ಆಸ್ತಿಗಳ ತೆರಿಗೆ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಮೂಲಕ ನಗರ ಸ್ಥಳೀಯ ಸಂಸ್ಥೆಗಳಿಗೆ ಅನುಮತಿ
ಕರ್ನಾಟಕ ಪೌರಸಭೆಗಳ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಹೊರಡಿಸಿದ್ದು, ತೆರಿಗೆ ಹೆಚ್ಚಳ ಸುಗ್ರೀವಾಜ್ಞೆ ಬಗ್ಗೆ ರಾಜ್ಯ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ತೆರಿಗೆ ಹೆಚ್ಚಳಕ್ಕೆ ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಕರ್ನಾಟಕ ಪೌರಸಭೆಗಳ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಹೊರಡಿಸಿದ್ದು, ತೆರಿಗೆ ಹೆಚ್ಚಳ ಸುಗ್ರೀವಾಜ್ಞೆ ಬಗ್ಗೆ ರಾಜ್ಯ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಶೇ. 3ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಈ ಕಾಯ್ದೆಯಲ್ಲಿ ಅನುಮತಿ ನೀಡಲಾಗಿದೆ. ಈ ಮೂಲಕ ಪ್ರತಿ ಹಣಕಾಸು ವರ್ಷದಿಂದ ಆಸ್ತಿ ತೆರಿಗೆ ಹೆಚ್ಚಳಕ್ಕೆ ಅವಕಾಶ ನೀಡಲಾಗಿದೆ.