ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ

ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. 2 ದಿನಗಳ ಹಿಂದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಘೋಷಿಸಿತ್ತು. ಇಂದು 100 ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಹೆಚ್ಚಳ; ರಾಜ್ಯ ಸರ್ಕಾರ ಘೋಷಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 01, 2024 | 7:53 AM

ಬೆಂಗಳೂರು: ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರಿಗೆ ಮತ್ತು 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಈ ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿದೆ. 50 ಸಾವಿರ ರೂ. ಇದ್ದ ಮೊತ್ತವನ್ನು 1 ಲಕ್ಷ ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೊಂದು ಐತಿಹಾಸಿಕ ಸಂದರ್ಭವಾಗಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಗುರುವಾರ ಮಾಹಿತಿ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಈ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. 100 ಸಾಧಕರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ