ನಾಲ್ವರು ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ
ಕರ್ನಾಟಕ ಸರಕಾರ ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಇದುವರೆಗೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ.
ಬೆಂಗಳೂರು: ಕರ್ನಾಟಕ ಸರಕಾರ ಕೆಲವು ಹಿರಿಯ ಐಎಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಇದುವರೆಗೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಬಡ್ತಿ ನೀಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಗೌರವ ಗುಪ್ತಾ ಅವರನ್ನು ಅದೇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪ್ರಮೋಟ್ ಮಾಡಲಾಗಿದೆ.
ಹಾಗೆಯೇ, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿ ಕುಮಾರ್ ನಾಯಕ್ ಅವರನ್ನು ಒಂದು ದಿನದ ಮಟ್ಟಿಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದ್ದು ನಂತರ ಅವರು ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವವಹಿಸಲಿದ್ದಾರೆ.
ಕೇಂದ್ರದ ವಾರ್ತಾ ಮತ್ತು ಪ್ರಚಾರ ಇಲಾಖೆಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಎರವಲು ಸೇವೆಯಲ್ಲಿರುವ ಅತುಲ್ ಕುಮಾರ್ ತಿವಾರಿ ಅವರಿಗೆ ಜನವರಿ 1, 2021ರಿಂದ ಅನ್ವಯವಾಗುವಂತೆ ಉನ್ನತ ವೇತನ ಶ್ರೇಣಿಗೆ ಬಡ್ತಿ ನೀಡಲಾಗಿದೆ.
ವಿವಾದಿತ ಹಿರಿಯ IPS ಅಧಿಕಾರಿಗಳ ವರ್ಗಾವಣೆ: ಡಿ. ರೂಪಾ ಮತ್ತು ಹೇಮಂತ್ ನಿಂಬಾಳ್ಕರ್ ಎತ್ತಂಗಡಿ
Published On - 10:07 pm, Thu, 31 December 20