Muslim Reservation: ಮುಸ್ಲಿಮರ 2ಬಿ ಮೀಸಲಾತಿ ರದ್ದು ನಿರ್ಧಾರವನ್ನು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಮುಸ್ಲಿಮರ 2ಬಿ ಮೀಸಲಾತಿ ರದ್ದು ನಿರ್ಧಾರವನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ನಿನ್ನೆ (ಏ.27) ಸುಪ್ರೀಂಕೋರ್ಟ್​ ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿತ್ತು. ಈ ಹಿನ್ನೆಲೆ ಸುಪ್ರೀಂಕೋರ್ಟ್​​ಗೆ ಸರ್ಕಾರ ಅಫಿಡವಿಟ್​​ ಸಲ್ಲಿಸಿದೆ.

Muslim Reservation: ಮುಸ್ಲಿಮರ 2ಬಿ ಮೀಸಲಾತಿ ರದ್ದು ನಿರ್ಧಾರವನ್ನು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
ವಿವೇಕ ಬಿರಾದಾರ
|

Updated on: Apr 26, 2023 | 3:14 PM

ಬೆಂಗೂಳೂರು: ಮುಸ್ಲಿಮರ (Muslim) 2ಬಿ ಮೀಸಲಾತಿ (2B Reservation) ರದ್ದು ನಿರ್ಧಾರವನ್ನು ಕರ್ನಾಟಕ ಸರ್ಕಾರ (Karnataka Government) ಸಮರ್ಥಿಸಿಕೊಂಡಿದೆ. ನಿನ್ನೆ (ಏ.27) ಸುಪ್ರೀಂಕೋರ್ಟ್ (Supreme court)​ ರಾಜ್ಯ ಸರ್ಕಾರದ 2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿತ್ತು. ಈ ಹಿನ್ನೆಲೆ ಸುಪ್ರೀಂಕೋರ್ಟ್​​ಗೆ ಸರ್ಕಾರ ಅಫಿಡವಿಟ್​​ ಸಲ್ಲಿಸಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ. ಸಂವಿಧಾನದ 14, 15 ಮತ್ತು 16ನೇ ವಿಧಿ ಮತ್ತು ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ತತ್ವಗಳ ಆದೇಶಕ್ಕೆ ವಿರುದ್ಧವಾಗಿದೆ. ಈ ಹಿಂದೆ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂಬ ಕಾರಣಕ್ಕಾಗಿ ಅದನ್ನೆ ಶಾಶ್ವತವಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಸರ್ಕಾರ ಅಫಿಡವಿಟ್​​ನಲ್ಲಿ ಹೇಳಿದೆ.

ರಾಜ್ಯದಲ್ಲಿ ಮೀಸಲಾತಿಗಳನ್ನು ನೀಡುವುದು ಮತ್ತು ಅದರ ಪರಿಷ್ಕೃರಣೆ ಸಂಪೂರ್ಣವಾಗಿ ನೆಲದ ವಾಸ್ತವಗಳ ಮೇಲೆ ಅವಲಂಬಿತವಾದ ಕಾರ್ಯವಾಗಿದೆ. ಯಾವ ಗುಂಪನ್ನು ಹಿಂದುಳಿದ ವರ್ಗ ಎಂದು ಪರಿಗಣಿಸಬೇಕು ಮತ್ತು ಅವರಿಗೆ ಯಾವ ಪ್ರಯೋಜನಗಳು ನೀಡಬೇಕು ಎನ್ನುವುದು ಪ್ರತಿ ರಾಜ್ಯದ ಸಾಂವಿಧಾನಿಕ ಕರ್ತವ್ಯವಾಗಿದೆ. ಮುಸ್ಲಿಮರನ್ನು ಹಿಂದುಳಿದವರೆಂದು ಸೇರಿಸಲು ಆಯೋಗಗಳು ಶಿಫಾರಸು ಮಾಡಿದರೂ ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: ಮುಸ್ಲಿಮರ 2ಬಿ ಮೀಸಲಾತಿ ರದ್ದು; ಕರ್ನಾಟಕ ಸರ್ಕಾರದ ಆದೇಶಕ್ಕೆ ತಡೆ ನೀಡಿದ ಸುಪ್ರೀಂಕೋರ್ಟ್

ಏನಿದು ಮುಸ್ಲಿಮರ 2ಬಿ ಮೀಸಲಾತಿ ರದ್ದು

ಒಂದು ತಿಂಗಳ ಹಿಂದೆ (ಮಾ.24) ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು. ಈ ವೇಳೆ ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಇದರಲ್ಲಿ ಪ್ರಮುಖವಾಗಿ ಪ್ರಬಲ ಎರಡು ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ವಿಚಾರವಾಗಿ ಚರ್ಚೆ ನಡೆದಿತ್ತು. ಈ ಸಭೆಯಲ್ಲಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗಿದ್ದ ಶೇ4 ರಷ್ಟು ಮೀಸಲಾತಿಯನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಸಮವಾಗಿ ಹಂಚಲಾಗಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.

ಅಂದು ಸಂಪುಟದಲ್ಲಿ ಆದ ನಿರ್ಧಾರವೇನು

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿತ್ತು. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿತ್ತು. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದೇನು

2ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದ(EWS) ಅಡಿಯಲ್ಲಿ ಮೀಸಲಾತಿ ನೀಡಲಾಗುವುದು. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ ಎಂಬುದನ್ನು ನಾವು ಗಮನಿಸಬೇಕು ಎಂದು ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ