Janotsav: ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ

| Updated By: ನಯನಾ ರಾಜೀವ್

Updated on: Aug 18, 2022 | 10:06 AM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆಸಲು ನಿರ್ಧರಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ.

Janotsav: ಬಿಜೆಪಿಯ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ
Basavaraj Bommai
Follow us on

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆಸಲು ನಿರ್ಧರಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ.

ಈ ಮೊದಲು ಜುಲೈ 28ರಂದು ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತಾದರೂ ಆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಸಂಭವಿಸಿದ ಕಾರಣ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ಹೆಚ್ಚಾಗಿದ್ದ ಕಾರಣ ಜನೋತ್ಸವವನ್ನು ಆಗಸ್ಟ್ 28ಕ್ಕೆ ಮುಂದೂಡಲಾಗಿತ್ತು. ಇದೀಗ ಮತ್ತೊಮ್ಮೆ ಜನೋತ್ಸವವನ್ನು ಮುಂದೂಡಲಾಗಿದೆ.

ಗೌರಿ-ಗಣೇಶ ಹಬ್ಬದ ಆಸುಪಾಸಿನಲ್ಲಿ ಕಾರ್ಯಕ್ರಮ ನಡೆಯುವುದರಿಂದ ಪಕ್ಷದ ನಾಯಕರು, ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಪಾಲ್ಗೊಳ್ಳುವುದು ಕಷ್ಟ ಎನ್ನುವ ಕಾರಣಕ್ಕೆ ಮುಂದೂಡಲಾಗಿದೆ ಎನ್ನುವ ಕಾರಣವನ್ನು ಸರ್ಕಾರ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಜು.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಆಯೋಜಿಸಲಾಗಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ನಡೆದಿದ್ದು, ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕರ್ತರಿಂದಲೇ ಸರ್ಕಾರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

Published On - 10:04 am, Thu, 18 August 22