ಕರ್ನಾಟಕ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಕರುಣಿಸಿದ ಸರ್ಕಾರ
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಕೆಪಿಎಸ್ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ಘೋಷಿಸಿದೆ. ಇದು ಸರ್ಕಾರಿ ಶಾಲೆಗಳನ್ನು ಬಲಪಡಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಯೋಜನೆಯ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಜುಲೈ 11: ಕೆಪಿಎಸ್ (KPS) ಸರ್ಕಾರಿ ಶಾಲೆಯಲ್ಲಿ ಎಲ್ಕೆಜಿ ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ! ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್
ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ!
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.#KarnatakaPublicSchool pic.twitter.com/tnvwFFEMij
— DK Shivakumar (@DKShivakumar) July 11, 2025
ಉಚಿತ ಬಸ್ ವ್ಯವಸ್ಥೆ ಯಾರಿಗೆ ಲಾಭ?
- ಸರ್ಕಾರಿ ಶಾಲೆ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ
- ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು
- ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಸದುಪಯೋಗ
- ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದಿಂದ ಮಹತ್ವದ ಚಿಂತನೆ
- ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ಹೆಜ್ಜೆ
ಇದನ್ನೂ ಓದಿ: SSLCಯಲ್ಲಿ ಕನ್ನಡ ಭಾಷಾ ಪರೀಕ್ಷೆಯ ಅಂಕ ಕಡಿತಕ್ಕೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ: ಸಚಿವ ಮಧು ಬಂಗಾರಪ್ಪಗೆ ಪತ್ರ
ಇನ್ನು ಈಗಾಗಲೇ ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಸೇವೆ ಒದಗಿಸುತ್ತಿದೆ. ಈ ಶಕ್ತಿ ಯೋಜನೆ ಜಾರಿಗೆ ಬಂದು ವರ್ಷಗಳೇ ಕಳೆದಿದೆ. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಟಿಕೆಟ್ ಪಡೆದು ಸಂಚರಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:50 am, Fri, 11 July 25







