AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

ಈ ಬಾರಿ ಬೆಂಗಳೂರಿನಲ್ಲಿ ಬಿಪಿಎಲ್​, ಎಪಿಎಲ್​ ಕಾರ್ಡ್​ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ವರ್ 2 ಮತ್ತು ಸರ್ವರ್ 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ
ರೇಷನ್​ ಕಾರ್ಡ್​
Poornima Agali Nagaraj
Poornima Agali Nagaraj| Edited By: ವಿವೇಕ ಬಿರಾದಾರ|

Updated on:Oct 16, 2023 | 11:32 AM

Share

ಬೆಂಗಳೂರು ಅ.16: ಬಿಪಿಎಲ್​​ (BPL) ಮತ್ತು ಎಪಿಎಲ್​ (APL) ಕಾರ್ಡ್​ದಾರರಿಗೆ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ. ಬಿಪಿಎಲ್​​ ಮತ್ತು ಎಪಿಎಲ್​​​​ ಕಾರ್ಡ್​​​​ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್​ ಕಾರ್ಡ್​​ ತಿದ್ದಪಡಿಗೆ ಹೆಚ್ಚಿನ ಸಮಯ‌ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ (Food Department) ಸಮಯವನ್ನು ವಿಸ್ತರಿಸಿದೆ. ಆದರೆ ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ  ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ

ಸರ್ವರ್​ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. 9 ದಿನಗಳಲ್ಲಿ ಒಟ್ಟು 60 ರಿಂದ 70 ಸಾವಿರದಷ್ಟು ಅರ್ಜಿಗಳು ಬಂದಿದ್ದು, ಆಹಾರ ಇಲಾಖೆ ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದೆ. ನೀಡಿರುವ ದಾಖಾಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Mon, 16 October 23

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ