AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ’: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ

Kasturi Rangan Report: ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಪಶ್ಚಿಮಘಟ್ಟ ಭಾಗದ ಜನರ ವಿರೋಧವಿದೆ ಎಂದು ಕೇಂದ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

‘ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರದ ವಿರೋಧವಿದೆ’: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 04, 2021 | 9:27 PM

Share

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಆ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಆ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. ಅವರು ಇಂದು ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯದ ಈ ನಿಲುವನ್ನು ಸ್ಪಷ್ಟಪಡಿಸಿದರು. ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂಬುದನ್ನು ಸಿಎಂ ಬೊಮ್ಮಾಯಿ ಸಭೆಯ ಗಮನಕ್ಕೆ ತಂದರು.

‘‘ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಆ ಭಾಗದ ಜನರು ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ. ಈ ಮೂಲಕ ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ. ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ’’ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ತಿಳಿಸಿದರು. ಸಚಿವರಾದ ಅರಗ ಜ್ಞಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಇತರರು ವರ್ಚುವಲ್ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:

Covid 19 Karnataka Update: ಒಮಿಕ್ರಾನ್ ಆತಂಕದ ನಡುವೆ ಕರ್ನಾಟಕದಲ್ಲಿ 397 ಮಂದಿಗೆ ಕೊವಿಡ್ ಸೋಂಕು, ನಾಲ್ವರು ಸಾವು

Omicron in India: ಭಾರತದಲ್ಲಿ ಈಗಾಗಲೇ ಹರಡಿದೆ ಒಮಿಕ್ರಾನ್, ಆದರೆ ನಾವು ಹೆದರಬೇಕಿಲ್ಲ: ವಿಜ್ಞಾನಿ ಡಾ ರಾಕೇಶ್ ಮಿಶ್ರಾ

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ