ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 16, 2021 | 4:07 PM

ಬೆಂಗಳೂರು: ರಾಜ್ಯ ಸರ್ಕಾರ ನೂತನ ತಂತ್ರಾಂಶ ಇ-ಸಹಮತಿಯನ್ನು ಸಿದ್ಧಪಡಿಸಿದೆ. ಇ-ಸಹಮತಿಗೆ ಮಾರ್ಗಸೂಚಿ ಪ್ರಕಟವಾಗಿದ್ದು, ಇನ್ನು ಮುಂದೆ ಜನರ ದಾಖಲೆಗಳ ಮಾಹಿತಿ ಡಿಜಿಟಲೀಕರಣ ಮಾಡಲಾಗುವುದು. ದಾಖಲೆಗಳನ್ನು ಕಂಪನಿಗಳು ವೇರಿಫೈ ಮಾಡಲು ಇ-ಸಹಮತಿ ಆ್ಯಪ್ ಬಳಕೆ ಮಾಡಲಾಗುವುದು. ಜನರ ಅನುಮತಿ‌ ಮೇರೆಗೆ ಹಲವು ಇಲಾಖೆಗಳ ದಾಖಲೆ ವರ್ಗಾವಣೆ ಮಾಡಲಾಗುವುದು.

ಶಿಕ್ಷಣ ಸಂಸ್ಥೆ, ಪೊಲೀಸ್, ಸಾರಿಗೆ ಇಲಾಖೆಗಳ ದಾಖಲೆಗಳು ಇ- ಸಹಮತಿಯಲ್ಲಿ ಲಭ್ಯವಾಗಲಿವೆ. ಕೆಲವೇ‌ ದಿನಗಳಲ್ಲಿ‌ ಸಿಎಂ ಬಸವರಾಜ ಬೊಮ್ಮಾಯಿ‌ಯವರಿಂದ ಇ-ಸಹಮತಿ ಆ್ಯಪ್ ಉದ್ಘಾಟನೆಯಾಗಲಿದೆ ಎಂದು ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಪರ ಕಾರ್ಯದರ್ಶಿ ರಾಜೀವ್ ಚಾವ್ಲಾ ಹೇಳಿಕೆ ನೀಡಿದ್ದಾರೆ.

ನಮ್ಮ ಇಲಾಖೆ ಇ-ಸಹಮತಿಗೆ ಮಾರ್ಗಸೂಚಿ ಪ್ರಕಟಿಸಿದೆ. ಇನ್ನು ಮುಂದೆ ಜನರು ತಮ್ಮ ದಾಖಲೆಗಳನ್ನು ಸುಲಭವಾಗಿ ವರ್ಗಾಯಿಸಬಹುದು. ಈ ದಾಖಲೆಯನ್ನು ಸಂಸ್ಥೆ ಅಥವಾ ಕಂಪನಿಗಳು ಸಂಬಂಧಪಟ್ಟ ಇಲಾಖೆಯಿಂದ ಧೃಡೀಕರಣಗೊಳಿಸಬಹುದು. ಹಲವಾರು ಇಲಾಖೆಗಳು, ಸಂಸ್ಥೆಗಳು, ಕಂಪನಿಗಳು ಇ-ಸಹಮತಿಯಡಿ ಬರಲಿವೆ. ಇ-ಸಹಮತಿ ವೇದಿಕೆಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೂ ಈ ವೇದಿಕೆಯನ್ನು ವಿಸ್ತರಿಸುವುದಾಗಿ ಹೇಳಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ನಮ್ಮ ಇಲಾಖೆಯನ್ನು ಸಂಪರ್ಕಿಸಿದ್ದು ಅಳವಡಿಸಿಕೊಳ್ಳಲು ಆಸಕ್ತಿ ತೋರಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರದ ತಂತ್ರಾಂಶದಲ್ಲಿ ಎಡವಟ್ಟು; ಲಸಿಕೆ ಪಡೆಯದಿದ್ದರೂ ಸಿಗುತ್ತಿದೆ ಲಸಿಕೆ ಪಡೆದ ಸರ್ಟಿಫಿಕೆಟ್

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣ: ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಹಿನ್ನಡೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ