AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ

ಕರ್ನಾಟಕ ಸರ್ಕಾರವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ "ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ" ಎಂದು ಹೊಸದಾಗಿ ನಾಮಕಾರಣ ಮಾಡಿದೆ.ಬಳ್ಳಾರಿ ಘಟನೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಎರಡೂ ಇಲಾಖೆಗಳ ಕಾರ್ಯಗಳು ಹೋಲುವುದರಿಂದ ಈ ವಿಲೀನ ಸೂಕ್ತ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಈಗಾಗಲೇ ಹಲವು ರಾಜ್ಯಗಳಲ್ಲಿ ಈ ರೀತಿಯ ವಿಲೀನವಾಗಿದೆ.

ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ
ವಿಧಾನಸೌಧ
ಪ್ರಸನ್ನ ಗಾಂವ್ಕರ್​
| Edited By: |

Updated on:Dec 14, 2024 | 12:01 PM

Share

ಬೆಂಗಳೂರು, ಡಿಸೆಂಬರ್​ 14: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ (Food safety and quality Department) ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು (Drug Control Department) ವಿಲೀನಗೊಳಿಸಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ ನೀಡಲಾಗಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯ ಬಾಣಂತಿಯರ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂಬ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಔಷಧ ನಿಯಂತ್ರಣ ಇಲಾಖೆ ವಿರುದ್ಧ ಹಲವು ಆರೋಪ ಕೇಳಿಬಂದಿದ್ದವು. ಇದು ರಾಜ್ಯ ಸರ್ಕಾರ ಮುಜುಗರಗೊಳ್ಳುವಂತೆ ಮಾಡಿತ್ತು. ಬಳಿಕ, ಡಿಸೆಂಬರ್​ 6 ರಂದು ನಡೆದ ಸಂಪುಟ ಸಭೆಯಲ್ಲಿ ಎರಡೂ ಇಲಾಖೆ ವಿಲೀನಕ್ಕೆ ಸಚಿವರು ಒಪ್ಪಿಗೆ ಸೂಚಿಸಿದ್ದರು. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತ ಬಳಿಕ ಸರ್ಕಾರ ಎರಡೂ ಇಲಾಖೆಗಳನ್ನು ವಿಲೀನಗೊಳಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಯ ಕಾರ್ಯವೈಖರಿಗಳು ಬಹುತೇಕ ಒಂದೇ ರೀತಿಯಲ್ಲಿರುವುದರಿಂದ ಈ ಎರಡು ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇವರ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಎರಡು ಇಲಾಖೆಗಳ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ.

ರಾಜಸ್ಥಾನ, ಮಹಾರಾಷ್ಟ್ರ, ತಮಿಳನಾಡು, ಉತ್ತರ ಪ್ರದೇಶ, ಗುಜರಾತ್​, ಅಸ್ಸಾಂ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಈಗಾಗಲೇ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಗಳನ್ನು ವಿಲೀನಗೊಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:00 pm, Sat, 14 December 24

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!