
ಬೆಂಗಳೂರು, (ಏಪ್ರಿಲ್ 16): ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ(ಡಿಜಿ-ಐಜಿಪಿ) ಎಂ.ಎ.ಸಲೀಂ (DG and IGP Dr MA saleem) ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ರಾಜ್ಯ ಸರ್ಕಾರ ಇಂದು ಏಪ್ರಿಲ್ 16) ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದರು. ಬಳಿಕ 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿದ್ದು, ಈ ವರ್ಷದ ಜೂನ್ನಲ್ಲಿ ನಿವೃತ್ತಿಯಾಗಬೇಕಿತ್ತು. ಆದ್ರೆ, 22.09.2006ರ ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ಎಂ.ಎ.ಸಲೀಂ ಅವರ ಸೇವಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:00 pm, Thu, 16 April 26