AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಮೊನ್ನೇ ಅಂದರೆ ಜೂನ್ 18ರಂದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದಿದ್ದ ಸಂಪುಟ ಸಭೆ ತೀರ್ಮಾನದಂತೆ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಲಾಗಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಪೂರ್ಣಗೊಂಡ ವಾಸದ ಮನೆ ಕಟ್ಟಡಗಳಿಗೆ ಒಸಿ ಪಡೆಯುವುದರಿಂದ ವಿನಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ, ಇದು ಯಾರ್ಯಾರಿಗೆ ಅನ್ವಯವಾಗಲಿದೆ? ಯಾವ ಅರ್ಜಿ ಸಲ್ಲಿಸಬೇಕು ಎನ್ನುವ ಡಿಟೇಲ್ಸ್ ಇಲ್ಲಿದೆ.

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ ನೀಡಿ ಸರ್ಕಾರ ಆದೇಶ, ಅರ್ಜಿ ಸಲ್ಲಿಸಲು 15 ದಿನ ಅವಕಾಶ
Dk Shivakumar
Anil Kalkere
| Edited By: |

Updated on: Jun 22, 2026 | 8:56 PM

Share

ಬೆಂಗಳೂರು, (ಜೂನ್ 22): ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ (Electricity Connection) ಕಾಯುತ್ತಿರುವವರಿಗೆ ಕೊನೆಗೂ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಸಿಯಿಂದ (Occupancy Certificate (OC)) ವಿನಾಯಿತಿ ನೀಡಿ ಡಿಕೆ ಶಿವಕುಮಾರ್ (DK Shivakumar) ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ಅಥವಾ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವ ಪ್ರಕರಣಗಳಿಗೆ ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಂಡಿರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಿ ಇಂಧನ ಇಲಾಖೆ ಆದೇಶಿಸಿದ್ದು, ಅರ್ಹರು ಅರ್ಜಿ ಸಲ್ಲಿಕೆಗೆ 15 ದಿನಗಳವರೆಗೆ ಅವಕಾಶ ಕಲ್ಪಿಸಲಾಗಿದೆ.

ಮುಖ್ಯಾಂಶಗಳು

  • ರಾಜ್ಯದಲ್ಲಿ ವಸತಿ ಕಟ್ಟಡಗಳ ವಿದ್ಯುತ್ ಸಂಪರ್ಕಕ್ಕೆ ಒಸಿ ವಿನಾಯಿತಿ
  • ಮೇ 31ರೊಳಗೆ ಪೂರ್ಣಗೊಂಡ ವಸತಿ ಕಟ್ಟಡಗಳಿಗೆ ವಿನಾಯಿತಿ
  • ಒಸಿ ಇಲ್ಲದೆ ಅರ್ಜಿ ಸಲ್ಲಿಸಲು ಇಂದಿನಿಂದ 15 ದಿನಗಳ ಕಾಲಾವಕಾಶ‌
  • ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಶಾಂತರಾಮುರಿಂದ ಆದೇಶ
  • ಜೂ.20ರಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು

ಅರ್ಜಿ ಸಲ್ಲಿಸಲು 15 ದಿನ ಅವಕಾಶ

ಈ ವಿನಾಯಿತಿ 31 ಮೇ 2026ರೊಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಳಿಸಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಇಂತಹ ಅರ್ಜಿದಾರರಿಗೆ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ ದೊರೆಯಲಿದೆ.

ಇದನ್ನೂ ಓದಿ: 25 ರಿಂದ 30 ಹೊಸ ಜನಪ್ರಿಯ ಯೋಜನೆಗಳ ಘೋಷಣೆಗೆ ಡಿಕೆಶಿ ಸರ್ಕಾರ ಚಿಂತನೆ, ಎಚ್ಚರಿಕೆ ಕೊಟ್ಟ ಆರ್ಥಿಕ ತಜ್ಞರು!

ಯಾರ್ಯಾರಿಗೆ ಇದು ಅನ್ವಯ?

ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಮಹಾನಗರ ಪಾಲಿಕೆಗಳ ವ್ಯಾಪ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಈ ಆದೇಶ ಅನ್ವಯವಾಗಲಿದೆ. 2400 ಚದರ ಅಡಿಗಳವರೆಗಿನ ಅಳತೆಯ ನಿವೇಶನಗಳ ವಸತಿ ಕಟ್ಟಡಗಳು, ಜೊತೆಗೆ ಜಿ+3 ಅಥವಾ ಸ್ಟಿಲ್ಟ್ ಪಾರ್ಕಿಂಗ್+4 ಮಹಡಿಗಳ ವಸತಿ ಕಟ್ಟಡಗಳಿಗೆ ನಿಯಮ ಅನ್ವಯಿಸುತ್ತದೆ. ಗ್ರಾಮೀಣ ಭಾಗದ ರೈತರ ಮನೆ, ತೋಟದ ಮನೆ, ಕೃಷಿ ಉಪಕರಣದ ಮನೆ, ದನದ ಕೊಟ್ಟಿಗೆ ಹಾಗೂ ರೇಷ್ಮೆ ಗೂಡಿನ ಮನೆಗಳಿಗೂ ವಿನಾಯಿತಿ ನೀಡಲಾಗಿದ್ದು, 15 ದಿನಗಳ ಒಳಗೆ ಕಟ್ಟಡ ಮಾಲೀಕರು ಕಟ್ಟಡದ ಜೊತೆಗಿನ ಭಾವಚಿತ್ರ ಮತ್ತು ಜಿಪಿಎಸ್ ದಾಖಲೆಯನ್ನು ಅರ್ಜಿ ಜೊತೆಗೆ ಸಲ್ಲಿಸಬೇಕು.

ಇದನ್ನೂ ನೋಡಿ: ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು

ಇನ್ನು, ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ – ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಲಾಗಿದೆ. ವಿದ್ಯುತ್‌ ಸರಬರಾಜು ಕಂಪನಿಗಳು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲು ತೀರ್ಮಾನಿಸಲಾಗಿದೆ. ಇನ್ನು ಈ ನಿರ್ಧಾರದಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸುಗಮವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.

ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 2400 ಚದರ್​ ಅಡಿಗಳವರೆಗೆ (+20% ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ನಿವೇಶನಗಳಲ್ಲಿ ನಿರ್ಮಿಸಲಾದ ಜಿ+3 ಅಂತಸ್ತಿನ ವಸತಿ ಕಟ್ಟಡಗಳು ಅಥವಾ ಸ್ಟಿಲ್ಟ್ ಪಾರ್ಕಿಂಗ್ + 4 ಮಹಡಿಗಳನ್ನು ಹೊಂದಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ವಿಶೇಷ ವಿನಾಯಿತಿ ನೀಡಲು ತೀರ್ಮಾನಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ