ಬೆಂಗಳೂರು ಅ.16: ಬಿಪಿಎಲ್ (BPL) ಮತ್ತು ಎಪಿಎಲ್ (APL) ಕಾರ್ಡ್ದಾರರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ತಿದ್ದಪಡಿಗೆ ಹೆಚ್ಚಿನ ಸಮಯ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ (Food Department) ಸಮಯವನ್ನು ವಿಸ್ತರಿಸಿದೆ. ಆದರೆ ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ
ಸರ್ವರ್ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. 9 ದಿನಗಳಲ್ಲಿ ಒಟ್ಟು 60 ರಿಂದ 70 ಸಾವಿರದಷ್ಟು ಅರ್ಜಿಗಳು ಬಂದಿದ್ದು, ಆಹಾರ ಇಲಾಖೆ ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದೆ. ನೀಡಿರುವ ದಾಖಾಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:19 am, Mon, 16 October 23