AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?

Age relaxation for job: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ದಸರಾ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರದ ಸಿವಿಲ್ ನೇರ ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಮಹತ್ವದ ಆದೇಶ ಹೊರಡಿಸಲಾಗಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದೆ.

ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್: 3 ವರ್ಷ ವಯೋಮಿತಿ ಸಡಿಲಿಕೆ, ಯಾವ ವರ್ಗಕ್ಕೆ ಎಷ್ಟು?
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Sep 29, 2025 | 9:26 PM

Share

ಬೆಂಗಳೂರು, (ಸೆಪ್ಟೆಂಬರ್ 29): ನೇಮಕಾತಿಗಳಲ್ಲಿ 3 ವರ್ಷಗಳ ವಯೋಮಿತಿ ಸಡಿಲಿಕೆ (3 year Age relaxation) ಮಾಡಿ ರಾಜ್ಯ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಇಂದು (ಸೆಪ್ಟೆಂಬರ್ 29) ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆಯಾ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಸಲಾಗಿದ್ದು, ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳಂತೆ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಅನ್ವಯವಾಗಲಿದೆ.

ಈಗ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಸರ್ಕಾರ ಇದೀಗ 3 ವರ್ಷಗಳ ಸಡಿಲಿಕೆ ಮಾಡಿದೆ. ಈ ವಯೋಮಿತಿ ಸಡಿಲಿಕೆ 2027 ರ ಡಿಸೆಂಬರ್ 31ರೊಳಗೆ ಸರ್ಕಾರ ಹೊರಡಿಸುವ ಎಲ್ಲ ನೇರ ನೇಮಕಾತಿಗಳಿಗೂ ಕೇವಲ ಒಂದು ಬಾರಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೂ ಅನ್ವಯಿಸಲಿದೆ.

ಇದನ್ನೂ ಓದಿ: WCD Chikkaballapur Recruitment 2025: 274 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು

2019ರಿಂದಲೂ ಕೋವಿಡ್ ಹಾಗೂ ಮತ್ತಿತರೆ ಕಾರಣಗಳಿಂದ ನೇರನೇಮಕಾತಿಗಳಿಗೆ ಸರ್ಕಾರ ಅಧಿಸೂಚನೆ ಹೊರಡಿಸಲಿಲ್ಲ. ಪಿಎಸ್‌ಐ ಹಾಗೂ ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಪರೀಕ್ಷೆ ನಡೆಸಿತ್ತಿದ್ದಾರೂ ನೇಮಕಾತಿ ಆದೇಶ ಇನ್ನೂ ನೀಡಿಲ್ಲ. ಇದರಿಂದ ಸರ್ಕಾರಿ ಕೆಲಸವನ್ನೇ ನೆಚ್ಚಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಂಡಿರುವ ಲಕ್ಷಾಂತರ ಯುವಕರು ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದರು.

ವಯೋಮಿತಿ ಸಡಿಲಿಕೆ ಎಷ್ಟು?

  1.  ಸಾಮಾನ್ಯ ವರ್ಗ – 35 ವರ್ಷದಿಂದ 38 ವರ್ಷ
  2.  ಒಬಿಸಿ – 38 ವರ್ಷದಿಂದ 41 ವರ್ಷ
  3.  ಎಸ್‌ಸಿ/ಎಸ್‌ಟಿ/ಪ್ರವರ್ಗ-1 – 40 ವರ್ಷದಿಂದ 43 ವರ್ಷ

ಶಿಕ್ಷಕರ ನೇಮಕಾತಿ

  • SC/ST/OBC 42 ಇತ್ತು, 45 ಆಗುತ್ತೆ
  • ಸಾಮಾನ್ಯ – 40 ಇತ್ತು, 43 ಆಗುತ್ತೆ

SDA/FDA/ಗ್ರೂಪ್ ಸಿ ಹುದ್ದೆ

  • SC/ST/OBC – 35 ಇತ್ತು, 38 ಆಗುತ್ತೆ
  • ಸಾಮಾನ್ಯ – 37 ಇತ್ತು, 40 ಆಗುತ್ತೆ

ಪೊಲೀಸ್ ಕಾನ್ಸ್​ ಟೇಬಲ್ ನೇಮಕಾತಿ

  • SC/ST/OBC – 27 ಇತ್ತು, 30 ಆಗುತ್ತೆ
  • ಸಾಮಾನ್ಯ – 25 ಇತ್ತು, 28 ಆಗುತ್ತೆ

ಪೊಲೀಸ್ ಸಭ್ ಇನ್ಸ್​ ಪೆಕ್ಟರ್​

  • SC/ST/OBC – 32 ಇತ್ತು, 35 ಆಗುತ್ತೆ
  • ಸಾಮಾನ್ಯ – 30 ಇತ್ತು, 33 ಆಗುತ್ತೆ

ಕೆಎಎಸ್

  • SC/ST/OBC 40 ಇತ್ತು, 43 ಆಗುತ್ತೆ
  • ಸಾಮಾನ್ಯ 37 ಇತ್ತು, 40 ಆಗುತ್ತೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ