AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ನ ಆದೇಶಕ್ಕೆ ಮಣಿದ ಸರ್ಕಾರ: ಐಪಿಎಸ್​ ಅಧಿಕಾರಿ ರೂಪಾಗೆ ಮುಂಬಡ್ತಿ

ಕರ್ನಾಟಕ ಸರ್ಕಾರವು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಬಡ್ತಿ ನೀಡಿದೆ. ಹೈಕೋರ್ಟ್‌ನ ನಿರ್ದೇಶನದ ನಂತರ ಈ ಆದೇಶ ಹೊರಡಿಸಲಾಗಿದೆ. ರೂಪಾ ಅವರು ಬಡ್ತಿಗಾಗಿ ಕಳೆದ ತಿಂಗಳು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶಕ್ಕೆ ಮಣಿದ ಸರ್ಕಾರ ಹಿರಿಯ ಐಪಿಎಸ್​ ಅಧಿಕಾರಿ ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿದೆ.

ಹೈಕೋರ್ಟ್​ನ ಆದೇಶಕ್ಕೆ ಮಣಿದ ಸರ್ಕಾರ: ಐಪಿಎಸ್​ ಅಧಿಕಾರಿ ರೂಪಾಗೆ ಮುಂಬಡ್ತಿ
ಐಪಿಎಸ್​ ಅಧಿಕಾರಿ ಡಿ ರೂಪಾ
ವಿವೇಕ ಬಿರಾದಾರ
|

Updated on:May 31, 2025 | 8:38 PM

Share

ಬೆಂಗಳೂರು, ಮೇ 31: ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್​ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್ (D. Roopa Moudgil)​ ಅವರಿಗೆ ರಾಜ್ಯ ಸರ್ಕಾರ (Karnataka Government) ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. 2000ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿ, ಈಗ ಇರುವ ಹುದ್ದೆಯಲ್ಲೇ ಮುಂದುವರೆಸಿದೆ.

ಮುಂಬಡ್ತಿ ಸಂಬಂಧ ಡಿ. ರೂಪಾ ಅವರು ಏಪ್ರಿಲ್ 25 ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, “ಮುಂಬಡ್ತಿ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸುವಂತೆ ರೂಪಾ ಅವರಿಗೆ ಸೂಚಿಸಿತ್ತು.​ ಇದೇ ವೇಳೆ, ಮನವಿ ಸಂಬಂಧ ಸರ್ಕಾರವು ಎಂಟು ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು.

ಇದನ್ನೂ ಓದಿ: IPS ಅಧಿಕಾರಿಗಳ ಕಿತ್ತಾಟ: ವರ್ತಿಕಾ ವರ್ಗಾವಣೆ ಬೆನ್ನಲ್ಲೇ ರೂಪಾ ಮೌದ್ಗಿಲ್ ಎತ್ತಂಗಡಿ

ಇದನ್ನೂ ಓದಿ
Image
ಐಪಿಎಸ್​ ಡಿ ರೂಪಾ ವಿರುದ್ಧ ದೂರು ನೀಡಿದ್ದ ಡಿಐಜಿ ವರ್ತಿಕಾ ವರ್ಗಾವಣೆ
Image
ಐಎಎಸ್​ ವರ್ಸಸ್ ಐಪಿಎಸ್​: ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್
Image
One Minute Apology ಪುಸ್ತಕ ಓದುವಂತೆ ರೂಪಾ-ರೋಹಿಣಿಗೆ ಕೋರ್ಟ್​ ಸಲಹೆ
Image
ಜಡ್ಜ್​ ಮನವಿಗೂ ಬಗ್ಗಲಿಲ್ಲ:ಕೋರ್ಟ್​ನಲ್ಲಿ ಸಿಂಧೂರಿ-ರೂಪ ಪ್ರತಿಷ್ಠೆ ಜಿದ್ದು

ಹೈಕೋರ್ಟ್​ನ ಗಡುವಿಗೆ ಮಣಿದ ಸರ್ಕಾರ ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.ಆದರೆ, ಪೊಲೀಸ್ ಇಲಾಖೆಗೆ ಸಂಬಂಧಿಸದ ರೇಷ್ಮೇ ಇಲಾಖೆಯ ಹುದ್ದೆಯಲ್ಲಿಯೇ ಹಿರಿಯ ಐಪಿಎಸ್​ ಅಧಿಕಾರಿಯನ್ನು ಮುಂದುವರೆಸಿದ್ದನ್ನು ನೋಡಿದರೇ ಸರ್ಕಾರದ ನಿರ್ಧಾರದ ಬಗ್ಗೆ ಅನೇಕ ಪ್ರಶ್ನೆಗಳು ಉದ್ಭವಿಸುತ್ತವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 pm, Sat, 31 May 25

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್