ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ. ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ […]

ರಾಜ್ಯೋತ್ಸವ ವೇಳೆಗೆ ಪೊಲೀಸ್ ಸಿಬ್ಬಂದಿ ಕಷ್ಟ ಪರಿಹಾರ ಭತ್ಯೆ ಹೆಚ್ಚಳ
ಸಾಧು ಶ್ರೀನಾಥ್​

Updated on: Oct 18, 2019 | 5:59 PM

ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಸಿಬ್ಬಂದಿಯ ಕಷ್ಟಕ್ಕೆ ಸ್ಪಂದಿಸಿದ್ದು, ಕಷ್ಟ ಪರಿಹಾರ ಭತ್ಯೆಯನ್ನು ಹೆಚ್ಚಿಸಿದೆ. ನವೆಂಬರ್‌ 1ರಿಂದ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಅನ್ವಯವಾಗಲಿದೆ.

ರಿಸ್ಕ್ ಅಂಡ್ ಹಾರ್ಡ್​ಷಿಪ್​ ಬಾಬತ್ತಿನಲ್ಲಿ ಪೊಲೀಸ್​ ಸಿಬ್ಬಂದಿಗೆ ತಲಾ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ಪಿಎಸ್‌ಐ, ಎಎಸ್‌ಐ, ಮುಖ್ಯಪೇದೆ, ಪೊಲೀಸ್‌ ಪೇದೆಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ವೇತನ ಪರಿಷ್ಕರಣೆಯವರೆಗೂ ಈ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ.
ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ 1 ಸಾವಿರ ರೂ. ವಿಶೇಷ ಭತ್ಯೆ ಕೊಡಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Published On - 5:57 pm, Fri, 18 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us