Transport Employees: ರಾಮ ನವಮಿಯಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

|

Updated on: Mar 30, 2023 | 2:25 PM

Transport Employees Salary Hiked: ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

Transport Employees: ರಾಮ ನವಮಿಯಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್
ವಿಧಾನಸೌಧ
Follow us on

ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರ(Transport Employees) ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka government) ಅಧಿಕೃತ ಆದೇಶ ಹೊರಡಿಸಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು(ಮಾರ್ಚ್ 30) ಅದೇಶಿಸಿದೆ. ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು. ಆದ್ರೆ, ಸರ್ಕಾರ ಮಾರ್ಚ್​ 28ರಂದು  ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಗಳ ನೌಕರರು ಮಾ. 24ರಿಂದ ಬಸ್‌ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ನಾಲ್ಕೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದರು. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಸುಮಾರು 5 ಲಕ್ಷ ಕೋಟಿ ರೂ. ಸಾಲವಿದೆ. ಹಾಗಾಗಿ, ಮೂಲ ವೇತನದ ಶೇ 8ರಷ್ಟು ವೇತನ ಏರಿಕೆ ಮಾಡಲಾಗುವುದು ಎಂದು ಸಭೆಯಲ್ಲಿ ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ಸಂಘಟನೆಗಳ ಪದಾಧಿಕಾರಿಗಳು ಒಪ್ಪಿರಲಿಲ್ಲ. ಕೊನೆಗೆ ಶೇ. 10ರಷ್ಟು ವೇತನ ಏರಿಕೆಯ ಭರವಸೆ ನೀಡಿದ್ದರು. ಆದರೂ ಸಹ ಸಾರಿಗೆ ನೌಕರರು ಪಟ್ಟು ಸಡಿಲಿಸಿರಲಿಲ್ಲ. ಅಂತಿಮವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೇ 15ರಷ್ಟು ಹೆಚ್ಚಿಸುವುದಾಗಿ ಹೇಳಿ ಸಾರಿಗೆ ನೌಕರರ ಮನವೊಲಿಸಿದ್ದರು.

Published On - 2:17 pm, Thu, 30 March 23