike Live Updates: ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ
ಬೆಂಗಳೂರು: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್ ಕೋರ್ಸ್ ಬಳಿಯ ಸರ್ಕಾರಿ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಸಭೆ ಬಳಿಕ ಅಂತಿಮ ನಿರ್ಧಾರ ತಿಳಿಸಲಿದ್ದಾರೆ.
Govt Employees Strike Live: ಕೊಪ್ಪಳ ಜಿಲ್ಲಾಸ್ಪತ್ರೆಗೆ ರೋಗಿಗಳು ಬಂದಿರುವ ಕಾರಣ ಒಪಿಡಿ ಆರಂಭ
ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೊಪ್ಪಳ ಜಿಲ್ಲಾಸ್ಪತ್ರೆಗೆ ರೋಗಿಗಳು ಬಂದಿರುವ ಕಾರಣ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಒಪಿಡಿ ಆರಂಭಿಸಲಾಗಿದೆ.
Govt Employees Strike Live: ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ್ರೆ ಕ್ರಮದ ಎಚ್ಚರಿಕೆ
ರಾಜ್ಯ ಸರ್ಕಾರದಿಂದ ಸರ್ಕಾರಿ ಸಿಬ್ಬಂದಿಗೆ ಸುತ್ತೋಲೆ ಕಳಿಸಲಾಗಿದ್ದು ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾದ್ರೆ ಕ್ರಮದ ಎಚ್ಚರಿಕೆ ನೀಡಲಾಗಿದೆ.
Govt Employees Strike Live: ಬಾಗಲಕೋಟೆಯಲ್ಲಿ ಚಿಕಿತ್ಸೆ ಸಿಗದೆ ರೋಗಿಗಳ ಪರದಾಟ
ಸರಕಾರಿ ಆಸ್ಪತ್ರೆಯಲ್ಲಿ ಒಪಿಡಿ ಸೇವೆ ಸ್ಥಗಿತಗೊಂಡಿದ್ದು ಬಾಗಲಕೋಟೆಯಲ್ಲಿ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಮುಷ್ಕರದ ವಿಷಯ ತಿಳಿಯದೆ ಆಸ್ಪತ್ರೆಗೆ ಬಂದ ಬಡ ರೋಗಿಗಳು ವೈದ್ಯರಿಗಾಗಿ ಕಾದು ಕುಳಿತಿದ್ದಾರೆ. ಬಿಪಿ, ಶುಗರ್, ಉಸಿರಾಟ ತೊಂದರೆ ಕೆಮ್ಮಿನಿಂದ ಬಳಲುತ್ತಿರುವ ಬಡ ರೋಗಿಗಳು ಕೂಲಿ ಕೆಲಸ ಬಿಟ್ಟು ಆಸ್ಪತ್ರೆಗೆ ಬಂದ ಕೂತಿದ್ದಾರೆ. ಆ ಕಡೆ ಕೆಲಸವೂ ಇಲ್ಲ, ವೈದ್ಯರಿಂದ ಚಿಕಿತ್ಸೆಯೂ ಇಲ್ಲದೆ ನರಳುತ್ತಿದ್ದಾರೆ.
Govt Employees Strike Live: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಕೆಲ ಸಿಬ್ಬಂದಿ
7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದ್ದು ರಾಜ್ಯದ ಬಹುತೇಕ ಕಡೆ ಆಸ್ಪತ್ರೆ ಓಪಿಡಿ ಬಂದ್ ಆಗಿದೆ. ಆದ್ರೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೈಗೆ ಕಪ್ಪು ಪಟ್ಟಿ ಧರಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಎಂದಿನಂತೆ ಒಪಿಡಿ ಕಾರ್ಯ ನಿರ್ವಹಿಸುತ್ತಿದೆ.
Karnataka Government Employees Strike Live Updates: ಸರ್ಕಾರಿ ನೌಕರರ ಮುಷ್ಕರಕ್ಕೆ ಪೊಲೀಸರ ಅನುಮತಿ ಇಲ್ಲ
ಬೆಂಗಳೂರು: ಮುಷ್ಕರಕ್ಕೆ ಸರ್ಕಾರಿ ನೌಕರರು ಪೊಲೀಸರು ಅನುಮತಿ ಪಡೆದಿಲ್ಲ. ಹೀಗಾಗಿ ಸರ್ಕಾರಿ ನೌಕಕರಿಗೆ ಶಕ್ತಿಸೌಧ ಸೇರಿ ಸುತ್ತಮುತ್ತ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಸರ್ಕಾರಿ ನೌಕರರು ವಿಧಾನಸೌದ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಪ್ರತಿಭಟನೆ ನಡೆಸಿದರೆ ಕ್ರಮ ಕೈಗೊಳ್ಳಲಾಗುವುದು. ವಿಧಾನಸೌಧ, ವಿಕಾಸಸೌಧ, ಎಂಎಸ್ ಬಿಲ್ಡಿಂಗ್ ಸುತ್ತಮುತ್ತ ಹಾಗೇ ಸರ್ಕಾರಿ ಕಚೇರಿಗಳ ಬಳಿ ಪೊಲೀಸರನ್ನು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Karnataka Government Employees Strike Live Updates: ಬಿಬಿಎಂಪಿ ಎಲ್ಲ ಸೇವೆಗಳು ಬಂದ್, ಮುಷ್ಕರ ಆರಂಭ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯಲ್ಲಿ ಸರ್ಕಾರಿ ನೌಕರರು ಜಮಾಯಿಸಿದ್ದಾರೆ. ನೌಕರರು ಬಿಬಿಎಂಪಿ ಕಚೇರಿಗಳಿಗೆ ಬೀಗ ಹಾಕಿ ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆ ಬಿಬಿಎಂಪಿಯ ಎಲ್ಲ ಸೇವೆಗಳು ಬಂದ್ ಇರಲಿವೆ. ಹೆರಿಗೆ ಆಸ್ಪತ್ರೆ ಹಾಗೂ ರುಧ್ರಭೂಮಿಗಳು ಹೊರತುಪಡಿಸಿ ಎಲ್ಲ ಪ್ರಾಥಮಿಕ ಕೇಂದ್ರಗಳು ಬಂದ್ ಆಗಲಿವೆ.
Karnataka Government Employees Strike Live Updates: ಮುಷ್ಕರಕ್ಕೆ ದಾವಣಗೆರೆಯ 58 ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳು ಸಾಥ್
ದಾವಣಗೆರೆ: ಮುಷ್ಕರಕ್ಕೆ ದಾವಣಗೆರೆಯ 58 ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳು ಸಾಥ್ ನೀಡಿವೆ. ಸರ್ಕಾರಿ ನೌಕರರು ಬೆಳಗ್ಗೆಯಿಂದಲೇ ಮುಷ್ಕರಕ್ಕೆ ಸಿದ್ದವಾಗಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳು ಬಂದ್ ಇರಲಿವೆ. ತುರ್ತು ಸೇವೆಗಳನ್ನು ನಿರ್ವಹಿಸುವ ನೌಕರರು ಕಪ್ಪು ಪಟ್ಟಿ ಕಟ್ಟಿಕೊಂಡು ಸೇವೆಗೆ ಹಾಜರಾಗುತ್ತಿದ್ದಾರೆ. ಪ್ರತಿ ಇಲಾಖೆಗೆ ತೆರಳಿ ಸೇವೆಗೆ ಹಾಜರಾದ ನೌಕರರನ್ನು ಮನವೊಲಿಸಿ ವಾಪಸ್ಸು ಕಳುಹಿಸುವುದಕ್ಕೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ನೌಕರರ ಮುಷ್ಕರದಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ.
Karnataka Government Employees Strike Live Updates: SSLC ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ
7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರಕ್ಕೆ ಪ್ರೌಢ ಶಿಕ್ಷಕರ ಸಂಘ ಬೆಂಬಲ ಸೂಚಿದಿ ಹಿನ್ನಲೆ, 80 ಸಾವಿರ ಶಿಕ್ಷಕರು ಶಾಲೆಗಳಿಗೆ ಗೈರಾಗಿದ್ದಾರೆ. ಈ ಹಿನ್ನೆಲೆ ಇಂದು (ಮಾ.1) ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ. ಇಂದಿನ ಪರೀಕ್ಷೆಗೆ 8.40 ಲಕ್ಷ ವಿದ್ಯಾರ್ಥಿಗಳು ಹಾಜರಾಗಬೇಕಿತ್ತು.
Karnataka Government Employees Strike Live Updates:ವಿದ್ಯಾರ್ಥಿಗಳು ಶಾಲೆಗೆ ಹೋದ್ರು ಶಿಕ್ಷಕರು ಇರಲ್ಲ
ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳು ಸಂಘದ ಅಧ್ಯಕ್ಷ ಶಂಭುಲಿಂಗ ಗೌಡ ಸಹ ಮುಷ್ಕರಕ್ಕೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಎಲ್ಲಾ ಶಿಕ್ಷಕರು ಕೂಡ ಪ್ರೊಟೆಸ್ಟ್ ನಲ್ಲಿ ಭಾಗಿಯಾಗಲಿದ್ದು, ರಾಜ್ಯದಲ್ಲಿ ಶಾಲಾ ಕಾಲೇಜುಗಳಲ್ಲಿ ತರಗತಿಗಳು ನಡೆಯುವುದಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಶಾಲೆಗೆ ಬಂದರೂ ಪಾಠ ಮಾಡಲು ಶಿಕ್ಷಕರು ಇರಲ್ಲ. ಮಾರ್ಚ್ ಪರೀಕ್ಷೆ ತಿಂಗಳು ಆಗಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ.
Karnataka Government Employees Strike Live Updates: ಆಸ್ಪತ್ರಗಳಲ್ಲಿ OPD ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ
ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದರಿಂದ ಇಂದು ಓಪಿಡಿ ಸೇರಿದಂತೆ ಉಳಿದ ಸೇವೆಗಳು ಇರುವುದಿಲ್ಲ. ಆಸ್ಪತ್ರೆಯಲ್ಲಿ ತುರ್ತು ಸೇವೆ ಮಾತ್ರ ಲಭ್ಯವಿದೆ. ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಸೇವೆಗೆ ಹಾಜರಾಗುತ್ತಾರೆ. ಆದ್ರೆ, ಬೆಂಗಳೂರಿನಲ್ಲಿ 3 ಪ್ರಮುಖ ಆಸ್ಪತ್ರೆ, 105 ಪ್ರಾಥಮಿಕ ಆರೋಗ್ಯ ಕೇಂದ್ರ. 19 ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಓಪಿಡಿ ಇರುವುದಿಲ್ಲ ಎಂದು ಬೆಂಗಳೂರಿನಲ್ಲಿ ಇಂದು ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ವಿವೇಕ್ ದೊರೆ ಸ್ಪಷ್ಟಪಡಿಸಿದ್ದಾರೆ.
Published On - Mar 01,2023 9:23 AM