AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಅಭಿಯಾನ’, ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ

ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ ತ್ವರಿತ ಪರಿಹಾರ ಒದಗಿಸಲು ಕರ್ನಾಟಕ ಸರ್ಕಾರ ಮಹತ್ವದ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡುತ್ತಿದೆ. ಸೆಪ್ಟೆಂಬರ್ 5 ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಈ ಅಭಿಯಾನ ಆರಂಭವಾಗಲಿದೆ‌. ಹಾಗಾದ್ರೆ, 'ಪ್ರಜಾಸೇವಾ ಅಭಿಯಾನ' ಸಭೆಗಳ ಆಯೋಜನೆಯ ಪ್ರಮುಖ ಅಂಶಗಳೇನು? ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಹೇಗೆ ಅರ್ಜಿ ಸಲ್ಲಿಸಬೇಕೆನ್ನುವ ವಿವರ ಇಲ್ಲಿದೆ.

ಸರ್ಕಾರದ ಮಹತ್ವಾಕಾಂಕ್ಷೆಯ 'ಪ್ರಜಾಸೇವಾ ಅಭಿಯಾನ', ಸ್ಥಳದಲ್ಲೇ ಸಾರ್ವಜನಿಕರ ಸಮಸ್ಯೆಗೆ ಪರಿಹಾರ
Prajaseva Abhiyan
ಹರೀಶ್ ಜಿ.ಆರ್​.
| Edited By: |

Updated on: Aug 31, 2026 | 4:58 PM

Share

ಬೆಂಗಳೂರು, (ಆಗಸ್ಟ್ 31): ಸಾರ್ವಜನಿಕರು ತಮ್ಮ ಕುಂದುಕೊರತೆಗಳು ಹಾಗೂ ಯೋಜನೆಗಳ ಫಲಾನುಭವಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಅಭಿಯಾನ (prajaseva abhiyan) ಎಂಬ ವಿನೂತನ ಯೋಜನೆ ಜಾರಿಗೆ ತರುತ್ತಿದೆ. ಪ್ರಜಾಸೇವಾ ಇಲಾಖೆಯಡಿ ಜಾರಿಯಾಗುತ್ತಿರುವ ಈ ಅಭಿಯಾನ ಸೆಪ್ಟೆಂಬರ್ 5 ರಿಂದ ವಿಜಯನಗರ (Vijayanagara) ಜಿಲ್ಲೆಯ ಕೂಡ್ಲಿಗಿಯಿಂದ ಪ್ರಾರಂಭವಾಗಲಿದೆ. ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವ ಉದ್ದೇಶದಿಂದ ಪ್ರತಿ ಶನಿವಾರ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ.

ಜನರ ದೂರುಗಳಿಗೆ ಸ್ಥಳದಲ್ಲೇ ತ್ವರಿತ ಪರಿಹಾರ

ಮುಂದಿನ ದಿನಗಳಲ್ಲಿ ಕ್ಷಣಾರ್ಧದಲ್ಲೇ ಜನರ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ. ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಪ್ರಯೋಜನಗಳು ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನು ಅಧಿಕಾರಿಗಳ, ಜನಪ್ರತಿನಿಧಿಗಳ ಬಳಿ ಹೇಳಿಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಹರ ಸಾಹಸ ಪಡಬೇಕಾದ ಪರಿಸ್ಥಿತಿ ಇತ್ತು. ಆದರೆ, ಈಗ ಹಾಗಿಲ್ಲ. ಕ್ಷಣಾರ್ಧದಲ್ಲಿ ಯಾವುದೇ ರೀತಿಯ ಕುಂದುಕೊರತೆಗಳನ್ನು ಸರ್ಕಾರದ ಬಳಿ ಹೇಳಿಕೊಳ್ಳಬಹುದು. ಪ್ರತಿ ಶನಿವಾರ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಜಂಟಿ ಸಭೆಗಳು ನಡೆಯಲಿದ್ದು, ಸ್ಥಳದಲ್ಲೇ ತ್ವರಿತ ಪರಿಹಾರ ಸಿಗಲಿದೆ.

ಇದನ್ನೂ ನೋಡಿ: ಗೃಹಲಕ್ಷ್ಮಿ ಯೋಜನೆ ಬಿಗ್‌ ಅಪ್ಡೇಟ್: ಮತ್ತೆ ಮರುಪರಿಶೀಲನೆ, ಫಲಾನುಭವಿಗಳು ಏನ್ಮಾಡ್ಬೇಕು ಗೊತ್ತಾ?

‘ಪ್ರಜಾಸೇವಾ ಅಭಿಯಾನ’ ಸಭೆಗಳ ಪ್ರಮುಖ ಅಂಶಗಳು!

  • 1ನೇ ಮತ್ತು 3ನೇ ಶನಿವಾರ: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಭೆ.
  • 2ನೇ ಮತ್ತು 4ನೇ ಶನಿವಾರ: ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು/ಹೋಬಳಿ ಸಭೆ.
  • ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮನೆ-ಮನೆಗೆ ಕರಪತ್ರ ವಿತರಣೆ
  • AI ಆಧಾರಿತ ಕಾಲ್ ಸೆಂಟರ್ ಮೂಲಕ ಪ್ರತಿಯೊಬ್ಬ ನಾಗರಿಕರಿಗೂ ಆಟೋಮೆಟೆಡ್ ಕರೆಗಳು
  • ಗ್ರಾಮ ಒನ್ ಮೂಲಕ ಮುಂಗಡ ಅರ್ಜಿ ಹಾಗೂ ಸ್ಥಳದಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

ಸರ್ಕಾರದ ಕ್ಯಾರೆಂಡರ್ ಆಫ್ ಈವೆಂಟ್ಸ್ ಪ್ರಕಾರ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ 2ನೇ ಮತ್ತು 4ನೇ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ಸಭೆಗಳು ನಡೆಯಲಿವೆ. ಸಭೆಯ ಬಗ್ಗೆ ಸಾರ್ವಜನಿಕರಿಗೆ 15 ದಿನ ಮುಂಚಿತವಾಗಿ ಕರಪತ್ರಗಳನ್ನು ತಲುಪಿಸಲಾಗುತ್ತದೆ. ಅಲ್ಲದೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧಾರಿತ ಕಾಲ್ ಸೆಂಟರ್ ಮೂಲಕ ಸಾರ್ವಜನಿಕರಿಗೆ ಆಡಿಯೋ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಮೂರು ಹಂತದ ದೂರು ಪರಿಶೀಲನಾ ವ್ಯವಸ್ಥೆ!

  • ಬುಧವಾರ ಬೆಳಿಗ್ಗೆ 9 ರಿಂದ 11ರ ವರೆಗೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಾಗೂ ಇಒ ಪರಿಶೀಲನೆ.
  • ಬುಧವಾರ ಬೆಳಿಗ್ಗೆ 11ರಿಂದ ಮಧ್ಯಾನ್ಹ 1ರ ತನಕ ಉಪವಿಭಾಗ ಮಟ್ಟದಲ್ಲಿ ಎಸಿ (AC) ಪರಿಶೀಲನೆ
  • ಬುಧವಾರ ಮಧ್ಯಾಹ್ನ 3 ರಿಂದ 5ರವೆಗೆ : ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ (DC) ಪರಾಮರ್ಶೆ.
  • ನಿಗದಿತ ಅವಧಿಯಲ್ಲಿ ಬಗೆಹರಿಯದ ಅರ್ಜಿಗಳು ಇಲಾಖಾ ಮುಖ್ಯಸ್ಥರಿಗೆ ಆಟೋ-ಎಸ್ಸಲೇಷನ್!

ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅರ್ಜಿಗಳನ್ನು ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲಿಸಲಾಗುತ್ತದೆ. ಬೆಳಿಗ್ಗೆ 9 ರಿಂದ 11 ರವರೆಗೆ ತಾಲ್ಲೂಕು ಮಟ್ಟದಲ್ಲಿ, 11 ರಿಂದ 1 ಗಂಟೆಯವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3 ರಿಂದ 5 ರವರೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ. ಕಾಲಮಿತಿಯಲ್ಲಿ ಪರಿಹಾರ ಸಿಗದ ಅರ್ಜಿಗಳು ಸ್ವಯಂಚಾಲಿತವಾಗಿ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ವರ್ಗಾವಣೆಯಾಗುತ್ತವೆ. ಕುಂದುಕೊರತೆಗಳಿಗಾಗಿ ಸಾರ್ವಜನಿಕರು 1902 ಸಹಾಯವಾಣಿ ಅಥವಾ ವೆಬ್‌ಸೈಟ್ ಬಳಸಬಹುದಾಗಿದೆ.

ಒಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಪ್ರಜಾಪ್ರಭುತ್ವದ ಆಶಯದಂತೆ ಜನರ ದೂರುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಜಾರಿಯಾಗುತ್ತಿರುವ ಈ ಅಭಿಯಾನ ರಾಜ್ಯಕ್ಕೆ ಮಾದರಿಯಾಗುವ ನಿರೀಕ್ಷೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ