Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು ಕರ್ನಾಟಕ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ಇದರೊಂದಿಗೆ ನೌಕರರಿಗೆ ಅನುಕೂಲವಾಗಿದೆ.

Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ
ವಿಧಾನಸೌಧ
Edited By:

Updated on: Jun 30, 2023 | 2:22 PM

ಬೆಂಗಳೂರು: 2023-24ನೇ ಸಾಲಿನ ಗ್ರೂಪ್ ಎ, ಬಿ, ಸಿ ಡಿ ವರ್ಗದ ಕರ್ನಾಟಕ ಸರ್ಕಾರಿ ನೌಕರರ(karnataka govenament employees) ಸಾರ್ವತ್ರಿಕ ವರ್ಗಾವಣೆ (Employees Transfer) ಅವಧಿಯನ್ನು ರಾಜ್ಯ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ಜುಲೈ 3ರವರೆಗೆ ವಿಸ್ತರಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು(ಜೂನ್ 30) ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಮೂಲಕ ಎರಡನೇ ಬಾರಿಗೆ ಸಾರ್ವತ್ರಿಕ ವರ್ಗಾವಣೆಗೆ ಸಿದ್ದರಾಂಯ್ಯ ಸರ್ಕಾರ ಅವಧಿ ವಿಸ್ತರಣೆ ಮಾಡಿದಂತಾಗಿದೆ. ಇದರೊಂದಿಗೆ ತಮಗೆ ಬೇಕಾದ ಕಡೆಗೆ ವರ್ಗಾವಣೆ ಮಾಡಿಕೊಳ್ಳಲು ಪರದಾಡುತ್ತಿರುವ ನೌಕರರಿಗೆ ಅನುಕೂಲವಾಗಿದೆ.

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಿಸಿತ್ತು. ಬಳಿಕ ಹಲವು ವರ್ಷಗಳಿಂದ ವರ್ಗಾವಣೆಗೆ ಕಾದು ಕುಳಿತಿದ್ದ ಸರ್ಕಾರಿ ನೌಕರರಿಗೆ ಅನುಕೂಲ ಆಗುವಂತೆ ಸಾರ್ವತ್ರಿಕ ವರ್ಗಾವಣೆಗೆ ಜೂನ್ 1 ರಿಂದ 15 ರವರೆಗೆ ವರ್ಗಾವಣೆ ಮಾಡಲು ಆದೇಶ ಹೊರಡಿಸಿತ್ತು. ಬಳಿಕ ವರ್ಗಾವಣೆ ಅವಧಿ ಜೂ.30ರವರೆಗೆ ವಿಸ್ತರಣೆಗೊಸಿತ್ತು. ಈಗ ಮತ್ತೊಮ್ಮೆ ವಿಸ್ತರಣೆ ಮಾಡಿರುವ ಸರ್ಕಾರ ಜುಲೈ 3 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Published On - 1:15 pm, Fri, 30 June 23