AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರಿಗೆ ಭರ್ಜರಿ ಆಫರ್, ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ

Traffic Fine: ರಾಜ್ಯ ಸರಕಾರವು ಪೊಲೀಸ್ ಇಲಾಖೆಯ ಇ-ಚಲನ್‌ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೇಲೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಿಸಿದೆ. ಟ್ರಾಫಿಕ್ ರೂಲ್ಸ್​ ಉಲ್ಲಂಘಿಸಿ ದಂಡ ಪಾವತಿಸಬೇಕಿರುವ ವಾಹನ ಸವಾರರು ಆನ್‌ಲೈನ್ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ಕಟ್ಟಬಹುದು. ಹಾಗಾದ್ರೆ, ಈ ಡಿಸ್ಕೌಂಟ್ ಆಫರ್ ಎಲ್ಲಿಂದ ಎಲ್ಲಿಯವರೆಗೆ ಎನ್ನುವ ಮಾಹಿತಿ ಇಲ್ಲಿದೆ.

ವಾಹನ ಸವಾರರಿಗೆ ಭರ್ಜರಿ ಆಫರ್, ಮತ್ತೊಮ್ಮೆ ಟ್ರಾಫಿಕ್ ಫೈನ್ 50% ರಿಯಾಯಿತಿ ಘೋಷಣೆ
Traffic Fines
Kiran Surya
| Edited By: |

Updated on:Nov 21, 2025 | 11:03 AM

Share

ಬೆಂಗಳೂರು, (ನೆಂಬರ್ 20): ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ (traffic violation fines discount) ಮೇಲೆ 50% ರಿಯಾಯಿತಿ ಘೋಷಿಸಿದೆ. ಈ ಸಂಬಂಧ ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಇಂದು (ನವೆಂಬರ್ 20) ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಸೌಲಭ್ಯವು ನಾಳೆಯಿಂದ ಅಂದರೆ ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ಜಾರಿಯಲ್ಲಿರಲಿದ್ದು, ಈ ಅವಧಿಯಲ್ಲಿ ಚಾಲಕರು ತಮ್ಮ ಬಾಕಿ ದಂಡವನ್ನು ಅರ್ಧ ಮೊತ್ತಕ್ಕೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಸಂಚಾರ ದಂಡ ರಿಯಾಯಿತಿ ಕುರಿತಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಪರಿಶೀಲಿಸಿದ ಬಳಿಕ, ಸರ್ಕಾರವು ಅದನ್ನು ಅಂಗೀಕರಿಸಿ ತಕ್ಷಣ ಜಾರಿಗೆ ತರಲು ಆದೇಶ ಹೊರಡಿಸಿದೆ. ಕಳೆದ ಬಾರಿ ದಂಡ ರಿಯಾಯಿತಿ ನೀಡಿದಾಗ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಈ ಆಫರ್ ನೀಡಲಾಗಿದ್ದು, ಸರ್ಕಾರದ ಆದೇಶದಂತೆ ನಾಳೆಯಿಂದಲೇ ಅಂದರೆ ನವೆಂಬರ್ 21ದಿಂದಲೇ ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.

ಎಲ್ಲಿ ದಂಡ ಕಟ್ಟಬೇಕು?

ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್‌ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್‌ ಹಾಗೂ ಬೆಂಗಳೂರು ಒನ್‌ ವೆಬ್‌ಸೈಟ್‌ಗಳಲ್ಲಿ ವಿವರ ಪಡೆದು ಪಾವತಿಸಬಹುದು. ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್‌ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟಬಹುದಾಗಿದೆ. ಇನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್‌ ಪೊಲೀಸ್‌ (ಕೆಎಸ್‌ಪಿ) ಆ್ಯಪ್‌ ಬಿಟಿಪಿ ಅಸ್ತ್ರಂ ಮುಖಾಂತರವೂ ಖುದ್ದಾಗಿ ದಂಡ ಪಾವತಿಸಬಹುದಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಫೇಸ್​ಬುಕ್ ಸಂದೇಶ

ಸಂಚಾರ ನಿಯಮ ಉಲ್ಲಂಘನೆಯ ನೂರಾರು ಕೋಟಿ ರೂ. ದಂಡ ಕಟ್ಟದೆ ವಾಹನ ಸವಾರರು ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ, ಸಾರಿಗೆ ಇಲಾಖೆ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಪ್ರಾಧಿಕಾರ ಜಂಟಿ ಸಭೆ ನಡೆಸಿ 2023ರಲ್ಲಿ ಮೊದಲ ಬಾರಿಗೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿಗೆ ಶಿಫಾರಸು ಮಾಡಿದ್ದವು. ಇದಕ್ಕೆ ಸರ್ಕಾರ ಸಹ ಒಪ್ಪಿ ರಿಯಾಯಿತಿ ಘೋಷಿಸಿತ್ತು. ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ವಾಹನ ಸವಾರರು ಹೆಚ್ಚು ಆಸಕ್ತಿ ತೋರಿಸಿ ಮೊದಲ ಹಂತದಲ್ಲಿ ರಾಜ್ಯಾದ್ಯಂತ 120 ಕೋಟಿ ರೂ.ಗಳಿಗೂ ಹೆಚ್ಚು ದಂಡ ಪಾವತಿಯಾಗಿತ್ತು. ಬಳಿಕ ದಂಡ ಪಾವತಿ ಅವಧಿಯನ್ನು ಹಂತ- ಹಂತವಾಗಿ ವಿಸ್ತರಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Thu, 20 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್