ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಸರ್ಕಾರವು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21 ರವರೆಗೆ ವಿಸ್ತರಿಸಿದೆ. ಹೊಸ ಡಿಜಿಪಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ ಕರ್ನಾಟಕ ಸರ್ಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲೋಕ್ ಮೋಹನ್​ ಅವರು 1987ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ.

ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಣೆ
ಅಲೋಕ್ ಮೋಹನ್​

Updated on: Apr 29, 2025 | 11:09 PM

ಬೆಂಗಳೂರು, ಏಪ್ರಿಲ್​ 29: ರಾಜ್ಯ ಪೊಲೀಸ್​ (Karnataka Police) ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ (Alok Mohan) ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ಮಂಗಳವಾರ (ಏ.29) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಜಿಪಿ ಅಲೋಕ್​ ಮೋಹನ್​ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಬುಧವಾರ (ಏ.30) ರಂದು ವಯೋನಿವೃತ್ತಿ ಹೊಂದಬೇಕಿದ್ದ ಡಿಜಿಪಿ ಅಲೋಕ್​ ಮೋಹನ್ ಅವರ ಸೇವಾವಧಿಯನ್ನು 22 ದಿವಸಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ಡಿಜಿಪಿ ಅಲೋಕ್ ಮೋಹನ್​ ಅವರು ತಮ್ಮ ಸೇವೆಯನ್ನು ಮೂರು ತಿಂಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಇದನ್ನೂ ಓದಿ
ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್​ ಗಿರಿನಾಥ್​ ವರ್ಗಾವಣೆ
ಬೆಂಗಳೂರು: ಕಂಟೋನ್ಮೆಂಟ್ ಬಳಿಯ ನೂರಾರು ಮರಗಳ ಕಡಿಯಲು ಸಿದ್ಧತೆ!
ಮೆಟ್ರೋ ಟಿಕೆಟ್​ ದರ ಏರಿಕೆ: ಸಮಿತ ವರದಿ ಬಹಿರಂಗಪಡಿಸಿ, ತೇಜಸ್ವಿ ಸೂರ್ಯ
ಅತ್ಯಾಚಾರ ಕೇಸ್: ಕೋರ್ಟ್​ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಪ್ರಜ್ವಲ್-ಭವಾನಿ!

ಈ ತಿಂಗಳ ಅಂತ್ಯಕ್ಕೆ ತಾವು (ಅಲೋಕ್ ಮೋಹನ್) ನಿವೃತ್ತಿಯಾಗುತ್ತಿರುವ ಕಾರಣ ಈ ಹುದ್ದೆಯಲ್ಲಿ ಎರಡು ವರ್ಷ ಪೂರೈಸಲು ಆಗುತ್ತಿಲ್ಲ. ಆದುದರಿಂದ ಸುಪ್ರೀಂಕೋರ್ಟ್ ತೀರ್ಪನ ಪ್ರಕಾರ ಪೊಲೀಸ್​ ಮುಖ್ಯಸ್ಥರ ಹುದ್ದೆಗಳಿಗೆ ಎರಡು ವರ್ಷಗಳ ಅವಧಿ ನೀಡಬೇಕೆಂದು ವಿನಂತಿಸಿದ್ದರು. ಇದನ್ನು ಸರ್ಕಾರ ಪುರಸ್ಕರಿಸಿದೆ.

2023ರಲ್ಲಿ ಅಲೋಕ್ ಮೋಹನ್​ ಅವರು ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅಲೋಕ್ ಮೋಹನ್​ ಅವರು 1987ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Tue, 29 April 25