AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡ್ಮೂರು ಜಿಲ್ಲೆಯಲ್ಲಿ ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ: ಅಂತ್ಯಕ್ರಿಯದ್ದೇ ಗೊಂದಲ

ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು 114ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ರಾಜ್ಯ ಸರ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶಿಸಿದೆ. ಸದ್ಯ ಹುಲಿಕಲ್ ಮತ್ತು ಬೇಲೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಗೆ ಎರಡು-ಮೂರು ಸ್ಥಳಗಳನ್ನ ಗೊತ್ತು ಮಾಡಿದ್ದು ಸದ್ಯದಲ್ಲಿಯೇ ನಿರ್ಧರವಾಗಲಿದೆ.

ಎರಡ್ಮೂರು ಜಿಲ್ಲೆಯಲ್ಲಿ ಸಾಲುಮರದ ತಿಮ್ಮಕ್ಕ ಅಂತಿಮ ದರ್ಶನ: ಅಂತ್ಯಕ್ರಿಯದ್ದೇ ಗೊಂದಲ
ಸಾಲುಮರದ ತಿಮ್ಮಕ್ಕ
ಗಂಗಾಧರ​ ಬ. ಸಾಬೋಜಿ
|

Updated on:Nov 14, 2025 | 6:48 PM

Share

ಬೆಂಗಳೂರು, ನವೆಂಬರ್ 14: ಶತಾಯುಷಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Saalumarada Thimmakka) ಅವರು ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ವೃಕ್ಷಮಾತೆ ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಇದೀಗ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತು ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಆದರೆ ಅಂತ್ಯಕ್ರಿಯೆ (funeral) ಎಲ್ಲಿ ನಡೆಯಲಿದೆ ಎಂಬುವುದು ಸದ್ಯ ಗೊಂದಲವಾಗಿದೆ.

114 ವರ್ಷದ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಅಂತಿಮ ದರ್ಶನಕ್ಕೆ ಎಲ್ಲೆಲ್ಲಿ ವ್ಯವಸ್ಥೆ

ಸಾಲುಮರದ ತಿಮ್ಮಕ್ಕ ಅವರ ಸ್ವಗ್ರಾಮ ರಾಮನಗರ ಜಿಲ್ಲೆಯ ಹುಲಿಕಲ್ ಗ್ರಾಮದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಇಂದು ರಾತ್ರಿ 8 ಗಂಟೆಯಿಂದ ಬೇಲೂರಿನಲ್ಲಿ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ವೃಕ್ಷಗಳನ್ನೇ ಮಕ್ಕಳಂತೆ ಸಾಕಿ ಸಲಹಿದ್ದ ಶತಾಯುಷಿ ತಿಮ್ಮಕ್ಕ ಅವರು ಬೇಲೂರು ತಾಲ್ಲೂಕಿನ ಬಳ್ಳೂರು ಗ್ರಾಮದ ಉಮೇಶ್​ರನ್ನ ದತ್ತು ಪಡೆದು ಅವರೊಂದಿಗೆ ನೆಲೆಸಿದ್ದರು. ಹೀಗಾಗಿ ಉಮೇಶ್​​ ಅವರ ಮನೆ ಬಳಿ ಕರೆದುಕೊಂಡು ಹೋಗಿ ಬಳಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ವೃಕ್ಷಮಾತೆ ಭಾವುಕ: ಸಾಯುವ ಮುನ್ನ ಸಾಲುಮರದ ತಿಮ್ಮಕ್ಕ ಜನತೆಗೆ ಕೊಟ್ಟ ಸಂದೇಶವೇನು?

ಸದ್ಯ ಅಂತಿಮ ದರ್ಶನಕ್ಕೆ ಬೇಲೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಉಮೇಶ್ ಅವರು ಬೆಂಗಳೂರಿಗೆ ಮೃತದೇಹ ತೆಗೆದುಕೊಂಡು ಹೋಗಲಿದ್ದಾರೆ.

ಪುತ್ರ ಉಮೇಶ್​ ಹೇಳಿದ್ದಿಷ್ಟು 

ಇನ್ನು ಉಮೇಶ್ ಅವರು​​ ಪ್ರತಿಕ್ರಿಯಿಸಿದ್ದು, ರಾಜ್ಯದ ಜನ ಅಜ್ಜಿಯನ್ನು ತುಂಬಾ ಪ್ರೀತಿಯಿಂದ ನೋಡಿದ್ದೀರಾ ಅವರು ಹೇಳಿದ ದಾರಿಯಲ್ಲಿ ನಡೆಯಿರಿ. ಹುಲಿಕಲ್​​ನಲ್ಲಿ ಅವರ ಮರಗಳ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುತ್ತೇವೆ. ಗೃಹ ಸಚಿವ ಜಿ. ಪರಮೇಶ್ವರ ಅವರು ಬರುತ್ತಾರೆ ಎಂದರು.

ಲಾಲ್ ಬಾಗ್ ಅಥವಾ ಕಬ್ಬನ್ ಪಾರ್ಕ್​​ನಲ್ಲಿ ಸಮಾಧಿ, ಸ್ಮಾರಕ ಮಾಡಲು ಅವಕಾಶ ಕೊಡಿ ಅಂತ ಕೇಳಿದ್ದೇವೆ. ಅಜ್ಜಿಯನ್ನು ಬೆಳೆಸಿದ ಎಲ್ಲರಿಗೂ ಅಂತಿಮ ದರ್ಶನ ಸಿಗುತ್ತದೆ, ಸಿಗಬೇಕು. ಸರ್ಕಾರ ಎಲ್ಲಿ ಅಂತಿಮ ದರ್ಶನಕ್ಕೆ ಸ್ಥಳ ಹೇಳುತ್ತೆ ನಾವು ಸಹಕರಿಸುತ್ತೇವೆ. ಅಪೋಲೋ ಆಸ್ಪತ್ರೆಯ ಎಲ್ಲ ಸಿಬ್ಬಂದಿ ಹಾಗೂ ವೈದ್ಯರು ಉತ್ತಮವಾಗಿ ಸಹಕಾರ ನೀಡಿದರು. ಈಗ ಪಾರ್ಥಿವ ಶರೀರವನ್ನು ಬೇಲೂರಿಗೆ ತೆಗೆದುಕೊಂಡು ಹೋಗುತ್ತೇವೆ. ಬಳಿಕ ಮಾಗಡಿ ಬಳಿಯ ಹುಲಿಕಲ್​ಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

ಅಂತ್ಯಕ್ರಿಯೆ ಎಲ್ಲಿ?

ಅಂತಿಮ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು-ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Saalumarada Thimmakka Death: ಸಾಲುಮರದ ತಿಮ್ಮಕ್ಕ ನಿಧನ; ಮರೆಯಾದ ವೃಕ್ಷಮಾತೆ

ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲೇ ಅಂತ್ಯಕ್ರಿಯೆ ‌ನೆರವೇರಿಸುವಂತೆ ಡಿಸಿ ಯಶವಂತ ಗುರುಕರ್​ಗೆ ಹುಲಿಕಲ್​​ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಹೀಗಾಗಿ ಅಂತ್ಯಕ್ರಿಯೆ ಎಲ್ಲಿ ನಡೆಯಲಿದೆ ಎಂಬುವುದು ಸದ್ಯ ಗೊಂದಲವಾಗಿದೆ.

ವರದಿ: ಲಕ್ಷ್ಮೀ ನರಸಿಂಹ ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:44 pm, Fri, 14 November 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!