ಟ್ರೆಕ್ಕಿಂಗ್​ಗೆ ತಾತ್ಕಾಲಿಕ ಬ್ರೇಕ್​ ಹಾಕಿದ ರಾಜ್ಯ ಸರ್ಕಾರ; ಕಾರಣವೇನು? ಇಲ್ಲಿದೆ ಓದಿ

ಅನಧಿಕೃತ ಚಾರಣಕ್ಕೆ ಹೋಗಿ, ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್​​, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಚಾರಣಕ್ಕೆ​ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಅನಧಿಕೃತ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ.

ಟ್ರೆಕ್ಕಿಂಗ್​ಗೆ ತಾತ್ಕಾಲಿಕ ಬ್ರೇಕ್​ ಹಾಕಿದ ರಾಜ್ಯ ಸರ್ಕಾರ; ಕಾರಣವೇನು? ಇಲ್ಲಿದೆ ಓದಿ
ಸರ್ಕಾರದ ಆದೇಶ, ಪ್ರಾತಿನಿಧಿಕ ಚಿತ್ರ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Jan 30, 2024 | 5:32 PM

ಬೆಂಗಳೂರು, ಜನವರಿ 30: ಅನಧಿಕೃತ ಚಾರಣಕ್ಕೆ (Trekking) ಕಡಿವಾಣ ಹಾಕಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಪ್ರಮಾಣಿತ ಕಾರ್ಯ ವಿಧಾನ ಜಾರಿಯಾಗುವವರೆಗೂ ಚಾರಣ​​​​ಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆನ್​​ಲೈನ್​​ ಬುಕ್ಕಿಂಗ್​ ಇಲ್ಲದ ಚಾರಣ ​ಪಾಯಿಂಟ್​​​​ಗಳಿಗೆ ನಿಷೇಧಿಸಲಾಗಿದೆ. ಆನ್​​ಲೈನ್​​​​ ಬುಕ್ಕಿಂಗ್​ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಕಾರಣ ನಿಷೇಧಿಸಲಾಗಿದೆ. ಅರಣ್ಯ ವ್ಯಾಪ್ತಿಯ ಗಿರಿ ಶಿಬಿರಗಳಲ್ಲಿ ಚಾರಣ ಮಾಡುವರ ಹವ್ಯಾಸ ಏರಿಕೆಯಾಗಿದ್ದು, ವಾರಾಂತ್ಯದಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ.

ಅಲ್ಲದೆ ಚಾರಣ ಹೋದವರು ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬ್ಯಾಗ್​​, ಬಾಟಲಿ ಎಸೆಯುತ್ತಿದ್ದಾರೆ. ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಚಾರಣಕ್ಕೆ​ ನಿರ್ಬಂಧ ವಿಧಿಸಿ ಸಚಿವ ಈಶ್ವರ್​ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವ ತನಕ ಬುಕ್ಕಿಂಗ್ ಇಲ್ಲದ ಚಾರಣವನ್ನು ಸರ್ಕಾರ ನಿಷೇಧಿಸಿದೆ.

ಇದನ್ನೂ ಓದಿ: ಟ್ರೆಕ್ಕಿಂಗ್‌ ಹೋಗುವಾಗ ನೀವು ತೆಗೆದುಕೊಂಡು ಹೋಗಬೇಕಾದ ಅಗತ್ಯ ವಸ್ತುಗಳ ಪಟ್ಟಿ ಇಲ್ಲಿದೆ

ಸರ್ಕಾರ ಹೊರಡಿಸಿದ ಆದೇಶದಲ್ಲಿ ಏನಿದೆ?

ರಾಜ್ಯದ ಯುವಜನರಲ್ಲಿ ಇತ್ತೀಚೆಗೆ ಅರಣ್ಯವ್ಯಾಪ್ತಿಯ ಗಿರಿ ಶಿಖರಗಳಲ್ಲಿ ಚಾರಣ ಮಾಡುವ ಹವ್ಯಾಸ ಅಧಿಕವಾಗಿದ್ದು, ಇದು ವಾರಾಂತ್ಯದಲ್ಲಿ ಜನದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋ ಇಚ್ಛೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥ ಇತ್ಯಾದಿಗಳನ್ನು ಎಸೆಯುತ್ತಿದ್ದು, ಇದು ವನ್ಯಜೀವಿಗಳಿಗೆ ಅಪಾಯ ತರುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಇದೇ ತಿಂಗಳು 26 ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಮಾಧ್ಯಮಗಳಲ್ಲೂ ವರದಿಯಾಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ. ಆತಂಕ ವ್ಯಕ್ತಪಡಿಸಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ, ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುವ ಅಪಾಯ ಇದೆ.

ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ (SOP) ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ