AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಗ್ಗಿ, ಜೊಮಾಟೊನಂತಹ ಗಿಗ್‌ ಕಾರ್ಮಿಕರಿಗೆ ಸಿಹಿ ಸುದ್ದಿ; ಜೀವ, ಅಪಘಾತ ವಿಮೆ ಜಾರಿಗೊಳಿಸಿದ ಸರ್ಕಾರ

2023-24ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಂತಹ ಸ್ವಿಗ್ಗಿ, ಜೊಮಾಟೊ ಮತ್ತು ಅಮೆಜಾನ್‌ನಂತಹ ಇ-ಕಾಮರ್ಸ್ ಡೆಲಿವರಿ ಬಾಯ್​​​ಗಳ ಜೀವ, ಅಪಘಾತ ವಿಮೆ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಆದರೆ ಷರತ್ತುಗಳು ಅನ್ವಯ

ಸ್ವಿಗ್ಗಿ, ಜೊಮಾಟೊನಂತಹ ಗಿಗ್‌ ಕಾರ್ಮಿಕರಿಗೆ ಸಿಹಿ ಸುದ್ದಿ; ಜೀವ, ಅಪಘಾತ ವಿಮೆ ಜಾರಿಗೊಳಿಸಿದ ಸರ್ಕಾರ
ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 12, 2023 | 8:13 AM

ಬೆಂಗಳೂರು ಸೆ.12: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಬಜೆಟ್ (2023-24 Budget)​ ಮಾಡಿದ್ದರು. ಈ ಆಯವ್ಯಯದಲ್ಲಿ ಗಿಗ್​ ಕೆಲಸಗಾರರಿಗೆ ಅಂದರೇ ಸ್ವಿಗ್ಗಿ, ಜೊಮಾಟೊ (Zomato) ಮತ್ತು ಅಮೆಜಾನ್​​ನಂತಹ (Amazon) ಇ-ಕಾಮರ್ಸ್​​ ಡೆವಲರಿ ಬಾಯ್​​ಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆಯನ್ನು ಘೋಷಿಸಿದ್ದರು. ಇದೀಗ ಸರ್ಕಾರ ಸೆ.08 ರಂದು ಅಧಿಕೃತ ಸುತ್ತೋಲೆ ಹೊರಡಿಸುವ ಮೂಲಕ ಯೋಜನೆಯನ್ನು ಜಾರಿ ಮಾಡಿದೆ.

2022 ರ ನೀತಿ ಆಯೋಗದ ವರದಿ ಪ್ರಕಾರ ರಾಜ್ಯದಲ್ಲಿ ಅಂದಾಜು 2.3 ಲಕ್ಷ ಗಿಗ್ ಕೆಲಸಗಾರರಿದ್ದಾರೆ. ಆದರೆ ರಾಜ್ಯ ಕಾರ್ಮಿಕ ಇಲಾಖೆಯು ಈ ಬಗ್ಗೆ ಯಾವುದೇ ನಿಖರ ಅಂಕಿ-ಸಂಖ್ಯೆ ಹೊಂದಿಲ್ಲ. ಸರಕು ಮತ್ತು ಸೇವೆಗಳನ್ನು ನಿಗದಿತ ಸಮಯದಲ್ಲಿ ತಲುಪಿಸಲು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಕಾರ್ಮಿಕರ ಭದ್ರತೆಗೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಬೇಕಾದರೇ ಕೆಲವು ಷರತ್ತುಗಳನ್ನು ಸರ್ಕಾರ ವಿಧಿಸಿದೆ. ಅವು ಈ ಕೆಳಗಿನಂತಿದೆ.

ಇದನ್ನೂ ಓದಿ: Postal Life Insurance: ಅಂಚೆ ಜೀವ ವಿಮೆಗೆ ಬೋನಸ್ ಪ್ರಕಟಿಸಿದ ಸರ್ಕಾರ; ವಿವರ ಇಲ್ಲಿದೆ

ಜೀವ, ಅಪಘಾತ ಜೀವ ವಿಮೆ ಷರತ್ತುಗಳು

  1. 18-60 ವರ್ಷ ವಯಸ್ಸಿನ ಯಾವುದೇ ವ್ಯಕ್ತಿ ಮತ್ತು ಕನಿಷ್ಠ ಒಂದು ವರ್ಷದ ಅವಧಿಯವರೆಗೆ ಯಾವುದೇ ಆನ್‌ಲೈನ್ ಆಹಾರ ವಿತರಣೆ ಅಥವಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಕಂಪನಿಯಲ್ಲಿ ಗಿಗ್ ಕೆಲಸಗಾರರಾಗಿ ಕೆಲಸ ಮಾಡುತ್ತಿರಬೇಕು.
  2. ಅಪಘಾತದಲ್ಲಿ ಮೃತಪಟ್ಟರೇ 4 ಲಕ್ಷ ರೂಪಾಯಿಗಳನ್ನು ಒದಗಿಸಲಾಗುತ್ತದೆ. ಇದರಲ್ಲಿ 2 ಲಕ್ಷ ರೂಪಾಯಿ ಅಪಘಾತ ಕವರೇಜ್ ಕೂಡ ಸೇರಿದೆ. ಒಂದು ವೇಳೆ ಅಪಘಾತದಿಂದ ಗಾಯ ಮತ್ತು ಅಂಗವೈಕಲ್ಯರಾದರೆ ಅದರ ಪ್ರಮಾಣವನ್ನು ಆಧರಿಸಿ ಗಿಗ್ ಕೆಲಸಗಾರರಿಗೆ ಹಣ ನೀಡಲಾಗುತ್ತದೆ.
  3. ಆಸ್ಪತ್ರೆಗೆ ದಾಖಲಾದರೆ, 1 ಲಕ್ಷದವರೆಗಿನ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.
  4. ಗಿಗ್ ಕಾರ್ಮಿಕರು ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಭವಿಷ್ಯ ನಿಧಿ ಅಥವಾ ಇಎಸ್‌ಐ ಹೊಂದಿದ್ದರೆ ಹಂತವರು ಯೋಜನೆಗೆ ಅರ್ಹರಾಗಿರುವುದಿಲ್ಲ.
  5. ಕೆಲಸದಲ್ಲಿರುವಾಗ ಗಿಗ್  ಕಾರ್ಮಿಕ ಮದ್ಯಪಾನ ಅಥವಾ ಡ್ರಗ್ಸ್‌ನ ಅಮಲಿನಲ್ಲಿ ಅಪಘಾತ ಅಥವಾ ಮೃತಪಟ್ಟರೆ ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ.
  6. ಗಿಗ್ ಕಾರ್ಮಿಕ ಆತ್ಮಹತ್ಯೆಯಿಂದ ಸತ್ತರೆ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ನೋಯಿಸಲು ಅಪಘಾತದ ಕೃತ್ಯವನ್ನು ಮಾಡಿದರೆ ಅಥವಾ ಮಾನಸಿಕ ಅಸ್ಥಿರತೆಯಿಂದ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಪಡೆಯಲು ಸಾಧ್ಯವಿಲ್ಲ.
  7. ಅಪಘಾತ ಅಥವಾ ಸಾವಿನ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ

  1. ರಾಜ್ಯ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
  2. ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ ಮತ್ತು ಇ-ಲೇಬರ್ ಐಡೆಂಟಿಟಿ ಕಾರ್ಡ್ ಸೇರಿದಂತೆ ವೈಯಕ್ತಿಕ ದಾಖಲೆ ಮತ್ತು ಬ್ಯಾಂಕ್ ಖಾತೆ ವಿವರ ನೀಡಿ ನೋಂದಾಯಿಸಿಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್