ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ

ಕರ್ನಾಟಕ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಿಸಲು ನಿರ್ಧರಿಸಿದೆ. ಆರೋಗ್ಯ ಸಚಿವರ ಪ್ರಕಾರ, ಈ ಹೆಚ್ಚಳವು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿಲ್ಲ, ಬದಲಾಗಿ ಪ್ರತಿ ಎರಡು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಸಾಮಾನ್ಯ ದರ ಪರಿಷ್ಕರಣೆಯಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ, ಸಚಿವರು ಕೊಟ್ರು ಕಾರಣ
ಪ್ರಾಥಮಿಕ ಆರೊಗ್ಯ ಕೇಂದ್ರ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Nov 20, 2024 | 10:59 AM

ಬೆಂಗಳೂರು, ನವೆಂಬರ್​ 20: ಕರ್ನಾಟಕದಲ್ಲಿನ (Karnataka) ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ (Primary Health Centers) ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.

ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಿದರು. ಪರಿಷ್ಕೃತ ಬಳಿಕ ಚಿಕಿತ್ಸಾ ದರ ಶೇ 15 ರಿಂದ 20 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಕರ್ನಾಟಕ ಸರ್ಕಾರ ಈವರೆಗೆ ಪರಿಷ್ಕರಿಸಿದ ದರಗಳು

  • ಕರ್ನಾಟಕ ಸರ್ಕಾರ ಕಳೆದ ವರ್ಷ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಶೇ 20 ರಷ್ಟು ಏರಿಸಿತ್ತು. ಬಿಯರ್​ ಮೇಲಿನ ಹೆಚ್ಚುವರಿ ಸುಂಕ ಶೇ 10 ರಷ್ಟು ಏರಿಕೆ ಮಾಡಿತ್ತು.
  • ಹೊಸದಾಗಿ ಖರೀದಿ ಮಾಡಿ, ನೋಂದಣಿ ಮಾಡುವ ಮೋಟಾರು ವಾಹನಗಳ ಮೇಲೆ ಸರ್ಕಾರ ಶೇ 3 ರಷ್ಟು ಹೆಚ್ಚಳ ಮಾಡಿತ್ತು.
  • ಮುದ್ರಾಂಕ ಮತ್ತು ನೋಂದಣಿ ಶುಲ್ಕವನ್ನು ಶೇ 200 ರಿಂದ 500 ರೂ. ತನಕ ಏರಿಕೆ ಮಾಡಲಾಗಿತ್ತು.
  • ಬಿತ್ತನೆ ಬೀಜದ ಬೆಲೆಯಲ್ಲಿ ಶೇ 50 ರಿಂದ 60 ನಷ್ಟು ಏರಿಕೆಯಾಗಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಿತ್ತು.
  • ನಂದಿನಿ ಹಾಲು ಪ್ರತಿ ಲೀಟರ್​ಗೆ 2 ರೂ. ಏರಿಕೆ ಮಾಡಲಾಗಿದೆ. ಅರ್ಧ ಲೀಟರ್ ಹಾಲಿನ ದರ 22 ರೂ.ನಿಂದ 24 ರೂ. ಆಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Wed, 20 November 24

ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ಪ್ರಧಾನಿ ಮೋದಿಯನ್ನು ಅಪ್ಪುಗೆಯಿಂದ ಬರಮಾಡಿಕೊಂಡ ಇರ್ಫಾನ್ ಅಲಿ
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ವೈಲ್ಡ್ ಕಾರ್ಡ್ ಸ್ಪರ್ಧಿಯಿಂದ ಸುರೇಶ್​ಗೆ ಅವಮಾನ; ಮನೆ ಬಿಟ್ಟು ಹೋಗ್ತಾರಾ?
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಸರ್ಫರಾಝ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಅರಳಿ ಮರದ ಎಲೆ ದೀಪದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ ಐದು ಗ್ರಹಗಳ ಶುಭ ಫಲವಿದೆ
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ನಿಲ್ಲಿಸಿದ್ದ ಸ್ಕೂಟಿಯಿಂದ ಬುಸ್​ಗುಟ್ಟುತ್ತಾ ಹೊರಬಂದ ವಿಷಕಾರಿ ಹಾವು
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮನೆಗೆ ನುಗ್ಗಿದ ಚಿರತೆಯಿಂದ ನಾಯಿಯ ಮೇಲೆ ಅಟ್ಯಾಕ್; ಶಾಕಿಂಗ್ ವಿಡಿಯೋ ವೈರಲ್
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಮದುವೆ ಹಿಂದಿನ ರಾತ್ರಿ ಡ್ಯಾನ್ಸ್​ ಮಾಡುವಾಗ ಹೃದಯಾಘಾತದಿಂದ ಮದುಮಗ ಸಾವು!
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ಶಿವಣ್ಣನ ರೀತಿ ಡೈಲಾಗ್ ಹೇಳಲು ಯಾರಿಗೆ ಸಾಧ್ಯ? ವೇದಿಕೆಯಲ್ಲಿ ಎಲ್ಲರೂ ಸುಸ್ತ್
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ
ರಾಧಿಕ ಕರಿಯ ಅಂತ ಕರೆದ್ರೆ ಓಕೆ, ಜಮೀರ್ ಕರೆದ್ರೆ ಯಾಕೆ? ತೇಜಸ್ವಿನಿ ಗೌಡ