AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಗ್ರೀವಾಜ್ಞೆ ಮೂಲಕ ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ.

ಸುಗ್ರೀವಾಜ್ಞೆ ಮೂಲಕ ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಿಸಲು ನಿರ್ಧರಿಸಿದ ರಾಜ್ಯ ಸರ್ಕಾರ
ವಿಧಾನ ಸೌಧ
TV9 Web
| Edited By: ವಿವೇಕ ಬಿರಾದಾರ|

Updated on:Oct 17, 2022 | 6:30 PM

Share

ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಿದೆ. ಅಕ್ಟೋಬರ್ 20ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯಲಿದೆ. ಅನುಮೋದನೆ ಪಡೆದ ಬಳಿಕ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲಿದೆ. ನಂತರ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲಿದೆ.

ಎಸ್​ ಎಸ್​ಟಿ ಮೀಸಲಾತಿ ಹೆಚ್ಚಳ ಹಿನ್ನೆಲೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(SC-ST)ಕ್ಕೆ ಬೊಮ್ಮಾಯಿ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಸ್​ಸಿ, ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಇಂದು(ಅ.7) ನಡೆದ ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಎಲ್ಲವನ್ನೂ ಅವಲೋಕನ ಮಾಡಿ, ಎಸ್ಸಿ ಗೆ 15% ರಿಂದ 17% ಹಾಗೂ ಎಸ್ ಟಿ ಸಮುದಾಯಕ್ಕೆ 3% ರಿಂದ 7% ಕ್ಕೆ ಮೀಸಲಾತಿ (SC, ST Reservation)ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

SC, STಗೆ ಮೀಸಲಾತಿ ಹೆಚ್ಚಳ : ಅದು ಅಷ್ಟು ಸುಲಭವೇ? ಕಾನೂನು ಏನು ಹೇಳುತ್ತೆ?

ಕರ್ನಾಟಕ ಸರ್ಕಾರ ರೂಪಿಸುವ ಮೀಸಲಾತಿ ಶೇ.50 ರಷ್ಟನ್ನು ಮೀರಲಿದೆ. ಎಲ್ಲಾ ಮೀಸಲಾತಿ ಸೇರಿದರೂ ಅದು ಶೇ.50 ರಷ್ಟನ್ನು ಮೀರುವಂತಿಲ್ಲ. ಮಹಾರಾಷ್ಟ್ರ ಸರ್ಕಾರ, ಮರಾಠ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಿದ್ದನ್ನು ಸುಪ್ರೀಂಕೋರ್ಟ್ 2021 ರಲ್ಲಿ ರದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಎಸ್​ಟಿ, ಎಎಸ್​​ಸಿ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ತೊಡಕುಗಳು ಎದುರಾಗಲಿವೆ. ಈ ಬಗ್ಗೆ ಹೈಕೋರ್ಟ್, ಸುಪ್ರೀಂಕೋರ್ಟ್​ನಲ್ಲಿ ಸರ್ಕಾರ ಸವಾಲು ಎದುರಿಸಬೇಕಿದೆ.

ಕರ್ನಾಟಕದ ಮೀಸಲಾತಿ ವಿವರ ಇಂತಿದೆ.

ಪ್ರಸ್ತುತ ಕರ್ನಾಟಕದಲ್ಲಿ ಯಾವೆಲ್ಲ ಸಮುದಾಯಗಳಿಗೆ ಎಷ್ಟು ಮೀಸಲಾತಿ ಇದೆ ಎನ್ನುವುದನ್ನು ನೋಡುವುದಾದರೆ ಪ್ರವರ್ಗ 1ಕ್ಕೆ ಶೇ.4 ಮೀಸಲಾತಿ ( 95 ಜಾತಿಗಳು ), ಪ್ರವರ್ಗ 2 (ಎ) ಶೇ.15% ( 102 ಜಾತಿಗಳು), ಪ್ರವರ್ಗ 3ಬಿ ಶೇ.4( ಮುಸ್ಲಿಮರು ), ಪ್ರವರ್ಗ 3ಎ ಶೇ.4 4% (ಒಕ್ಕಲಿಗ&ಬಲಿಜ), ಪ್ರವರ್ಗ 3ಬಿ ಶೇ.5 5% ( ಲಿಂಗಾಯತರು & ಇತರೆ 5), ಪರಿಶಿಷ್ಟ ಜಾತಿಗಳ ಮೀಸಲಾತಿ ಶೇ.15( 101 ಜಾತಿಗಳು) , ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಶೇ 3% ((50 ಜಾತಿಗಳು) ಮೀಸಲಾತಿ ಇದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು?

ಎಲ್ಲಾ ಮೀಸಲಾತಿ ಸೇರಿದರೂ ಅದು ಶೇ.50 ರಷ್ಟನ್ನು ಮೀರುವಂತಿಲ್ಲ. ಅಸಾಧಾರಣ, ಅಸಾಮಾನ್ಯ ಸಂದರ್ಭಗಳಲ್ಲಿ ಮಾತ್ರ ಶೇ. 50 ಮೀಸಲಾತಿ ಮೀರಬಹುದು ಎಂದು 1992 ರಲ್ಲಿ ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ 9 ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ಹೋರಾಟಗಳನ್ನು ಮಾಡುತ್ತಿದ್ದು, ಇದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಸರ್ಕಾರದ  ಮುಂದಿರುವ ಒಂದು ದಾರಿ ಅಂದ್ರೆ ಅದು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಸಂವಿಧಾನದ 9ನೇ ಶೆಡ್ಯೂಲ್ ಮೂಲಕ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕಷ್ಟೇ.

ಮೀಸಲಾತಿ ಹೆಚ್ಚಳಕ್ಕೆ ಬೊಮ್ಮಾಯಿ ಸರ್ಕಾರ ಏನು ?

ಸಂವಿಧಾನದ 9ನೇ ಷೆಡ್ಯೂಲ್ ಗೆ ಸೇರಿಸಿದರೆ ಕೋರ್ಟ್ ಹಸ್ತಕ್ಷೇಪ ಮಾಡುವಂತಿಲ್ಲ. ಇನ್ನೊಂದು ಕೆಲವು ವಿಶೇಷ ಸಂದರ್ಭದಲ್ಲಿ ಮಿತಿಗಿಂತ ಹೆಚ್ಚಿನ ಮೀಸಲಾತಿ ನೀಡಬಹುದು ಎಂದು ಕೂಡ ಸುಪ್ರೀಂ ಕೋರ್ಟ್​ನ ಆದೇಶ ಇದೆ. ಇದನ್ನೇ ಇಟ್ಟುಕೊಂಡು ಇದೀಗ ರಾಜ್ಯದಲ್ಲಿ ಮೀಸಲಾತಿ ಶೇ.50ರಷ್ಟು ಗರಿಷ್ಠ ಮಿತಿಯನ್ನು ಹೆಚ್ಚಿಸಲು ಮುಂದಾಗಬಹುದು. ಅಂದು ತಮಿಳುನಾಡು ಸರ್ಕಾರ ಅನುಸರಿಸಿದ ವಿಧಾನವನ್ನು ಕರ್ನಾಟಕ ಸರ್ಕಾರ ಸಹ ಅನುಸರಿಸಬಹುದು.

ಮೀಸಲಾತಿ ಪ್ರಮಾಣ ಶೇ. 50ರಷ್ಟು ಮೀರಬಾರದು ಎಂದು ನ್ಯಾಯಾಲಯದ ತೀರ್ಪಿದೆ. ಈಗ ಮೀಸಲಾತಿ ಪ್ರಮಾಣ ಹೆಚ್ಚಾಗುವುದರಿಂದ ನ್ಯಾಯಾಲಯ ತಗಾದೆ ತೆಗೆಯಬಹುದು. ಹಾಗಾಗಿ ಶೆಡ್ಯೂಲ್ 9 ರಲ್ಲಿ ಈ ಮೀಸಲಾತಿ ಏರಿಕೆಯನ್ನು ಸೇರಿಸುವುದರಿಂದ ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ಆಗುವುದಿಲ್ಲ. ತಮಿಳುನಾಡು, ರಾಜಸ್ಥಾನ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿ ಶೆಡ್ಯೂಲ್ 9 ರಲ್ಲಿ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ರಾಜ್ಯ ಸರ್ಕಾರವೂ ಶೆಡ್ಯೂಲ್ 9 ರಲ್ಲಿ ಈ ಮೀಸಲಾತಿ ಹೆಚ್ಚಳವನ್ನು ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Mon, 17 October 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!