AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ ಮೀಸಲಾತಿ: ಮತ್ತೆ ರಾಜಭವನದ ಕದ ತಟ್ಟಿದ ಸರ್ಕಾರ

ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಕರ್ನಾಟಕ ಸರ್ಕಾರವು ರಾಜ್ಯಪಾಲರಿಗೆ ಮರುಸಲ್ಲಿಸಿದೆ. ಮೊದಲ ಬಾರಿಗೆ ರಾಜ್ಯಪಾಲರು ಸ್ಪಷ್ಟೀಕರಣ ಕೋರಿ ಮಸೂದೆಯನ್ನು ಅನುಮೋದಿಸಿರಲಿಲ್ಲ. ಈಗ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಲಾಗಿದೆ. ವಿರೋಧ ಪಕ್ಷಗಳು ಈ ಮಸೂದೆಯನ್ನು ಅಸಂವಿಧಾನಿಕ ಎಂದು ಟೀಕಿಸಿವೆ.

ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ ಮೀಸಲಾತಿ: ಮತ್ತೆ ರಾಜಭವನದ ಕದ ತಟ್ಟಿದ ಸರ್ಕಾರ
ಸಿದ್ದರಾಮಯ್ಯ, ಥವಾರ್​ ಚಂದ್​ ಗೆಹ್ಲೋಟ್​
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:May 27, 2025 | 3:10 PM

Share

ಬೆಂಗಳೂರು, ಮೇ 27: ಮುಸ್ಲಿಂ (Muslim) ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಶೇ 4 ರಷ್ಟು ಮೀಸಲಾತಿ (4% Reservation to Muslims) ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ತಿದ್ದುಪಡಿ ಮಸೂದೆಯನ್ನು ಅನುಮೋದಿಸುವಂತೆ ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರ ಮೊರೆ ಹೋಗಿದೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರು ಈ ಹಿಂದೆ ರಾಜ್ಯ ಸರ್ಕಾರದ ಈ ವಿಧೇಯಕಕ್ಕೆ ಅನುಮೋದನೆ ನೀಡಿರಲಿಲ್ಲ. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಜೊತೆಗೆ, ಮಸೂದೆ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು.

ಸ್ಪಷ್ಟನೆ ಕೇಳಿದ್ದ ರಾಜ್ಯಪಾಲರು

ಈ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಅಂಗೀಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಅನುಮೋದಿಸದೆ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಇದೀಗ, ರಾಜ್ಯ ಸರ್ಕಾರ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ರಾಜ್ಯಪಾಲರಿಗೆ ಮತ್ತೆ ವಿಧೇಯಕ ಕಳುಹಿಸಿದ್ದು, ಅನುಮೋದಿಸುವಂತೆ ಮನವಿ ಮಾಡಿದೆ.

ರಾಜ್ಯಪಾಲರು ಕೇಳಿದ್ದ ಸ್ಪಷ್ಟನೆ ಏನು?

“ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಮುಸ್ಲಿಮರನ್ನು ಮಾತ್ರ ಒಳಗೊಂಡ ಹಿಂದುಳಿದ ವರ್ಗ ವರ್ಗ-II(B)ಗೆ 4% ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಿತ ತಿದ್ದುಪಡಿಯನ್ನು ಧರ್ಮದ ಆಧಾರದ ಮೇಲೆ ಸಮುದಾಯಕ್ಕೆ ನೀಡಿದ ಮೀಸಲಾತಿ ಎಂದು ಅರ್ಥೈಸಿಕೊಳ್ಳಬಹುದು” ಎಂದು ರಾಜಭವನದ ಹೇಳಿಕೆಯಲ್ಲಿ ತಿಳಿಸಲಾಗಿತ್ತು. 15 ಮತ್ತು 16ನೇ ವಿಧಿಗಳು ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನು ನಿಷೇಧಿಸುತ್ತವೆ. ಯಾವುದೇ ದೃಢೀಕರಣ ಕ್ರಮವು ಸಾಮಾಜಿಕ-ಆರ್ಥಿಕ ಅಂಶಗಳನ್ನು ಆಧರಿಸಿರಬೇಕು” ಎಂದು ಒತ್ತಿಹೇಳುವ ಸುಪ್ರೀಂ ಕೋರ್ಟ್ ತೀರ್ಪನ್ನು ರಾಜ್ಯಪಾಲರು ಉಲ್ಲೇಖಿಸಿದ್ದರು.

ಇದನ್ನೂ ಓದಿ
Image
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ: ವಿಧೇಯಕದಲ್ಲೇನಿದೆ?
Image
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
Image
ಸದ್ದಿಲ್ಲದೇ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಘೋಷಿಸಿದ ಸಿದ್ದರಾಮಯ್ಯ!
Image
ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ

ಇದನ್ನೂ ಓದಿ: ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಉದ್ದೇಶವನ್ನು ಹೊಂದಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ರಾಜ್ಯದ ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಮಸೂದೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದವು. ಅಲ್ಪಸಂಖ್ಯಾತರ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಮಸೂದೆಯನ್ನು ವಿರೋಧಿಸಿ ಎರಡೂ ಪಕ್ಷಗಳು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Tue, 27 May 25

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು