ಅಂಧ ವಿದ್ಯಾರ್ಥಿಗಳಿಗೆ ಮಾತನಾಡುವ ಲ್ಯಾಪ್​ಟಾಪ್: ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ

ಈ ಯೋಜನೆಗೆ ಸಂಬಂಧಿಸಿದಂತೆ ನೀತಿ ರೂಪಿಸುವಂತೆ ಈಮುನ್ನವೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು

ಅಂಧ ವಿದ್ಯಾರ್ಥಿಗಳಿಗೆ ಮಾತನಾಡುವ ಲ್ಯಾಪ್​ಟಾಪ್: ಹೈಕೋರ್ಟ್​ಗೆ ಸರ್ಕಾರದಿಂದ ಮಾಹಿತಿ
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: guruganesh bhat

Updated on: Aug 16, 2021 | 9:26 PM

ಬೆಂಗಳೂರು: ಅಂಧ ವಿದ್ಯಾರ್ಥಿಗಳಿಗೆ ಮಾತಾಡುವ ಲ್ಯಾಪ್‌ಟಾಪ್ ಒದಗಿಸುತ್ತೇವೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ ಈಬಗ್ಗೆ ಯೋಜನೆ ರೂಪಿಸಿದ್ದೇವೆ. ಎಸ್ಎಸ್ಎಲ್ಸಿ ಮತ್ತು ಮೇಲ್ಪಟ್ಟ ತರಗತಿಗಳ ಅಂಧ ವಿದ್ಯಾರ್ಥಿಗಳಿಗೆ ಯೋಜನೆ ಅನ್ವಯವಾಗಲಿದೆ ಎಂದು ವಕೀಲ ಎಸ್.ಉಮಾಪತಿ ಸಾರ್ವಜನಿಕ ಜಿತಾಸಕ್ತಿ ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಯೋಜನೆಗೆ ಸಂಬಂಧಿಸಿದಂತೆ ನೀತಿ ರೂಪಿಸುವಂತೆ ಈಮುನ್ನವೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಶಾಸಕರು, ಸಂಸದರ ವಿರುದ್ಧದ ಎಷ್ಟು ಪ್ರಕರಣಗಳನ್ನು ಹಿಂಪಡೆದಿದ್ದೀರಿ? ಹೈಕೋರ್ಟ್ ಪ್ರಶ್ನೆ ಶಾಸಕರು, ಸಂಸದರ ವಿರುದ್ಧ ಸೆಪ್ಟೆಂಬರ್ 16, 2020 ರ ನಂತರ ಹಿಂಪಡೆದ ಪ್ರಕರಣಗಳ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ಸಮ್ಮತಿಯಿಲ್ಲದೇ ಶಾಸಕರು, ಸಂಸದರ ಪ್ರಕರಣಗಳನ್ನು ಹಿಂಪಡೆಯಬಾರದು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕೇಸ್ ಹಿಂಪಡೆಯುವ ಆದೇಶಗಳನ್ನು ಪರಿಶೀಲನೆಗೊಳಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಆಗಸ್ಟ್ 31 ರೊಳಗೆ ಅಂತಹ ಪ್ರಕರಣಗಳ ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಇಂದೆಷ್ಟು ಕೊವಿಡ್ ಪ್ರಕರಣ? ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 16) ಹೊಸದಾಗಿ 1,065 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,30,529 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,71,448 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 28 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,007 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,048 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 270 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,33,172 ಕ್ಕೆ ಏರಿಕೆಯಾಗಿದೆ. 12,33,172 ಸೋಂಕಿತರ ಪೈಕಿ 12,09,176 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,941 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,054 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: 

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಅಪ್ಘಾನಿಸ್ತಾನದಲ್ಲಿ ಯುದ್ಧ ಸನ್ನಿವೇಶ: ಸೈನ್ಯ ಹಿಂಪಡೆಯುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದ ಜೋ ಬೈಡನ್​

(Karnataka government informs Karnataka High Court to will distribute speaking laptop to blind students)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್