AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Second Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಸ್ಥಳ ಗುರುತು, ಎಲ್ಲೆಲ್ಲಿ?

Bengaluru’s Second Airport: ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ಏರ್​ಪೋರ್ಟ್​ ನಿರ್ಮಾಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸದ್ಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್‌ ಟ್ರಾಫಿಕ್‌ ಭಾರೀ ಪ್ರಮಾಣದಲ್ಲಿ ಹೆಚ್ಚಿದ್ದು, ವಿಮಾನಗಳ ಹಾರಾಟದ ನಿರ್ವಹಣೆಯೇ ಸವಾಲಾಗಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಇದೀಗ ಅಂತಿಮವಾಗಿ ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಹಾಗಾದ್ರೆ, ಯಾವುವು ಮೂರು ಸ್ಥಳಗಳು ಎನ್ನುವ ವಿವರ ಇಲ್ಲಿದೆ.

Bengaluru Second Airport: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಸ್ಥಳ ಗುರುತು, ಎಲ್ಲೆಲ್ಲಿ?
Bengaluru 2nd Airport
ರಮೇಶ್ ಬಿ. ಜವಳಗೇರಾ
|

Updated on: Mar 20, 2025 | 3:28 PM

Share

ಬೆಂಗಳೂರು, (ಮಾರ್ಚ್ 20): ತಮಿಳುನಾಡು ಸರ್ಕಾರ ಹೊಸೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾಪವನ್ನು ಕೇಂದ್ರದ ಮುಂದಿಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ(Karnataka government )ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣಕ್ಕೆ ವೇಗ ನೀಡಿದೆ. ಇದಕ್ಕೆ ಪೂರಕವೆಂಬಂತೆ ಬೆಂಗಳೂರಿನಲ್ಲಿ(bengaluru) ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಮೂರು ಸ್ಥಳಗಳನ್ನು ಗುರುತಿಸಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಐದಾರು ಸ್ಥಳಗಳ ಬಗ್ಗೆ ಚರ್ಚೆಯಾಗಿದ್ದವು. ಆದ್ರೆ, ಅಂತಿಮವಾಗಿ ಐಡೆಕ್ ಸಂಸ್ಥೆ ನೀಡಿದ ವರದಿ ಅನುಗುಣವಾಗಿ ಮೂರು ಸ್ಥಳಗಳ ಹೆಸರನ್ನು ಶಾರ್ಟ್‌ ಲಿಸ್ಟ್‌ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ. ಐಡೆಕ್ ಸಂಸ್ಥೆಯು ಎಲ್ಲಾ ರೀತಿಯ ಅಧ್ಯಯನ ಮಾಡಿ ಕನಕಪುರ ರಸ್ತೆಯಲ್ಲಿ ಎರಡು ಸ್ಥಳಗಳು ಹಾಗೂ ನೆಲಮಂಗಲ – ಕುಣಿಗಲ್‌ ನಡುವೆ ಇರುವ ಸೋಲೂರು ಬಳಿ ಸ್ಥಳ ಗುರುತು ಮಾಡಿದ್ದು, ಇದೀಗ ಅದನ್ನೇ ಸಿದ್ದರಾಮಯ್ಯ ಸರ್ಕಾರ, ನಾಗರಿಕರ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ತಾಂತ್ರಿಕ ಸಂಭಾವ್ಯತೆ, ರಸ್ತೆ ಸಂಪರ್ಕ, ಮೆಟ್ರೋ ಸೇರಿದಂತೆ ಎಲ್ಲಾ ರೀತಿಯ ಅಧ್ಯಯನ ನಡೆಸಿ ಐಡೆಕ್ ಸಂಸ್ಥೆಯು ಈ ಮೂರು ಸ್ಥಳಗಳನ್ನು ಗುರುತಿಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ಈ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವರ್ಷಕ್ಕೆ 10 ಕೋಟಿ ಜನರನ್ನು ನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದ್ದು, ಇದಕ್ಕಾಗಿ 4,500 ರಿಂದ 5,000 ಎಕರೆ ಭೂಮಿ ಬೇಕಾಗಿದೆ. ಅದರಲ್ಲೂ ಏರ್‌ಪೋರ್ಟ್‌ ನಿರ್ಮಾಣಕ್ಕೆ ಸಮದಟ್ಟಾದ ಭೂಮಿಯ ಅವಶ್ಯಕತೆ ಇದೆ. ಸರ್ಕಾರದ ಭೂಮಿ ಹೆಚ್ಚಿರೋ ಕಡೆ ಏರ್‌ಪೋರ್ಟ್‌ ನಿರ್ಮಿಸಿದರೆ ನಿರ್ಮಾಣ ವೆಚ್ಚ ಕಡಿಮೆಯಾಗಲಿದೆ. ಸ್ಥಳ ಫೈನಲ್‌ ಮಾಡುವ ವೇಳೆ ಸರ್ಕಾರ ಇದನ್ನು ಪ್ರಮುಖವಾಗಿ ಗಮನಕ್ಕೆ ತೆಗೆದುಕೊಳ್ಳಲಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ಮೂರು ಸ್ಥಳಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ಗೆ ಮತ್ತೊಂದು ಗರಿ: ಸತತ 3ನೇ ಬಾರಿಗೆ ವಿಶ್ವದ ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ

ಇದು ಮೂರ್ನಾಲ್ಕು ತಿಂಗಳಿಂದ ಚರ್ಚೆಯಾಗುತ್ತಿದೆಯಾದರೂ ಕೂಡ ಸ್ಥಳ ಮಾತ್ರ ಅಂತಿಮವಾಗಿಲ್ಲ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿ ಅನೇಕ ಪ್ರಭಾವಿಗಳು ಬೆಂಗಳೂರು ದಕ್ಷಿಣದಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಪಟ್ಟು ಹಿಡಿದಿದ್ದರೆ, ಗೃಹ ಸಚಿವ ಜಿ ಪರಮೇಶ್ವರ್‌ ಸೇರಿ ಹಲವರು ತುಮಕೂರು ಜಿಲ್ಲೆಯ ಸೋಲೂರು ಬಳಿ ವಿಮಾನ ನಿಲ್ದಾಣ ನಿರ್ಮಾಣ ಆಗಲಿ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆ ಸರ್ಕಾರ ಎರಡು ಕಡೆ ಮೂರು ಸ್ಥಳಗಳಲ್ಲಿ ಅಗತ್ಯವಿರುವ ಭೂಮಿಯನ್ನು ಗುರುತಿಸಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪಟ್ಟಿ ಕಳುಹಿಸಿದೆ. ಕನಕಪುರ ರಸ್ತೆಯಲ್ಲಿ ಎರಡು ಸ್ಥಳಗಳನ್ನು ಗುರುತಿಸಿರುವುದರಿಂದ ಬೆಂಗಳೂರು ದಕ್ಷಿಣದಲ್ಲಿಯೇ ವಿಮಾನ ನಿಲ್ದಾಣ ಆಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದ ಬೆಂಗಳೂರು ಏರ್ಪೋರ್ಟ್
Image
ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣದ ಬಗ್ಗೆ ಎಂಬಿ ಪಾಟೀಲ್ ಹೇಳಿದ್ದಿಷ್ಟು
Image
ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಾ?

ಮುಂದಿನ ಪ್ರಕ್ರಿಯೆ ಏನು?

ಸದ್ಯ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೇಂದ್ರ ಅವಲೋಕಿಸಲಿದೆ. ರಾಜ್ಯ ನಿಗದಿಪಡಿಸಿರುವ 3 ಸ್ಥಳಗಳಿಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಆ ಬಳಿಕ ಒಂದನ್ನು ಅಂತಿಮಗೊಳಿಸಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತದೆ. ಈ ಬಳಿಕ ರಾಜ್ಯ ಸರ್ಕಾರ, ವಿಮಾನ ನಿಲ್ದಾಣ ನಿರ್ಮಾಣದ ಕಾರ್ಯ ಸಾಧ್ಯತೆಗಳ ಮೌಲ್ಯಮಾಪನವನ್ನು ಮಾಡಲಿದೆ. ಸಂಪೂರ್ಣ ಅಧ್ಯಯನದ ಬಳಿಕ ಮುಖ್ಯಮಂತ್ರಿಗಳ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಅದಾದ ಬಳಿಕ ವಿಮಾನ ನಿಲ್ದಾಣದ ನಿರ್ಮಾಣದ ಕಾಮಗಾರಿಗೆ ಚಾಲನೆ ಸಿಗಲಿದೆ. ಆದ್ರೆ, ಕೇಂದ್ರ ಸರ್ಕಾರ ಈ ಮೂರು ಸ್ಥಳಗಳ ಪೈಕಿ ಯಾವುದನ್ನು ಅಂತಿಮಗೊಳಿಸುತ್ತೆ ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ