KPTCL ನೌಕರರಿಗೆ ಸಿಹಿ ಸುದ್ದಿ: ಮುಷ್ಕರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ವೇತನ ಪರಿಷ್ಕರಣೆಗೆ ನಿರ್ಧಾರ

ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ.

KPTCL ನೌಕರರಿಗೆ ಸಿಹಿ ಸುದ್ದಿ:  ಮುಷ್ಕರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ವೇತನ ಪರಿಷ್ಕರಣೆಗೆ ನಿರ್ಧಾರ
ಕೆಪಿಟಿಸಿಎಲ್​ (ಎಡಚಿತ್ರ) ಅಧಿಸೂಚನೆ (ಬಲಚಿತ್ರ)
Follow us
ವಿವೇಕ ಬಿರಾದಾರ
|

Updated on:Mar 15, 2023 | 1:53 PM

ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿದೆ. ಈಗ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ (ESCOM) ನೌಕರರ ವೇತನ ಪರಿಷ್ಕರಣೆ ಮಾಡಿದೆ. 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಈ ಹಿನ್ನೆಲೆ ಕೆಪಿಟಿಸಿಎಲ್​ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ.

ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದ ಕೆಪಿಟಿಸಿಎಲ್​ ನೌಕರರು

ವೇತನ ಹೆಚ್ಚಿಸುವಂತೆ KPTCL ನೌಕರರು ರಾಜ್ಯ ಸರ್ಕಾರಕ್ಕೆ ನೀಡಿದ 14 ದಿನಗಳ ಗಡುವು ನೀಡಿತ್ತು. ಅಲ್ಲದೆ ನಾಳೆ (ಮಾ.16) ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್​ ನೌಕರರ ಸಂಘ ಕರೆ ಕೊಟ್ಟಿತ್ತು. ಈ ಹಿನ್ನೆಲೆ ಎಲ್ಲಾ ಎಸ್ಕಾಂಗಳು ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಸುಮಾರು 50 ಸಾವಿರ ನೌಕರರು ನಾಳೆಯ ಮುಷ್ಕರದಲ್ಲಿ ಭಾಗಿಯಾಗಲಿದ್ದರು. ಈ ಹಿನ್ನೆಲೆ ಎಚ್ಚತ್ತ ಸರ್ಕಾರ ಶೇ20 ರಷ್ಟು ನೌಕರರ ವೇತನವನ್ನು ಹೆಚ್ಚಳ ಮಾಡಿದೆ.

ಇದನ್ನೂ ಓದಿ: ದರ ಬದಲಾವಣೆ ಮಾಡದೇ ಹಾಲಿನ ಕೊರತೆ ನೀಗಿಸಲು ಕೆಎಂಎಫ್​ ಮಾಸ್ಟರ್ ಪ್ಲಾನ್

ಕೆಪಿಟಿಸಿಎಲ್​ ನೌಕರರ ಬೇಡಿಕೆ ಏನು?

  1. ಪ್ರತಿ 5 ವರ್ಷಕ್ಕೆ ಒಮ್ಮೆ ವೇತನ ಪರಿಷ್ಕರಣೆ ಆಗಬೇಕಿತ್ತು, ಆದರೆ ಅದು ಆಗಿಲ್ಲ, ಹೀಗಾಗಿ ಈ ಕೂಡಲೇ ವೇತನ ಪರಿಷ್ಕರಣೆ ಮಾಡಬೇಕು ಎಂದು ನೌಕರರು ಮುಷ್ಕರ ನಡೆಸಲು ಮುಂದಾಗಿದ್ದರು.
  2. ಕೆಪಿಟಿಸಿಎಲ್​ ಹಾಗೂ ಎಸ್ಕಾಂಗಳ ನೌಕರರು ಮತ್ತು ಅಧಿಕಾರಿಗಳ ವೇತನ ಬೇಡಿಕೆ ಪರಿಷ್ಕರಣೆ ಆಗಲೇಬೇಕು. 01-04-2022 ರಿಂದ ಪೂರ್ವನ್ವಯ ಆಗುವಂತೆ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಬೇಕು ಎಂದು ಬೇಡಿಕೆ ಇಟ್ಟಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Wed, 15 March 23