ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪರಿವಿಡಿ ಓದು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಕರ್ನಾಟಕ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪರಿವಿಡಿಯನ್ನು ಓದುವುದನ್ನು ಕಡ್ಡಾಯಗೊಳಿಸಿದೆ

ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪರಿವಿಡಿ ಓದು ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ಸಂವಿಧಾನ
Follow us
ನಯನಾ ಎಸ್​ಪಿ
|

Updated on: Jun 16, 2023 | 10:54 AM

ಬೆಂಗಳೂರು: ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಎಲ್ಲ ಶಾಲಾ-ಕಾಲೇಜುಗಳು (Schools-Colleges) ಸಂವಿಧಾನದ ಪರಿವಿಡಿಯನ್ನು (Constitution’s Preamble) ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲು ಕರ್ನಾಟಕ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ. ಇಂತಹ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ನಮ್ಮ ಯುವಕರು ಪ್ರತಿ ದಿನ ಕಡ್ಡಾಯವಾಗಿ ಅದರ ಪೀಠಿಕೆ/ಪರಿವಿಡಿಯನ್ನು ಓದಬೇಕು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದರು.

ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪರಿವಿಡಿಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ.

“ಸ್ವಾತಂತ್ರ್ಯ ಹೋರಾಟ, ಸಂವಿಧಾನದ ಹಿಂದಿನ ಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು, ಜನರು, ವಿಶೇಷವಾಗಿ ಶಾಲಾ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಯುವಕರು – ಅದು ಸರ್ಕಾರಿ, ಅನುದಾನಿತ ಅಥವಾ ಖಾಸಗಿಯಾಗಿರಲಿ – ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು.” ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದರು.

ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಯುವಜನರನ್ನು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಮತ್ತು ಎಲ್ಲಾ ಸಮುದಾಯಗಳ ನಡುವೆ ಸಹೋದರತ್ವವನ್ನು ಉತ್ತೇಜಿಸಲು ಪ್ರೇರೇಪಿಸುತ್ತದೆ.

ಇದನ್ನೂ ಓದಿ: ಸಹಕಾರ ಇಲಾಖೆಯ ನಿವೇಶನ ಹಂಚಿಕೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ, ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು

ಇಂತಹ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ನಮ್ಮ ಯುವಕರು ಪ್ರತಿ ದಿನ ಅದರ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ಹೇಳಿದ ಅವರು, ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಅದರ ಭಾವಚಿತ್ರವನ್ನು ಪ್ರದರ್ಶಿಸುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾತನಾಡಿರುವ ಸಚಿವರು, ಶಾಲೆ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಹಂತದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಮಹತ್ವ ಹಾಗೂ ಮೌಲ್ಯದ ಅರಿವು ಮೂಡಿಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ