ಕರ್ನಾಟಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೇ ಫಂಡ್ ಹೆಚ್ಚಳ

ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಮುಷ್ಕರಕ್ಕೆ ಮಣಿದ ಸರ್ಕಾರ, ಸ್ಟೇ ಫಂಡ್​ ಅನ್ನು ಶೇ 25 ರಷ್ಟು ಹೆಚ್ಚಳ ಮಾಡಿದೆ. ಶೇ 100ರಷ್ಟು ಸ್ಟೇ ಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದರು. ಆದರೆ ಸರ್ಕಾರ ಇದೀಗ ಶೇ 25 ರಷ್ಟು ಸ್ಟೇ ಫಂಡ್ ಹೆಚ್ಚಳ ಮಾಡಿದೆ.

ಕರ್ನಾಟಕ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೇ ಫಂಡ್ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Aug 23, 2024 | 1:09 PM

ಬೆಂಗಳೂರು, ಆಗಸ್ಟ್​ 23: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ (PG Medical Students) ಮುಷ್ಕರಕ್ಕೆ ಮಣಿದ ಸರ್ಕಾರ, ಸ್ಟೇ ಫಂಡ್​ (Stay Found) ಅನ್ನು ಶೇ25 ರಷ್ಟು ಹೆಚ್ಚಳ ಮಾಡಿದೆ. ಶೇ 100ರಷ್ಟು ಸ್ಟೇ ಫಂಡ್ ಹೆಚ್ಚಳಕ್ಕೆ ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸುದ್ದಿಗೋಷ್ಠಿ ನಡೆಸಿ,  ಶೇ25 ರಷ್ಟು ಸ್ಟೇ ಫಂಡ್​​ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದರು. ವೈದ್ಯಕೀಯ ಶಿಕ್ಷಣ ಸಚಿವರ ಭರವಸೆ ಬೆನ್ನಲ್ಲೇ ವಿದ್ಯಾರ್ಥಿಗಳು ಮುಷ್ಕರ ವಾಪಸ್ ಪಡೆದಿದ್ದಾರೆ.

ಮಂಕಿ ಪಾಕ್ಸ್ ಮುನ್ನೆಚ್ಚರಿಕೆ ಹಾಗೂ ಸಿದ್ಧತೆ ಕುರಿತು ಸಭೆ ನಡೆಸಿದ್ದೇನೆ. ಕೇಂದ್ರ ಆರೋಗ್ಯ ಇಲಾಖೆ ಕೆಲವೊಂದು ಮಾರ್ಗಸೂಚಿ ನೀಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಸ್ಟಿಂಗ್​ ಮಾಡಲು ವ್ಯವಸ್ಥೆ ಮಾಡಿದ್ದೇವೆ. ರಾಜ್ಯದಲ್ಲಿ ಮಂಕಿಪಾಕ್ಸ್​ ಸಂಬಂಧ ಉಚಿತ ಟೆಸ್ಟಿಂಗ್ ಮಾಡುತ್ತಿದ್ದೇವೆ. ಬೆಂಗಳೂರು ನಗರದಲ್ಲಿ ಮಂಕಿಪಾಕ್ಸ್ ತಡೆಗೆ ಕಟ್ಟೆಚ್ಚರ ವಹಿಸಲಾಗಿದೆ. ಜನರು ಯಾವುದೇ ಆತಂಕ ಪಡುವಂತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕೋಲ್ಕತ್ತಾ ಅತ್ಯಾಚಾರ ಆರೋಪಿಯದ್ದು ಕ್ರೂರ ಪ್ರಾಣಿಯ ಸ್ವಭಾವ, ಪಶ್ಚಾತಾಪವೂ ಇಲ್ಲ: ವೈದ್ಯರು

ಮಂಕಿಪಾಕ್ಸ್ ಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಕೂಡ ಬಿಡುಗಡೆಯಾಗಿದೆ. ನಮ್ಮ ಇಲಾಖೆಯಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಸೌಲಭ್ಯವಿದೆ. ಐಸೋಲೆಷನ್ ಬೆಡ್ ವ್ಯವಸ್ಥೆಯನ್ನು ಕೂಡ ಮಾಡಿದ್ದೇವೆ. ಉಚಿತವಾಗಿ ಟೆಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಒಂದೂ ಕೇಸ್ ಇಲ್ಲದ ಕಾರಣ ಕೇವಲ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಕೇಸ್ ಕಂಡುಬಂದಲ್ಲಿ ಬೇರೆ ಆಸ್ಪತ್ರೆಯಲ್ಲಿ ಕೂಡ ವ್ಯವಸ್ಥೆ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:40 pm, Fri, 23 August 24