ಬೆಂಗಳೂರು, (ಡಿಸೆಂಬರ್ 22): ಕೋವಿಡ್ (Coronavirus) ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ(cabinet sub committee) ರಚಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (dinesh gundu rao) ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಚಿವರಾದ ಹಚ್. ಸಿ.ಮಹದೇವಪ್ಪ, ಶರಣು ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ(ಡಿಸೆಂಬರ್ 21) ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ಮಾಡಿದ್ದರು. ಈ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದರು. ಅಲ್ಲದೇ ಕೋವಿಡ್ ನಿರ್ವಹಣೆಗೆಂದು ಒಂದು ಸಂಪುಟ ಉಪಸಮಿತಿ ರಚಿಸುವುದಾಗಿ ಹೇಳಿದ್ದರು. ಈ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟದಲ್ಲೂ ಸಮಿತಿ ರಚನೆಗೆ ತೀರ್ಮಾನಿಸಲಾಗಿತ್ತು.
ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊರೊನಾ: ಆಸ್ಪತ್ರೆಗಳಲ್ಲಿ ಸರ್ವ ಸಿದ್ಧ
ಅದರಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಸಂಪುಟ ಉಪಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಇನ್ನು ಈ ಸಮಿತಿ ಔಷಧ ಖರೀದಿ, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ವಿಷಯವನ್ನು ನಿರ್ಧರಿಸಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:39 pm, Fri, 22 December 23