AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸದಾಗಿ ವಾಹನ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಶಾಕ್​: ಸೆಸ್​ ಹೆಚ್ಚಳ

ಫೆಬ್ರುವರಿ 1 ರಿಂದ ಕರ್ನಾಟಕ ಸರ್ಕಾರವು ಹೊಸ ಕಾರು ಮತ್ತು ಬೈಕ್ ಖರೀದಿದಾರರಿಂದ ಹೆಚ್ಚುವರಿ ಸೆಸ್ ವಿಧಿಸಲು ನಿರ್ಧರಿಸಿದೆ. ಕಾರುಗಳಿಗೆ ₹1000 ಮತ್ತು ಬೈಕ್‌ಗಳಿಗೆ ₹500 ಹೆಚ್ಚುವರಿ ಸೆಸ್ ಪಾವತಿಸಬೇಕಾಗುತ್ತದೆ. ಈ ಹೆಚ್ಚುವರಿ ಸೆಸ್ ಮೋಟಾರು ಸಾರಿಗೆ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಗಾಗಿ ಬಳಸಲಾಗುತ್ತದೆ. ಯೆಲ್ಲೋ ಬೋರ್ಡ್ ವಾಹನಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.

ಹೊಸದಾಗಿ ವಾಹನ ಖರೀದಿ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಶಾಕ್​: ಸೆಸ್​ ಹೆಚ್ಚಳ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Jan 29, 2025 | 9:09 AM

Share

ಬೆಂಗಳೂರು, ಜನವರಿ 29: ಫೆಬ್ರುವರಿ 1 ರಿಂದ ಹೊಸದಾಗಿ ಕಾರು ಮತ್ತು ಬೈಕ್ ಖರೀದಿ ಮಾಡುವವರಿಗೆ ಕರ್ನಾಟಕ ಸರ್ಕಾರ (Karnataka Govcernment) ಶಾಕ್ ನೀಡಲಿದೆ. ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಸೆಸ್  (Cess) ಸಂಗ್ರಹಕ್ಕೆ ಸಾರಿಗೆ ಇಲಾಖೆ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ. ಹೊಸ ಕಾರು ಖರೀದಿ ಮಾಡುವವರು ಒಂದು ಸಾವಿರ ರೂಪಾಯಿ, ಹೊಸದಾಗಿ ಬೈಕ್ ಖರೀದಿ ‌ಮಾಡುವವರು 500 ರೂಪಾಯಿಯನ್ನು ಹೆಚ್ಚುವರಿಯಾಗಿ ಸೆಸ್ ರೂಪದಲ್ಲಿ ಸಾರಿಗೆ ಇಲಾಖೆಗೆ ಪಾವತಿ ಮಾಡಬೇಕು.

ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ನಿಧಿಯ ಉದ್ದೇಶಕ್ಕಾಗಿ, ಸಾರಿಗೇತರ ವಾಹನಗಳ ನೋಂದಣಿ (ರಿಜಿಸ್ಟ್ರೇಷನ್) ಸಮಯದಲ್ಲಿ ಶುಲ್ಕ ದ್ವಿಚಕ್ರ ವಾಹನಗಳಿಗೆ 500 ರೂಪಾಯಿ, ಮೋಟಾರು ಕಾರುಗಳಿಗೆ 1 ಸಾವಿರ ರೂಪಾಯಿಗಳನ್ನು ಹೆಚ್ಚುವರಿಯಾಗಿ ‌ಸಂಗ್ರಹಿಸಲಾಗುತ್ತದೆ. ಯೆಲ್ಲೋ ಬೋರ್ಡ್ ವಾಹನಗಳನ್ನು ಖರೀದಿ ಮಾಡುವವರ ಬಳಿ ಸೆಸ್ ಸಂಗ್ರಹ ಮಾಡುವಂತಿಲ್ಲ ಎಂದು ರಾಜ್ಯ ಸಾರಿಗೆ ‌ಇಲಾಖೆ ತನ್ನ ‌ಅಧಿಕೃತ ಆದೇಶದಲ್ಲಿ ಉಲ್ಲೇಖಿಸಿದೆ.

ಸಾರ್ವಜನಿಕರಿಂದ ಆಕ್ರೋಶ

ಈಗಾಗಲೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಹೊಸ ಕಾರು, ಬೈಕ್ ಖರೀದಿ ಮಾಡುವವರಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಚಾಲಕರ ಅಭಿವೃದ್ಧಿ ಮಾಡುತ್ತೇವೆ ಎಂದು ರಾಜ್ಯ ಸರ್ಕಾರ ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ರಿಜಿಸ್ಟ್ರೇಷನ್ ಚಾರ್ಜ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲು ಹೊರಟಿದೆ. ಆದರೆ ಇದಕ್ಕೆ ಜನರು ಮಾತ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಫೆಬ್ರವರಿ 1 ರಿಂದ ಕಾರು ಖರೀದಿಸುವವರಿಗೆ ಶಾಕ್: ಬೆಲೆ ಹೆಚ್ಚಳ ಘೋಷಿಸಿದ ಮಾರುತಿ

ಹೊಸ ವರ್ಷದ ಆರಂಭದಲ್ಲಿಯೇ ಸಾರಿಗೆ ಇಲಾಖೆ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಕೆಕೆಆರ್​ಟಿಸಿ ಬಸ್​ಗಳ ಟಿಕೆಟ್ ದರ ಪರಿಷ್ಕರಣೆ ಮಾಡಿ ಜನರಿಗೆ ಶಾಕ್ ನೀಡಿದೆ. ಇದೀಗ ಕಾರು, ಬೈಕ್ ಖರೀದಿಸುವವರಿಗೂ ಶಾಕ್ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Wed, 29 January 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​