AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುತಾತ್ಮ ಪ್ರಾಂಜಲ್​ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ

ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬದವರಿಗೆ ಕರ್ನಾಟಕ ಸರ್ಕಾರ 50 ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ಅನ್ನು ಮಂಗಳವಾರ ಹಸ್ತಾಂತರಿಸಿತು. ಮುಖ್ಯಮಂತ್ರಿಗಳು ಪರಿಹಾರ ಘೋಷಣೆ ಮಾಡಿ ಹಲವು ದಿನ ಕಳೆದರೂ ಪರಿಹಾರ ನೀಡದಿರುವ ಬಗ್ಗೆ ‘ಟಿವಿ9’ ವರದಿ ಗಮನ ಸೆಳೆದ ಬೆನ್ನಲ್ಲೇ ಸರ್ಕಾರ ಪರಿಹಾರ ವಿತರಣೆ ಮಾಡಿದೆ.

ಹುತಾತ್ಮ ಪ್ರಾಂಜಲ್​ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ವಿತರಣೆ
ಕ್ಯಾಪ್ಟನ್ ಪ್ರಾಂಜಲ್​ ಕುಟುಂಬದವರಿಗೆ ಪರಿಹಾರದ ಚೆಕ್ ಹಸ್ತಾಂತರಿಸಲಾಯಿತು (ಚಿತ್ರ ಕೃಪೆ: ಮುಖ್ಯಮಂತ್ರಿಗಳ ಎಕ್ಸ್​ ಖಾತೆ)
TV9 Web
| Edited By: |

Updated on:Dec 05, 2023 | 5:22 PM

Share

ಬೆಂಗಳೂರು, ಡಿಸೆಂಬರ್ 5: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕ್ಯಾಪ್ಟನ್ ಪ್ರಾಂಜಲ್ (Capt Pranjal) ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ ಮಂಗಳವಾರ 50 ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು. ಕ್ಯಾಪ್ಟನ್ ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ತಂದ ವೇಳೆ ಅವರ ಕುಟುಂಬದವರಿಗೆ ಪರಿಹಾರ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ, ನಂತರ ಆ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿರಲಿಲ್ಲ. ಈ ಬಗ್ಗೆ ‘ಟಿವಿ9’ ವರದಿ ಮಾಡಿ ಗಮನ ಸೆಳೆದಿತ್ತು.

ಪರಿಹಾರ ನೀಡುವ ವಿಚಾರವಾಗಿ ‘ಟಿವಿ9’ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ ಆರಂಭದಲ್ಲಿ ಪ್ರಾಂಜಲ್ ಯಾರೆಂದೇ ಗೊತ್ತಿಲ್ಲವೆಂಬ ರೀತಿಯಲ್ಲಿ ಉತ್ತರಿಸಿದ್ದರು. ನಂತರ, ಕೊಡುತ್ತೇವೆ ಎಂದು ಹೇಳಿದ್ದರೆ ಕೊಟ್ಟೇ ಕೊಡುತ್ತೇವೆ. ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದು ಹೇಳಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿದ್ದ ಪ್ರತಿಪಕ್ಷಗಳು ಕೂಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದವು.

ಸರ್ಕಾರದ ನಡೆಯ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೀವ್ರ ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಅವರು ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಈ ಬಗ್ಗೆ ವಿಚಾರಿಸಲು 2 ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿದ್ದೆ. ಸರ್ಕಾರದ ವತಿಯಿಂದ ಯಾರಾದರೂ ಫೋನ್ ಮಾಡಿ ಮಾತನಾಡಿದರೇ ಎಂದು ಕೇಳಿದೆ. ಅವರ ತಂದೆ ‘ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ’ ಅಂತ ಹೇಳಿದರು ಎಂದು ತೇಜಸ್ವಿ ಸೂರ್ಯ ಹೇಳಿದ್ದರು. ಅಲ್ಲದೆ, ಶೀಘ್ರ ಪರಿಹಾರ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸೋಮವಾರ ತಡರಾತ್ರಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿ, ಪರಿಹಾರಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಬೇಗ ಪರಿಹಾರ ಬಿಡುಗಡೆ ಮಾಡಬೇಕು: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಆಗ್ರಹ

‘ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು. ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ’ ಎಂದು ಸೋಮವಾರ ತಡರಾತ್ರಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದರು.

ಇದೀಗ ಮಂಗಳವಾರ ಪರಿಹಾರದ ಚೆಕ್ ಅನ್ನು ಪ್ರಾಂಜಲ್ ಕುಟುಂಬವದವರಿಗೆ ಹಸ್ತಾಂತರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:17 pm, Tue, 5 December 23

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ