ಬೆಂಗಳೂರು, ನವೆಂಬರ್ 20: ಕರ್ನಾಟಕದಲ್ಲಿನ (Karnataka) ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ (Primary Health Centers) ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.
ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ ಎಂದು ಹೇಳಿದರು. ಪರಿಷ್ಕೃತ ಬಳಿಕ ಚಿಕಿತ್ಸಾ ದರ ಶೇ 15 ರಿಂದ 20 ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:27 am, Wed, 20 November 24