ಕರ್ನಾಟಕದಲ್ಲಿ ಅ. 25ರಿಂದ 1ರಿಂದ 5ನೇ ತರಗತಿ ಆರಂಭ; ಶಾಲೆ ತೆರೆಯಲು ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
Karnataka School Reopening: ಅ. 25ರಿಂದ 1ರಿಂದ 5ನೇ ತರಗತಿಗಳು ಆರಂಭವಾಗಲಿವೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಿಕ್ಷಕರು, ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಶಿಕ್ಷಕರು 2 ಡೋಸ್ ಲಸಿಕೆ ಪಡೆದಿರಬೇಕು ಮತ್ತು 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯವಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಅಕ್ಟೋಬರ್ 25ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭವಾಗಲಿವೆ. ಶಾಲೆ ಆರಂಭಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರದಿಂದ ಇಂದು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಅ. 25ರಿಂದ ಅ. 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆಯಲಿವೆ. ನವೆಂಬರ್ 2ರಿಂದ ಪೂರ್ಣಾವಧಿ ತರಗತಿಗಳು ನಡೆಯಲಿವೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿರಲಿದೆ. ಶಿಕ್ಷಕರು, ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಶಿಕ್ಷಕರು 2 ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಹಾಗೇ, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್ಶೀಲ್ಡ್ ಕಡ್ಡಾಯವಾಗಿದೆ.
ಅ. 30ರವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನ. 2ರಿಂದ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಮಾಡಲಾಗುವುದು. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ ತರಬೇಕು. ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇರಲಿದೆ. ಕೊಠಡಿಯಲ್ಲಿ 15ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬಹುದು. ಶಾಲೆಯ ಗೇಟ್ ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು.
1ರಿಂದ 5ನೇ ತರಗತಿಯವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. ಮಕ್ಕಳನ್ನ ಶಾಲೆಗೆ ಕಳಿಸಲು ಪೋಷಕರ ಅನುಮತಿ ಕಡ್ಡಾಯವಾಗಿದೆ. ಶಾಲೆಗೆ ಬರುವ ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ತರಗತಿಯಲ್ಲಿ ಶೇ. 50ರಷ್ಟು ಮಕ್ಕಳಿಗೆ ಮಾತ್ರ ಅವಕಾಶ ನೀಡಿ ಸದ್ಯ ಶಾಲೆ ತೆರೆಯಲಾಗುವುದು. ತರಗತಿಯಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಮಕ್ಕಳಲ್ಲಿ ಕೊರೊನಾ ಕಂಡುಬಂದರೆ ಶಾಲೆ ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ LKG-UKG ಆರಂಭವಿಲ್ಲ. ಅ. 25ರಿಂದ ಅ. 30ರವರೆಗೆ ಅರ್ಧ ದಿನ ಮಾತ್ರ ತರಗತಿ ನಡೆಸಾಗುವುದು. ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಮಾತ್ರ ತರಗತಿ ನಡೆಯಲಿದೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿ ನಡೆಯಲಿದೆ. ನವೆಂಬರ್ 2ರಿಂದ ಪೂರ್ಣಾವಧಿ ತರಗತಿ ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯಲಿವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿ ಇರಲಿವೆ ಎಂದು ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದೆ.
ಇದನ್ನೂ ಓದಿ: School Reopen: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ
China Covid Cases: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಹೆಚ್ಚಳ; ವಿಮಾನ ಸಂಚಾರ ಸ್ಥಗಿತ, ಶಾಲೆಗಳು ಬಂದ್
Published On - 8:00 pm, Thu, 21 October 21