ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ಕಾಯ್ದೆ ಅನುಷ್ಠಾನಕ್ಕೆ ನೋಡಲ್ ಅಧಿಕಾರಿ ನೇಮಿಸುವಂತೆ ಸರ್ಕಾರ ಸೂಚನೆ
ಕರ್ನಾಟಕ ಸರ್ಕಾರವು ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಹೊಸ ನಿರ್ದೇಶನಗಳನ್ನು ಹೊರಡಿಸಿದೆ. ಶೀ-ಬಾಕ್ಸ್ ಪೋರ್ಟಲ್‌ನಲ್ಲಿ ದೂರುಗಳನ್ನು ನೋಂದಾಯಿಸಲು ಮತ್ತು ವಿಲೇವಾರಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಎಲ್ಲಾ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಆಂತರಿಕ ದೂರು ಸಮಿತಿಯನ್ನು ರಚಿಸಬೇಕು ಮತ್ತು ಸುಪ್ರೀಂಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.

ಬೆಂಗಳೂರು, ಆಗಸ್ಟ್ 03: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮತ್ತು ಸುಪ್ರೀಂಕೋರ್ಟ್‌ನ (Supreme Court) ನಿರ್ದೇಶನಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ (Women and Child Development Department) ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಸೂಚನೆ ನೀಡಿದ್ದಾರೆ.
- ಇಲಾಖೆ/ಸಚಿವಾಲಯದಲ್ಲಿ ಕಾಯ್ದೆಯ ಅನುಷ್ಠಾನಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದು. ಮತ್ತು ಅಧೀನ ಕಚೇರಿ/ಸಂಸ್ಥೆಗಳ (ಸರ್ಕಾರಿ ಮತ್ತು ಖಾಸಗಿ) ಮಾಹಿತಿ ಮತ್ತು ಆಂತರಿಕ ದೂರು ಸಮಿತಿಯ ಮಾಹಿತಿಯನ್ನು She-Box-Portal ನಲ್ಲಿ ಅಳವಡಿಸಬೇಕು.
- ಪೋರ್ಟಲ್‌ನಲ್ಲಿ/ನೇರವಾಗಿ ಸ್ವೀಕರಿಸಿದ ದೂರುಗಳ ವಿಲೇವಾರಿಯ ವೇಗ ಮತ್ತು ಗುಣಮಟ್ಟವನ್ನು ಮೇಲ್ವಿಚಾರಣೆ ಮಾಡಬೇಕು.
ಇಲಾಖೆಯ ಹಂತದಲ್ಲಿ ಕಾಲಕಾಲಕ್ಕೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2014ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಪರಿಶೀಲನಾ ಸಭೆಗಳನ್ನು ಆಯೋಜಿಸಬೇಕು.
ಇದನ್ನೂ ಓದಿ: ಇತ್ಯರ್ಥ ಮಾಡದ ಸರ್ಕಾರ: ಸಮಸ್ಯೆಯಲ್ಲಿ ಸಿಲುಕಿದ ಧಾರವಾಡ ಕನ್ನಡ ಸಾಹಿತ್ಯ ಪರಿಷತ್, ಏನದು?
ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು, ಸಂಬಂಧಪಟ್ಟ ನೋಡಲ್ ಅಧಿಕಾರಿಗಳು ಕಾಲಕಾಲಕ್ಕೆ ಮಾಹಿತಿಯನ್ನು ಪೋರ್ಟಲ್‌ನಲ್ಲಿ ಅಪ್‌ಡೇಟ್ ಮಾಡಬೇಕು. ಇನ್ನೂ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡದೇ ಇರುವ ಅಧೀನ ಕಚೇರಿ/ಸಂಸ್ಥೆಗಳಲ್ಲಿ ತುರ್ತಾಗಿ ಸಮಿತಿಯನ್ನು ರಚಿಸಬೇಕು ಎಂದು ಸೂಚನೆ ನೀಡಿದ್ದಾರೆ.




