ಪ್ರಜ್ವಲ್​ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿದ ಸರ್ಕಾರ, ಹೀಗಿದೆ ತನಿಖಾ ತಂಡ

Prajwal Revanna video leak case: ಹಾಸನದಲ್ಲಿ ಹರಿದಾಡುತ್ತಿರುವ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ರಾಜ್ಯ ರಾಜಕೀಯದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಇದೀಗ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್​ಐಟಿ ತಂಡವನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟು ಎದುರಾಗಿದೆ. ಹಾಗಾದ್ರೆ, ಎಸ್​ಐಟಿ ತಂಡದಲ್ಲಿ ಯಾರ್ಯಾರು ಇದ್ದಾರೆ ಎನ್ನುವ ವಿವರ ಇಲ್ಲಿದೆ.

ಪ್ರಜ್ವಲ್​ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿದ ಸರ್ಕಾರ, ಹೀಗಿದೆ ತನಿಖಾ ತಂಡ
ಪ್ರಜ್ವಲ್​ ರೇವಣ್ಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Apr 28, 2024 | 3:53 PM

ಬೆಂಗಳೂರು, (ಏಪ್ರಿಲ್ 28): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ಪ್ರಕರಣ(Prajwal Revanna video leak case) ತನಿಖೆಗೆ ರಾಜ್ಯ ಸರ್ಕಾರ(Karnataka government) ಎಸ್​ಐಟಿ ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಿಐಡಿ ಡಿಜಿಪಿ ಮೇಲ್ವಿಚಾರಣೆಯಲ್ಲಿ ಮೂವರು ಎಸ್​​ಪಿ, ನಾಲ್ವರು DySP ಒಳಗೊಂಡ ಎಸ್​ಐಟಿ ತಂಡವನ್ನು ರಚನೆ ಮಾಡಿ ಇಂದು (ಏಪ್ರಿಲ್ 28) ಆದೇಶ ಹೊರಡಿಸಲಾಗಿದ್ದು, ತನಿಖೆ ನಡೆಸಿ ಶೀಘ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಬಂದಿತ್ತು. ಇದರ ಮೇರೆ ಮಹಿಳಾ ಆಯೋಗವು, ಸಿಎಂ ಸಿದ್ದರಾಮಯ್ಯ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದು ಸೂಕ್ತ ತನಿಖೆ ಮಾಡಿಸಲು ಮನವಿ ಮಾಡಿತ್ತು. ಅದರಂತೆ ಸಿದ್ದರಾಮಯ್ಯ ಅವರು ಎಸ್​ಐಟಿ ತನಿಖೆಗೆ ವಹಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಎಸ್​ಐಟಿ ತಂಡವನ್ನು ರಚನೆ ಮಾಡಿ ಆದೇಶಿಸಿದ್ದಾರೆ.

ಹೊಳೆ ನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಕ್ರಿಮಿನಲ್ ಮೊಕದ್ದಮೆ ತನಿಖೆಗಾಗಿ ಎಸ್ ಐಟಿ ರಚನೆ ಮಾಡಲಾಗಿದ್ದು, ಸಿಐಡಿ ಡಿಜಿಪಿ ಮೇಲ್ವಿಚಾರಣೆಯಲ್ಲಿ ಕಾರ್ಯ ನಿರ್ವಹಿಸಲಿದೆ. ಸಿಐಡಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇತೃತ್ವದ ಎಸ್ ಐಟಿ ತಂಡದಲ್ಲಿ ಸಹಾಯಕ ಪೊಲೀಸ್ ಮಹಾ ನಿರ್ದೇಶಕಿ ಸುಮನ್ ಪೆನ್ನೇಕರ್ ಮತ್ತು ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಮೂವರು ಎಸ್​​ಪಿ, ನಾಲ್ವರು ಡಿಸಿಪಿಗಳು ಇದ್ದಾರೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್: ಸಂತ್ರಸ್ತೆಯಿಂದ ಮೊದಲ ದೂರು ದಾಖಲು

ಪ್ರಜ್ವಲ್ ವಿರುದ್ಧ ಮೊದಲ ಎಫ್ಐಆರ್‌ ದಾಖಲು

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಎಫ್ಐಆರ್‌ ದಾಖಲಾಗಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 354A(ಲೈಂಗಿಕ ಕಿರುಕುಳ ಆರೋಪ), 354D(ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506(ಬೆದರಿಕೆ), 509(ಮಹಿಳೆ ಮಾನಕ್ಕೆ ಹಾನಿ) ಅಡಿ ಎಫ್​ಐಆರ್ ದಾಖಲಾಗಿದ್ದು, ಇದರ ಆಧಾರದ ಮೇಲೆ ಎಸ್​ಐಟಿ ತಂಡ ತನಿಖೆ ಕೈಗೊಳ್ಳಲಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಹೇಳಿದ್ದಿಷ್ಟು

ಇನ್ನು ಈ ಪ್ರಕರಣದ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪ್ರತಿಕ್ರಿಯಿಸಿದ್ದು, ಹಾಸನದಲ್ಲಿ ಬೆಳಕಿಗೆ ಬಂದ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಸಾವಿರಾರು ಹೆಣ್ಣು ಮಕ್ಕಳ ವಿಡಿಯೋ ಚಿತ್ರೀಕರಿಸಲಾಗಿದ್ದು ದೊಡ್ಡ ಅಪರಾಧ. ವಿಡಿಯೋ ಚಿತ್ರೀಕರಿಸಿದ್ದು ಹಾಗೂ ವಿಡಿಯೋ ಹಂಚಿಕೆ ಮಾಡಿದ ಇಬ್ಬರಿಗೂ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಹಾಸನದ ಅಶ್ಲೀಲ ವಿಡಿಯೋಗೆ ಸಂಬಂಧಪಟ್ಟಂತೆ ಹಲವಾರು ಮಹಿಳಾ ಸಂಘಟನೆ, ಹೋರಾಟಗಾರರು ಮಹಿಳಾ ಆಯೋಗಕ್ಕೆ ಕಂಪ್ಲೇಂಟ್ ಕೊಟ್ಟಿದ್ದಾರೆ. ಇದರ ಸೂಕ್ಷ್ಮತೆಯನ್ನು ಅರಿತು ತನಿಖೆ ನಡೆಸುವಂತೆ ಕೂಡಲೇ ಒತ್ತಾಯಿಸಲಾಗಿದೆ. ಇದು ಸಾವಿರಾರು ಹೆಣ್ಣು ಮಕ್ಕಳು ಜೀವನ ಮತ್ತು ಬದುಕಿನ ಪ್ರಶ್ನೆ ಆಗಿದೆ. ಇದಕ್ಕೆ ನ್ಯಾಯ ಸಿಗಬೇಕು. ಈ ಪ್ರಕರಣ ಬೇರೆಯವರಿಗೆ ಮಾದರಿಯಾಗಬೇಕು. ಈ ಕೃತ್ಯಕ್ಕೆ ಶೂನ್ಯ ಸಹಿಷ್ಣತೆ ಇದೆ. ಯಾರಿಂದಲೂ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಅಪರಾಧಕ್ಕೆ ಶಿಕ್ಷೆ ಆಗಲೇಬೇಕು. ಒಂದು ಅಂದಾಜಿನ ಪ್ರಕಾರ ಸುಮಾರು 2,876 ಮಹಿಳೆಯರು ಈ ಪ್ರಕರಣದಲ್ಲಿ ಇದ್ದಾರೆ ಎಂದು ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:07 pm, Sun, 28 April 24

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್