ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಪ್ರಾರಂಭಕ್ಕೆ ಸರ್ಕಾರ ಚಿಂತನೆ: ಸಿಎಂ ಬೊಮ್ಮಾಯಿ

ಆತ್ಮರಕ್ಷಣೆ ಕಲೆಯು ಹೆಣ್ಣು ಮಕ್ಕಳಿಗೆ ಇಂದಿನ ದಿನಮಾನಗಳಲ್ಲಿ ಬಹಳ ಅತ್ಯವಶ್ಯಕವಾಗಿದೆ. ಈಗ ಹುಡುಗಿಯರ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಪ್ರಾರಂಭಕ್ಕೆ ಸರ್ಕಾರ ಚಿಂತನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Dec 24, 2022 | 3:48 PM

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ (Girls Self Defence Courses) ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸ್ವತಃ ಬೆಳಗಾವಿಯಲ್ಲಿ (Belagavi) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದು, ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಆ್ಯಂಟಿ ರೇಪ್ ಫುಟ್‌ವೇರ್ ಎನ್ನುವ ಸಾಧನವನ್ನು ಕಂಡುಹಿಡಿದ 10ನೇ ತರಗತಿ ವಿದ್ಯಾರ್ಥಿನಿ

ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿದ ಬಳಿಕ ಮಾತನಾಡಿದ ಬೊಮ್ಮಾಯಿ, ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ. ಅದರ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.

ಆತ್ಮರಕ್ಷಣೆ ಪ್ರತಿ ನಾಗರಿಕನಿಗೆ ಅಗತ್ಯ. ನಾನು ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಕಳೆದ ಒಂದು ವರ್ಷದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದರು.

ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಆತ್ಮರಕ್ಷಣಾ ಕಲೆ ಅಗತ್ಯ: ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಸಹೋದರಿ ಯರಿಗೆ ಈ ವಿದ್ಯೆ ಕಲಿಸಿದರೆ, ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು. ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ, ಹೆಣ್ಣು ಮಕ್ಕಳಿಗೆ ಹಾಗೂ ಸಮಾಜಕ್ಕೂ ಸುರಕ್ಷತೆ ನೀಡುತ್ತದೆ. ಸುರಕ್ಷಿತ ಸಮಾಜ ನಿರ್ಮಾಣವಾಗಲು ಇದು ಅಗತ್ಯ ಎಂದು ಹೇಳಿದರು.

ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ.ಈ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಭರವಸೆ ನೀಡಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:48 pm, Sat, 24 December 22