ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ (CET Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನೇ ತಲೆದಂಡ ಮಾಡಿದೆ.

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ
ಕೆಇಎ ನಿರ್ದೇಶಕಿ ರಮ್ಯಾ ವರ್ಗಾವಣೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:May 16, 2024 | 5:39 PM

ಬೆಂಗಳೂರು, (ಮೇ 16): ಸಿಇಟಿ ಪರೀಕ್ಷೆಯಲ್ಲಾದ(CET Exam) ಸಾಲು ಸಾಲು ಎಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ (Ramya) ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ,

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು.  ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿಯೂ ಸಹ ಬೇಜವಾಬ್ದಾರಿ ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ದೂರದ ಊರುಗಳಲ್ಲಿ ಪರೀಕ್ಷೇ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ರಮ್ಯಾ ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜಗರಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:  CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕೆಇಎ ಎಡವಟ್ಟು

ಇದೀಗ ಅಂತಿಮವಾಗಿ ರಾಜ್ಯ ಸರ್ಕಾರ ಇಂದು (ಮೇ 16) ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ಎತ್ತಂಗಡಿ ಮಾಡಿದ್ದು,  ಇದೀಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎಚ್ ಪ್ರಸನ್ನ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 16 May 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ