ಕರ್ನಾಟಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ ಸರ್ಕಾರ

ಕರ್ನಾಟಕದ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾಗಿದ್ದ ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂಗೀಕರಿಸಿ, ಜಾರಿಗೊಳಿಸಿದೆ. ತುಟ್ಟಿಭತ್ಯೆ ಸೇರಿದಂತೆ ಇತರ ಭತ್ಯೆ, ವೇತನ ಶ್ರೇಣಿ ಎಷ್ಟು ಏರಿಕೆಯಾಗಲಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ.

ಕರ್ನಾಟಕ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ ಸರ್ಕಾರ
7ನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವೇತನ ಸೌಲಭ್ಯಗಳ ಪರಿಷ್ಕರಣೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 27, 2024 | 6:20 PM

ಬೆಂಗಳೂರು, (ಆಗಸ್ಟ್ 27): 7ನೇ ವೇತನ ಆಯೋಗದ ವರದಿ ಶಿಫಾರಸುಗಳನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ. ಅಲ್ಲದೇ ಎನ್​ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಇದರ  ಬೆನ್ನಲ್ಲೇ ಇದೀಗ ರಾಜ್ಯ ಸರ್ಜಾರಿ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಸಂಜೀವಿನಿ ಯೋಜನೆ ಜಾರಿವರೆಗೂ ಮಾಸಿಕ 200 ರೂಪಾಯಿಂದ 500 ರೂ.ಗೆ ಹೆಚ್ಚಿಸಿ ಆದೇಶಿಸಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಆದೇಶ  ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರ ಭರವಸೆ ಕೊಟ್ಟ ಹಳೆಯ ಪಿಂಚಣಿ ಯೋಜನೆ ಏನಾಯಿತು? ಯಾವಾಗ ಜಾರಿಯಾಗುತ್ತೆ?

ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತೃತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ.

ಗ್ರೂಪ್ -ಸಿ ಮತ್ತು ಗ್ರೂಪ್-ಡಿ ವೃಂದದ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಸರ್ಕಾರವು ಅಂಗೀಕರಿಸಿರುತ್ತದೆ. ಅದರಂತೆ ಈ ಕೆಳಕಂಡ ಆದೇಶವನ್ನು ಹೊರಡಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

  1. ಗ್ರೂಪ್-‘ಸಿ’ ಮತ್ತು ಗ್ರೂಪ್-‘ಡಿ’ ವೃಂದದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ ರೂ.200/- ಗಳಿಂದ ಮಾಸಿಕ ರೂ.500/- ಗಳಿಗೆ 1ನೇ ಆಗಸ್ಟ್ 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.
  2.  ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆ.ಎ.ಎಸ್.ಎಸ್) ಸೌಲಭ್ಯವು ಅನುಷ್ಠಾನಗೊಳ್ಳುವವರೆಗೆ ಈ ವೈದ್ಯಕೀಯ ಸೌಲಭ್ಯವು ಲಭ್ಯವಿರುತ್ತದೆ.
  3. ನಗದುರಹಿತ ವೈದ್ಯಕೀಯ ಸೌಲಭ್ಯ ಯೋಜನೆಯು ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶವು ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ ಮತ್ತು ನಗದುರಹಿತ (ಕೆ.ಎ.ಎಸ್.ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರನು ಈ ಸೌಲಭ್ಯವನ್ನು ಪಡೆಯಲು ಅರ್ಹನಿರುವುದಿಲ್ಲ.
  4.  ಈ ಭತ್ಯೆಯನ್ನು ಕ್ರಮಬದ್ಧಗೊಳಿಸಲು ವಿಧಿಸಿರುವ ಇತರೆ ಷರತ್ತುಗಳು ಮುಂದುವರೆದು ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ