AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, ಮೃತನ ತಾಯಿ ಹೇಳಿದ್ದೇನು?

Kalaburagi BJP Worker Suicide Case: ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಇನ್ನು ಶಿವಕುಮಾರ್ ಆತ್ಮಹತ್ಯೆಗೆ ತಾಯಿ ಹೇಳಿದ್ದೇನು? ತಮ್ಮ ಮೇಲೆ ಕೇಳಿಬಂದಿರುವ ಆರೋಪಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳುವುದೇನು? ಈ ಬಗ್ಗೆ ಗೃಹ ಸಚಿವ ಪರಮೇಶ್ವರ್​ ಸಹ ಈ ಬಗ್ಗೆ ಮಾತನಾಡಿದ್ದಾರೆ. ಈ ಎಲ್ಲಾ ವಿವರ ಇಲ್ಲಿದೆ.

ಕಲಬುರಗಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, ಮೃತನ ತಾಯಿ ಹೇಳಿದ್ದೇನು?
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 20, 2023 | 1:07 PM

Share

ತುಮಕೂರು/ಕಲಬುರಗಿ, (ಅಕ್ಟೋಬರ್ 20): ಕಲಬುರಗಿ (Kalaburagi) ಜಿಲ್ಲೆಯ ಬಿಜೆಪಿ (BJP) ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆಡಿಯೋ ರೆಕಾರ್ಡ್​ ಮಾಡಿದ್ದ ಶಿವಕುಮಾರ್, ನನ್ನ ಸಾವಿಗೆ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಕಾಂಗ್ರೆಸ್​​ ಕಾರ್ಯಕರ್ತರು ಎಂದು ಗಂಭೀರ ಆರೋಪ ಮಾಡಿದ್ದ. ಆದ್ರೆ, ಇದೀಗ ಶಿವಕುಮಾರ್ ಪತ್ನಿ ಮಲ್ಲಮ್ಮ ಅವರು ರೈತ ಆತ್ಮಹತ್ಯೆ ಎಂದು ದೂರು ದಾಖಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ರಾಜ್ಯ ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಇಂದು (ಅಕ್ಟೋಬರ್ 20): ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಪ್ರಕರಣದ ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಹೊರ ಬರಲಿದೆ. ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಿಕೆ ಕೊಡುತ್ತಿದ್ದಾರೆ. ಆ ಹೇಳಿಕೆಗಳ ಬಗ್ಗೆ ತನಿಖೆ ಮಾಡಬೇಕಾಗುತ್ತದೆ. ಸಮಗ್ರ ತನಿಖೆ ಪರಿಶೀಲನೆ ಆಗಲಿ ಎಂದು ಸಿಐಡಿಗೆ ಕೊಟ್ಟಿದ್ದು, ವರದಿಯಲ್ಲಿ ಏನು ಬರುತ್ತೆ ಎಂದು ನೋಡಿಕೊಂಡು ಮುಂದುವರೆಯುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಶಿವಕುಮಾರ್ ಪತ್ನಿ ಹೇಳುವುದೇನು?

ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್ ತಾಯಿ ಸುಶೀಲಾಬಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದಾನೆ ಎಂದು ನನಗೆ ಗೋತ್ತಿಲ್ಲ. ನಸುಕಿನ ಜಾವ 4:30 ಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗ ಸಾಲ ಮಾಡಿಕೊಂಡಿದ್ದ. ಆದ್ರೆ, ಎಷ್ಟು ಸಾಲ ಎಂದು ನಮಗೂ ಹೇಳಿಲ್ಲ. ಎರಡ್ಮೂರು ದಿನದಿಂದ ನನ್ನ ಮಗ ಊಟ ಮಾಡಿರಲಿಲ್ಲ. ಯಾವುದೇ ರೀತಿಯ ಗಲಾಟೆ ಆಗಿರಲಿಲ್ಲ . ಬಿಜೆಪಿ ಪಕ್ಷದಲ್ಲಿ ಓಡಾಡಿಕೊಂಡು ಕೆಲಸ ಮಾಡುತ್ತಿದ್ದ. ಬಿಜೆಪಿ ಕಾಂಗ್ರೆಸ್ ಗಲಾಟೆ ಬಗ್ಗೆ ನನಗೆ ಗೊತ್ತಿಲ್ಲ. ಸಚಿವ ಶರಣಪ್ರಕಾಶ್ ಹೆಸರು ಹೇಳಿರುವ ಆಡಿಯೋ ಬಗ್ಗೆ ಗೊತ್ತಿಲ್ಲ. ನಾವು ಅತ್ತೆ ಸೊಸೆ ಮನೆಯಲ್ಲಿ ಇರುತ್ತೇವೆ. ಹಾಗಾಗಿ ಯಾವುದೇ ಗಲಾಟೆ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಚಿವರ ಮೇಲಿನ ಆರೋಪ ತಮಗೆ ಗೊತ್ತಿಲ್ಲ ಎಂದಿದ್ದಾರೆ.

ಆರೋಪವನ್ನು ತಳ್ಳಿಹಾಕಿದ ಸಚಿವ

ಇನ್ನು ತಮ್ಮ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಖುದ್ದು ಸಚಿವ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಶಿವಕುಮಾರ್​ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ಆತ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಗೊತ್ತಿಲ್ಲ. ಯಾವ ಅರ್ಥದಲ್ಲಿ ಆಡಿಯೋದಲ್ಲಿ ಹೇಳಿದ್ದಾನೋ ನನಗೆ ಗೊತ್ತಿಲ್ಲ. ಅವರ ಬಗ್ಗೆಯೇ ನನಗೆ ಗೊತ್ತಿಲ್ಲ, ನಾನು ಯಾಕೆ ಒತ್ತಡ ಹೇರಲಿ ಎಂದು ತಮ್ಮ ಮೇಲಿನ ಆರೋಪನ್ನು ತಳ್ಳಿಹಾಕಿದರು.

ಇನ್ನು ಇದೇ ವೇಳೆ ರೈತ ಆತ್ಮಹತ್ಯೆ ಪ್ರಕರಣ ದಾಖಲಿಸಲು ಮೃತ ಶಿವಕುಮಾರ್ ಕುಟುಂಬದ ಮೇಲೆ ಸಚಿವರು ಒತ್ತಡ ಹೇರಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ರೈತ ಆತ್ಮಹತ್ಯೆ ಕೇಸ್ ಕೊಡಲಿ ಎಂದು ನಾನು ಯಾವ ಒತ್ತಡ ಹೇರಿಲ್ಲ. ಬಿಜೆಪಿಯವರು ಸೋಲಿನ ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ ಆಡಿಯೋ ಬಗ್ಗೆ ಪೊಲೀಸರು ತನಿಖೆ ಮಾಡಿದಾಗ ಸತ್ಯ ಗೊತ್ತಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ